ಕನ್ನಡದಲ್ಲಿ ಟ್ವೀಟ್‌ ಮಾಡಿ ಕರ್ನಾಟಕ ರಾಜ್ಯೋತ್ಸವ ಶುಭಾಶಯ ತಿಳಿಸಿದ ಮೋದಿ

ಬೆಂಗಳೂರು, ನವೆಂಬರ್‌ 01: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ನಾಡಹಬ್ಬ ಕರ್ನಾಟಕ ರಾಜ್ಯೋತ್ಸವದ ಆಚರಣೆ ಸಂಭ್ರಮ ಕಳೆಕಟ್ಟಿದೆ.

ಕರ್ನಾಟಕ ರಾಜ್ಯದ ಜನತೆ ಪ್ರತಿ ವರ್ಷವು ನವೆಂಬರ್ 1 ರಂದು ವಿಶೇಷವಾಗಿ ಕನ್ನಡ ರಾಜ್ಯೋತ್ಸವನ್ನು ರಾಜ್ಯದ ಪ್ರತಿ ಗ್ರಾಮದಲ್ಲೂ, ಪ್ರತಿ ಶಾಲೆ, ಕಾಲೇಜು, ಕಚೇರಿ, ಕಂಪನಿಗಳಲ್ಲಿ ಆಚರಣೆ ಮಾಡುತ್ತಾರೆ. ಈ ದಿನ ನಾಡಿನ ಸಮಸ್ತ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.

karnataka-rajyotsava-celebrations

ಹೌದು, ಈ ಕುರೊತು ಕನ್ನಡದಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ.

ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಮೋದಿ ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ರಾಜಕೀಯ ಗಣ್ಯರು!

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ನಮ್ಮ ಕನ್ನಡ ನಾಡು ಸಿರಿ, ಸಂಸ್ಕೃತಿ ಬೀಡು. ವೈಭವದ ಇತಿಹಾಸವನ್ನು ಅದು ಹೊಂದಿದೆ. ಕಲೆ, ಸಾಹಿತ್ಯಗಳ ತವರೂರಾಗಿದೆ. ಈ ಪುಣ್ಯ ನೆಲದಲ್ಲಿ ಜನಿಸಿದ ನಾವೆಲ್ಲರೂ ಧನ್ಯರು. ಕನ್ನಡ ರಾಜ್ಯೋತ್ಸವವು ಒಂದು ದಿನದ ಹಬ್ಬವಾಗದೆ ಬದುಕಿನುದ್ದಕ್ಕೂ ಕನ್ನಡ ಪ್ರೀತಿ ಮೆರೆಯಲು ಪ್ರೇರಣೆ ನೀಡಲಿ ಎಂದು ಹಾರೈಸಿದ್ದಾರೆ.

ಇನ್ನೂ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡು ಸಹ ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನ ತಿಳಿಸಿದ್ದಾರೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷ ಪೂರೈಸಿದ್ದು, ಕನ್ನಡದ ಅಸ್ಮಿತೆಯ ಉಳಿವಿಗಾಗಿ ಹಾಗೂ ಕನ್ನಡಿಗರ ಏಳಿಗೆಗಾಗಿ, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂದು ಹೇಳಿದ್ಧಾರೆ.

ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಸಹ ಶುಭಕೋರಿದ್ದು, ನಾಡಿನ ಹಾಗೂ ಜಗತ್ತಿನೆಲ್ಲೆಡೆ ನೆಲೆಸಿರುವ ಸಮಸ್ತ ಕನ್ನಡ ಬಂಧುಗಳಿಗೆ ೬೮ನೇ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಹಾಗೆಯೇ, 'ಕರ್ನಾಟಕ'ವೆಂದು ಹೆಸರಾಗಿ ಇಂದಿಗೆ 50 ವರ್ಷ.

ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆಗಳನ್ನು ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರೈಸೋಣ. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+