ಶೀಘ್ರ ಎಲ್ಲರಿಗೂ ಕೊರೊನಾ ಲಸಿಕೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಅಭಿಯಾನ
ಕರ್ನಾಟಕದ ಪ್ರತಿಯೊಬ್ಬ ಪ್ರಜೆಗೂ ಸೆಪ್ಟೆಂಬರ್ ತಿಂಗಳೊಳಗೆ ಎರಡೂ ಡೋಸ್ ಲಸಿಕೆಗಳನ್ನು ನೀಡಿ, ಮೂರನೇ ಕೋವಿಡ್ ಅಲೆಯಿಂದ ಕರ್ನಾಟಕವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ನಾಳೆ (ಜೂ.10) ಬೆಳಿಗ್ಗೆ 9.10 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ.
ಕೋವಿಡ್ ಎರಡನೇ ಅಲೆಯಲ್ಲಿ ಸರ್ಕಾರದ ಅಧಿಕೃತ ಅಂಕಿಅಂಶಗಳ ಪ್ರಕಾರವೇ ಮೂವತ್ತು ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ, ವಾಸ್ತವದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ ಇದಕ್ಕಿಂತ ಹಲವು ಪಟ್ಟು ಹೆಚ್ಚಾಗಿದೆ. ಸಾವಿರಾರು ಮಕ್ಕಳು ಅನಾಥರಾಗಿದ್ದಾರೆ. ಮೂರನೇ ಅಲೆಯನ್ನು ತಡೆದುಕೊಳ್ಳುವ ಶಕ್ತಿ ನಮಗಿಲ್ಲ, ಹೀಗಾಗಿ ತ್ವರಿತಗತಿಯಲ್ಲಿ ಲಸಿಕೆ ಕೊಡುವ ಕಾರ್ಯ ನಡೆಯಬೇಕು ಎಂದು ವೇದಿಕೆ ಕಾರ್ಯಕರ್ತರು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳನ್ನು ಒತ್ತಾಯಿಸಲಿದ್ದಾರೆ. ಈ ಕುರಿತು ರಾಜ್ಯಾಧ್ಯಕ್ಷ ಟಿಎ ನಾರಾಯಣಗೌಡ ಮಾಹಿತಿ ನೀಡಿದ್ದಾರೆ.

ಹಕ್ಕೊತ್ತಾಯಗಳು
1. ಉಚಿತ ಲಸಿಕೆ
ರಾಜ್ಯದ ಎಲ್ಲ ನಾಗರಿಕರಿಗೂ ಬಡವ-ಶ್ರೀಮಂತನೆಂಬ ಭೇದವಿಲ್ಲದೆ ಉಚಿತವಾಗಿಯೇ ಲಸಿಕೆ ಕೊಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣಕ್ಕೆ ಸಿಗುವ ಲಸಿಕೆಯಿಂದಾಗಿ ಅಸಮಾನತೆ ಸೃಷ್ಟಿಯಾಗುತ್ತದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿಯೇ ಲಸಿಕೆ ನೀಡಬೇಕು. ಹಲವಾರು ದೇಶಗಳಲ್ಲಿ ಯಾವ ರೀತಿ ಒಂದೇ ಒಂದು ಲಸಿಕೆಯನ್ನು ಮಾರಾಟಕ್ಕೆ ಇಟ್ಟಿಲ್ಲವೋ ಹಾಗೆಯೇ ಭಾರತದಲ್ಲೂ ಸಹ ಲಸಿಕೆ ಮಾರಾಟದ ವಿಷಯವಾಗಬಾರದು. ಖಾಸಗಿ ಆಸ್ಪತ್ರೆ, ಸಂಸ್ಥೆಗಳಿಗೆ ನೀಡಿರುವ ಶೇ 25 ರಷ್ಟು ವ್ಯಾಕ್ಸಿನ್ ಕೊಳ್ಳುವ ಅವಕಾಶವನ್ನು ರದ್ದುಗೊಳಿಸಿ, ನೂರಕ್ಕೆ ನೂರು ಲಸಿಕೆಗಳು ಉಚಿತವಾಗಿಯೇ, ಸರ್ಕಾರದಿಂದಲೇ ನೀಡಬೇಕು.
2. ಕಾಲಮಿತಿಯೊಳಗೆ ಲಸಿಕೆ
ಕೋವಿಡ್ ಮೂರನೇ ಅಲೆ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಬಹುದು ಎಂದು ತಜ್ಞರು ಅಭಿಪ್ರಾಯಪಡುತ್ತಿರುವುದರಿಂದ ಸೆಪ್ಟೆಂಬರ್ ಅಂತ್ಯದೊಳಗೆ ಎರಡೂ ಡೋಸ್ ಲಸಿಕೆಗಳನ್ನು ಕರ್ನಾಟಕದ ಸಮಸ್ತ ಜನತೆಗೆ ನೀಡಬೇಕು. ಜೂನ್ ಅಂತ್ಯದೊಳಗೆ ಮೊದಲನೇ ಡೋಸ್ ನೀಡಬೇಕು. ಸೆಪ್ಟೆಂಬರ್ ಅಂತ್ಯದೊಳಗೆ ಎರಡನೇ ಡೋಸ್ ನೀಡಿ, ಲಸಿಕಾ ಅಭಿಯಾನವನ್ನು ಪೂರ್ಣಗೊಳಿಸಬೇಕು. ಲಸಿಕೆ ಇಲ್ಲದೆ ಜನರು ಸಾಯುವಂಥ ಸ್ಥಿತಿಯನ್ನು ನಿರ್ಮಾಣ ಮಾಡಬಾರದು.
3. ಮನೆಮನೆಗೆ ಲಸಿಕೆ
ಸರ್ಕಾರ ಕೂಡಲೇ ಚುನಾವಣೆ ಸಂದರ್ಭದ ಮತದಾನ ಬೂತ್ ಗಳ ಮಾದರಿಯಲ್ಲಿ ಕೋವಿಡ್ ಲಸಿಕೆ ಬೂತ್ ಸ್ಥಾಪಿಸಬೇಕು. ನೂಕುನುಗ್ಗಲು, ಜನದಟ್ಟಣೆ ಆಗದಂತೆ ಎಲ್ಲ ನಾಗರಿಕರು ಸುಲಭವಾಗಿ ವ್ಯಾಕ್ಸಿನ್ ಪಡೆಯುವಂಥ ಸ್ಥಿತಿ ನಿರ್ಮಾಣ ಮಾಡಬೇಕು. ಸಾಧ್ಯವಾದರೆ ಮನೆಮನೆಗೂ ತೆರಳಿ ಲಸಿಕೆ ನೀಡುವಂಥ ವ್ಯವಸ್ಥೆ ಜಾರಿಗೊಳಿಸಬೇಕು. ಲಸಿಕೆ ನೀಡಿಕೆಗೆ ಸರ್ಕಾರ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಬೇಕು. ಸ್ಮಾರ್ಟ್ ಫೋನ್ ಇಲ್ಲದ, ರಿಜಿಸ್ಟ್ರೇಷನ್ ಮಾಡಿಸಲು ಗೊತ್ತಾಗದ ಹಳ್ಳಿಗಾಡಿನ ಜನರ ಸಮಸ್ಯೆ ನೀಗಿಸಬೇಕು.
4. ತಾರತಮ್ಯವಿಲ್ಲದ ಲಸಿಕೆ
ಒಕ್ಕೂಟ ಸರ್ಕಾರ ಮೊದಲ ಹಂತದ ಲಸಿಕೆ ಹಂಚಿಕೆಗಳಲ್ಲಿ ಗುಜರಾತ್, ಉತ್ತರ ಪ್ರದೇಶ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದ ಲಸಿಕೆ ಹಂಚಿಕೆ ಮಾಡಿ, ದಕ್ಷಿಣದ ರಾಜ್ಯಗಳಿಗೆ ಕಡಿಮೆ ಪ್ರಮಾಣದಲ್ಲಿ ಹಂಚಿಕೆ ಮಾಡಿರುವುದು ಅಂಕಿಅಂಶಗಳಲ್ಲಿ ಬಯಲಾಗಿದೆ. ಒಕ್ಕೂಟ ಸರ್ಕಾರ ಆಕ್ಸಿಜನ್, ವೆಂಟಿಲೇಟರ್, ರೆಮ್ಡಿಸಿವಿರ್, ಆಂಫೋಟೆರಿಸಿನ್ ಬಿ ಇತ್ಯಾದಿಗಳ ಹಂಚಿಕೆ ಸಂದರ್ಭದಲ್ಲೂ ಕರ್ನಾಟಕದ ಪಾಲನ್ನು ಕಡಿಮೆ ಮಾಡಿ, ಗುಜರಾತ್ ಮತ್ತು ಉತ್ತರದ ರಾಜ್ಯಗಳಿಗೆ ಹೆಚ್ಚು ನೀಡಿದೆ. ಈ ತಾರತಮ್ಯವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜೂನ್ 21 ರಿಂದ ಒಕ್ಕೂಟ ಸರ್ಕಾರ ನೀಡುವ ಲಸಿಕೆಗಳು ವೈಜ್ಞಾನಿಕವಾಗಿ, ಜನಸಂಖ್ಯೆ ಆಧರಿಸಿ ಹಂಚಿಕೆಯಾಗಬೇಕು.
Recommended Video
ಈ ಎಲ್ಲ ಹಕ್ಕೊತ್ತಾಯಗಳನ್ನು ಮುಂದಿಟ್ಟು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯದ ಎಲ್ಲೆಡೆ ಪ್ರತಿಭಟಿಸಲಿದ್ದಾರೆ. ಈ ಸಂದರ್ಭದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಲಾಗುವುದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications