ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ: ನಾಡಿನ ಸಮಸ್ತ ಜನರಿಗೆ ಶುಭಾಶಯ ತಿಳಿಸಿದ ರಾಜಕೀಯ ಗಣ್ಯರು
ರಾಜ್ಯದೆಲ್ಲೆಡೆ ನಾಡಹಬ್ಬ ಕರ್ನಾಟಕ ರಾಜ್ಯೋತ್ಸವದ ಆಚರಣೆ ಸಂಭ್ರಮ ಕಳೆಕಟ್ಟಿದೆ. ಕರ್ನಾಟಕ ರಾಜ್ಯದ ಜನತೆ ಪ್ರತಿ ವರ್ಷವು ಸಹ ನವೆಂಬರ್ 1 ರಂದು ವಿಶೇಷವಾಗಿ ಕನ್ನಡ ರಾಜ್ಯೋತ್ಸವನ್ನು ರಾಜ್ಯದ ಪ್ರತಿ ಗ್ರಾಮದಲ್ಲೂ, ಪ್ರತಿ ಶಾಲೆ, ಕಾಲೇಜು, ಕಚೇರಿ, ಕಂಪನಿಗಳಲ್ಲಿ ಆಚರಣೆ ಮಾಡುತ್ತಾರೆ. ಈ ದಿನ ನಾಡಿನ ಸಮಸ್ತ ಜನರಿಗೆ ರಾಜಕೀಯ ಗಣ್ಯರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ''ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು.

ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ. 1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ ೫೦ ವಸಂತಗಳು ಸಂದಿವೆ.
ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
— Siddaramaiah (@siddaramaiah) November 1, 2023
ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ… pic.twitter.com/ES4MqJU6CJ
ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು'' ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ.
ನಾಡಿನ ಹಾಗೂ ಜಗತ್ತಿನೆಲ್ಲೆಡೆ ನೆಲೆಸಿರುವ ಸಮಸ್ತ ಕನ್ನಡ ಬಂಧುಗಳಿಗೆ ೬೮ನೇ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಹಾಗೆಯೇ, 'ಕರ್ನಾಟಕ'ವೆಂದು ಹೆಸರಾಗಿ ಇಂದಿಗೆ ೫೦ ವರ್ಷ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 1, 2023
ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆಗಳನ್ನು ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು… pic.twitter.com/uG4EGaIQ9X
ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಕರ್ನಾಟಕ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ''ನಾಡಿನ ಹಾಗೂ ಜಗತ್ತಿನೆಲ್ಲೆಡೆ ನೆಲೆಸಿರುವ ಸಮಸ್ತ ಕನ್ನಡ ಬಂಧುಗಳಿಗೆ 68ನೇ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಹಾಗೆಯೇ, 'ಕರ್ನಾಟಕ'ವೆಂದು ಹೆಸರಾಗಿ ಇಂದಿಗೆ 50 ವರ್ಷ.
ನಾಡಿನ ಏಕೀಕರಣಕ್ಕೆ ಹೋರಾಡಿದ ಎಲ್ಲ ಮಹನೀಯರ ಸಂಸ್ಮರಣೆಗಳ ಜೊತೆಗೆ ಕನ್ನಡ ಉಳಿಸುವ, ಬೆಳೆಸುವ ದೃಢಸಂಕಲ್ಪ ಸದಾ ನಮ್ಮದಾಗಿರಲಿ. ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಅಭಿಮಾನಪೂರ್ವಕ ಶುಭಾಶಯಗಳು.#ಕನ್ನಡ_ರಾಜ್ಯೋತ್ಸವ #ಕರ್ನಾಟಕರಾಜ್ಯೋತ್ಸವ pic.twitter.com/FuzaIYDoHB
— B.S.Yediyurappa (@BSYBJP) November 1, 2023
ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆಗಳನ್ನು ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರೈಸೋಣ. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಆಶಿಸುತ್ತೇನೆ. ಜೈ ಕರ್ನಾಟಕ.. ಹಾಲು ಮೊಟ್ಟೆ ಕೊಡ್ತೀವಿ ಅಂದ್ರೂ ಇಲ್ಲಿ ಕನ್ನಡ ಶಾಲೆಗಳತ್ತ ನೋಡುವವರೇ ಇಲ್ಲ.....'' ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ.
ವಿಶ್ವದ ಸಮಸ್ತ ಕನ್ನಡಿಗರಿಗೆ 68 ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಜೈ ಕರ್ನಾಟಕ..!#ಕನ್ನಡರಾಜ್ಯೋತ್ಸವ #ರಾಜ್ಯೋತ್ಸವ_ರಾಷ್ಟ್ರೋತ್ಸವ pic.twitter.com/53Kmr111rk
— Basavaraj S Bommai (@BSBommai) November 1, 2023
ಜೊತೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೂಡ ಕರ್ನಾಟಕ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. 'ನಾಡಿನ ಏಕೀಕರಣಕ್ಕೆ ಹೋರಾಡಿದ ಎಲ್ಲ ಮಹನೀಯರ ಸಂಸ್ಮರಣೆಗಳ ಜೊತೆಗೆ ಕನ್ನಡ ಉಳಿಸುವ, ಬೆಳೆಸುವ ದೃಢಸಂಕಲ್ಪ ಸದಾ ನಮ್ಮದಾಗಿರಲಿ. ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಅಭಿಮಾನಪೂರ್ವಕ ಶುಭಾಶಯಗಳು' ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ.
ಹಾಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಕರ್ನಾಟಕ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. 'ವಿಶ್ವದ ಸಮಸ್ತ ಕನ್ನಡಿಗರಿಗೆ 68 ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಜೈ ಕರ್ನಾಟಕ..' ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ.
ಕನ್ನಡ ರಾಜ್ಯೋತ್ಸವ
— Jagadish Shettar (@JagadishShettar) November 1, 2023
ಎಲ್ಲಾದರೂ ಇರು ಎಂತಾದರು ಇರು
ಎಂದೆಂದಿಗೂ ನೀ ಕನ್ನಡವಾಗಿರು
ಕನ್ನಡವೇ ಸತ್ಯ, ಕನ್ನಡವೇ ನಿತ್ಯ
ಸಮಸ್ತ ನಾಡಿನ ಜನತೆಗೆ
ಕನ್ನಡ ರಾಜ್ಯೋತ್ಸವದ ಶುಭಾಶಯಗಳು.#ಕನ್ನಡರಾಜ್ಯೋತ್ಸವ pic.twitter.com/VRWlNATXqE
ಮಾಜಿ ಉಪಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕೂಡ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.
'ಕನ್ನಡ ರಾಜ್ಯೋತ್ಸವ
ಎಲ್ಲಾದರೂ ಇರು ಎಂತಾದರು ಇರು
ಎಂದೆಂದಿಗೂ ನೀ ಕನ್ನಡವಾಗಿರು
ಕನ್ನಡವೇ ಸತ್ಯ, ಕನ್ನಡವೇ ನಿತ್ಯ
ಸಮಸ್ತ ನಾಡಿನ ಜನತೆಗೆ
ಕನ್ನಡ ರಾಜ್ಯೋತ್ಸವದ ಶುಭಾಶಯಗಳು' ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications