Ration Card: ರಾಜ್ಯದಲ್ಲಿ ಪಡಿತರ ಚೀಟಿ ತಿದ್ದುಪಡಿ ಪ್ರಾರಂಭ, ಇಲ್ಲಿದೆ ಬೇಕಾಗುವ ದಾಖಲೆಗಳ ವಿವರ

Ration Card: ರಾಜ್ಯ ಸರ್ಕಾರವು ಬಿಪಿಎಲ್‌ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌ ನೀಡಿತ್ತು. ಯಾರೆಲ್ಲಾ ಅರ್ಹರ ಬಳಿಯ BPL ಪಡಿತರ ಚೀಟಿಗಳು ರದ್ದಾಗಿವೆಯೋ ಅವರು ಮತ್ತೆ ಇವುಗಳನ್ನು ಮರಳಿ ಪಡೆಯಬಹುದು ಎಂದು ತಿಳಿಸಿತ್ತು. ಇದರ ಬೆನ್ನಲ್ಲೇ ಇದೀಗ ತಿದ್ದುಪಡಿಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಸಹ ಒಂದಾಗಿದೆ. ಇದರಲ್ಲಿ ಯಾವುದೇ ತಪ್ಪಿದ್ದರೂ ಸಹ ಅರ್ಜಿ ಸಲ್ಲಿಕೆ ವೇಳೆ ತಿರಸ್ಕಾರವಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಇದೀಗ ರಾಜ್ಯದಲ್ಲಿ ಮತ್ತೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ತಿದ್ದುಪಡಿ ಮಾಡಲು ಬಯಸುವವರು ಗಮನಿಸಲೇಬೇಕಾದ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

Karnataka Ration Card Correction Reopens Know Required Documents and Application Process details

ಕರ್ನಾಟಕ ರಾಜ್ಯದ ಪಡಿತರ ಚೀಟಿದಾರರಿಗೆ ತಮ್ಮ ಕಾರ್ಡ್‌ನಲ್ಲಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಸರ್ಕಾರವು ಸುವರ್ಣಾವಕಾಶ ನೀಡಿದೆ. ತಿದ್ದುಪಡಿ ಮಾಡಿಸಲು ಬಯಸುವವರು ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ಸರ್ಕಾರವು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿರುತ್ತದೆ. ಆದ್ದರಿಂದ ಪಡಿತರ ಚೀಟಿದಾರರು ಕೊನೆಯ ಕ್ಷಣದ ಗಡಿಬಿಡಿ ತಪ್ಪಿಸಲು ಕೂಡಲೇ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ತಿದ್ದುಪಡಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವುದು ಉತ್ತಮ. ರೇಷನ್ ಕಾರ್ಡ್ ತಿದ್ದುಪಡಿಗೆ ಆನ್‌ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಮಾರ್ಚ್‌ 31ರ 2027ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಏನೆಲ್ಲ ತಿದ್ದುಪಡಿ ಮಾಡಿಸಬಹುದು?

* ಹೊಸ ಸದಸ್ಯರ ಹೆಸರು ಸೇರ್ಪಡೆ
* ನ್ಯಾಯಬೆಲೆ ಅಂಗಡಿ ವಿಳಾಸ ಬದಲಾವಣೆ ಹಾಗೂ ಮೊಬೈಲ್ ಸಂಖ್ಯೆ ಜೋಡಣೆ
* ಹೆಸರು ತೆಗೆದುಹಾಕುವುದು
* ಕುಟುಂಬದ ಮುಖ್ಯಸ್ಥರ ಬದಲಾವಣೆ
* ಫೋಟೋ ಬದಲಾವಣೆ

ಪತ್ನಿ ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು

* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ

ಮಗುವಿನ ಹೆಸರು ಸೇರ್ಪಡೆಗೆ ಬೇಕಾದ ದಾಖಲೆಗಳು

* ಮಗುವಿನ ಜನನ ಪ್ರಮಾಣಪತ್ರ
* ಪೋಷಕರ ಆಧಾರ್ ಕಾರ್ಡ್

ಎಲ್ಲೆಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು?

* ಬೆಂಗಳೂರು ಒನ್
* ಗ್ರಾಮ ಒನ್
* ಕರ್ನಾಟಕ ಒನ್ ಸೇರಿದಂತೆ ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು.

ಪಡಿತರ ಚೀಟಿ ತಿದ್ದುಪಡಿ ವಿಧಾನಗಳು

* ಅಧಿಕೃತ ವೆಬ್‌ಸೈಟ್ https://ahara.kar.nic.in/home ಗೆ ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
* ತಿದ್ದುಪಡಿ ಅಥವಾ ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
* ಬಳಿಕ ಅಲ್ಲಿ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ.
* ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮಿಟ್‌ ಮಾಡಿ.
* ಅರ್ಜಿ ಸಲ್ಲಿಕೆ ವೇಳೆ ನೀವು ನೀಡಿರುವಂತಹ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ಮಾತ್ರ ನಿಮಗೆ ಅಪ್ಡೇಟ್‌ ಆಗಿರುವ ಹೊಸ ರೇಷನ್‌ ಕಾರ್ಡ್‌ ನಿಮ್ಮ ಮನೆಗೆ ಬರಲಿದೆ.

ಅರ್ಜಿ ಸಲ್ಲಿಸಿದ ನಂತರ ಸಿಗುವ ಸ್ವೀಕೃತಿ ಪತ್ರವನ್ನು ಕಡ್ಡಾಯವಾಗಿ ಸುರಕ್ಷಿತವಾಗಿ ಇಟ್ಟುಕೊಳ್ಳಿ. ಅರ್ಜಿ ಸ್ಥಿತಿಯನ್ನು ಪರಿಶೀಲಿಸಲು ಇದು ಅತ್ಯಗತ್ಯ. ಅರ್ಜಿ ಸಲ್ಲಿಸಿದ 15ರಿಂದ 30 ದಿನಗಳ ಒಳಗಾಗಿ ತಿದ್ದುಪಡಿಸ ಮಾಡಲಾದ ಹೊಸ ರೇಷನ್ ಕಾರ್ಡ್ ನಿಮ್ಮ ಕೈ ಸೇರಲಿದೆ. ತುರ್ತು ಅಗತ್ಯ ಇದ್ದರೆ ಮಾತ್ರ ಪ್ರಕ್ರಿಯೆಗಳು ಪೂರ್ಣಗೊಂಡ 7 ರಿಂದ 10 ದಿನಗಳಲ್ಲಿ ಸಿಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+