Ration Card: ರಾಜ್ಯದಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ: ಬೇಕಾಗುವ ದಾಖಲೆಗಳೇನು?
Ration Card: ರಾಜ್ಯದಲ್ಲಿ ಪಡಿತರ ಚೀಟಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದು ಬರೀ ರೇಷನ್ ಪಡೆಯಲು ಅಷ್ಟೇ ಅಲ್ಲದೆ, ಹಲವು ಸರ್ಕಾರಿ ಸೌಲಭ್ಯಗಳು ಸೇರಿದಂತೆ ಇನ್ನಿತರ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿ ಬೇಕೇ ಬೇಕಾಗುತ್ತದೆ. ಇದೀಗ ಈ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಹಾಗಾದ್ರೆ ಯಾವೆಲ್ಲಾ ದಾಖಲೆಗಳು ಬೇಕು? ನೀವು ಪಾಲಿಸಬೇಕಾದ ನಿಯಮಗಳೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ಇದೀಗ ಸದ್ಯ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್ಗಳ ರದ್ದುಪಡಿಸಿ ಎಪಿಎಲ್ಗೆ ವರ್ಗಾವಣೆ ಮಾಡುವ ಕಾರ್ಯವನ್ನು ಸರ್ಕಾರ ಮುಂದುವರೆದಿದೆ. ಒಂದೆಜ್ಜೆ ಮುಂದಿಟ್ಟಿದ್ದು, ಕೆಲವು ಅನರ್ಹರ ವಿರುದ್ಧ ದಂಡಾಸ್ತ್ರ ಪ್ರಯೋಗ ಮಾಡಲು ನಿರ್ಧಾರ ಮಾಡಿದೆ. ಈ ನಡುವೆಯೇ ಪಡಿತರ ಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಹಾಗಾದ್ರೆ ಏನೆಲ್ಲಾ ತಿದ್ದುಪಡಿ ಮಾಡಿಸಬಹುದು? ಬೇಕಾಗುವ ದಾಖಲೆಗಳೇನು? ಎನ್ನುವ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ.

ಆಹಾರ ಇಲಾಖೆ ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿಗಳನ್ನು ನೀಡುತ್ತಲಿರುತ್ತದೆ. ಹಾಗೆಯೇ ಇದೀಗ ಮತ್ತೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕಲ್ಪಿಸಿದೆ. ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಸುವುದಕ್ಕೆ ಅವಕಾಶ ನೀಡಲಾಗಿದೆ.
ಎಲ್ಲೆಲ್ಲಿ ತಿದ್ದುಪಡಿ ಮಾಡಿಸಬಹುದು?: ಬೆಂಗಳೂರು ಒನ್, ಗ್ರಾಮ ಒನ್, ಸೈಬರ್ ಸೆಂಟರ್ಗಳಲ್ಲಿ ಹೊಸ ಕಾರ್ಡ್, ತಿದ್ದಪಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಸಹ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ https://ahara.kar.nic.inಗೆ ಭೇಟಿ ನೀಡಬಹುದು.
ಏನೆಲ್ಲಾ ತಿದ್ದುಪಡಿಗೆ ಅವಕಾಶ?
* ಪೋಟೋ ಬದಲಾವಣೆ
* ಹೆಸರು ತೆಗೆದುಹಾಕುವಿಕೆ
* ನ್ಯಾಯಬೆಲೆ ಅಂಗಡಿ ಸಂಖ್ಯೆ ಬದಲಾವಣೆ
* ಹೆಸರು ತಿದ್ದುಪಡಿ
* ಕುಟುಂಬದ ಮುಖ್ಯಸ್ಥರ ಬದಲಾವಣೆ
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ಸದಸ್ಯರ ಆಧಾರ್ ಕಾರ್ಡ್
* ಸದಸ್ಯರ ಜಾತಿ ಮತ್ತು ಆದಾಯ (6 ವರ್ಷ ಮೆಲ್ಪಟ್ಟವರಿಗೆ)
* ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳಿದ್ದರೆ)
ಹೆಸರು ಸೇರ್ಪಡೆಗೆ ಯಾವೆಲ್ಲಾ ದಾಖಲೆಗಳು ಬೇಕು?
* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ ಅಗತ್ಯ
ಮಗುವಿನ ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು
* ಮಗುವಿನ ಜನನ ಪ್ರಮಾಣಪತ್ರ
* ಪೋಷಕರ ಆಧಾರ್ ಕಾರ್ಡ್
ಪ್ರಮುಖ ಅಂಶಗಳು
* ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್ ಭೇಟಿ ನೀಡಬೇಕು.
* ನಂತರ ಐಡಿ ಅನ್ನು ರಚಿಸಬೇಕಾಗುತ್ತದೆ. ಒಂದುವೇಳೆ ನಿಮ್ಮ ಐಡಿಯನ್ನು ಈಗಾಗಲೇ ರಚಿಸಿದ್ದರೆ ನೀವು ಲಾಗಿನ್ ಆಗಬೇಕು.
* ನೀವು ಹೊಸ ಸದಸ್ಯರನ್ನು ಸೇರಿಸುವ ಆಯ್ಕೆ ಸಿಗಲಿದ್ದು, ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
* ನಂತರ ಹೊಸ ಸದಸ್ಯರನ್ನು ಸೇರಿಸಲು ಫಾರ್ಮ್ ಅನ್ನು ಭರ್ತಿ ಮಾಡಿ.
* ಹೊಸ ಸದಸ್ಯರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕಾಗುತ್ತದೆ.
* ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
* ವಿವರಗಳು ಮತ್ತು ದಾಖಲೆಗಳನ್ನು ಭರ್ತಿ ಮಾಡಿದ ನಂತರ, ಫಾರ್ಮ್ ಅನ್ನು ಸಲ್ಲಿಸಬೇಕು.
* ನಿಮ್ಮ ನೋಂದಣಿ ಸಂಖ್ಯೆಯನ್ನು ನೀವು ಪಡೆಯುತ್ತೀರಿ. ಇದರೊಂದಿಗೆ ನಿಮ್ಮ ವಿನಂತಿಯನ್ನು ನೀವು ಟ್ರ್ಯಾಕ್ ಮಾಡಬಹುದು.
* ನಿಮ್ಮ ಫಾರ್ಮ್ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ.
* ಎಲ್ಲವೂ ಸರಿಯಾಗಿದ್ದರೆ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸಲಾಗುತ್ತದೆ.
* ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗಿ ನಿಮ್ಮ ಪಡಿತರ ಚೀಟಿಯಲ್ಲಿ ನಿಮ್ಮ ಹೆಸರನ್ನು ಅಪ್ಡೇಟ್ ಮಾಡಿಸಬಹುದು.
ತಿದ್ದುಪಡಿಗೆ ಅರ್ಜಿ ಸಲ್ಲಿಸುವ ವಿಧಾನಗಳು
* ಅಧಿಕೃತ ವೆಬ್ ಸೈಟ್ https://ahara.kar.nic.in/homeಗೆ ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
* ತಿದ್ದುಪಡಿ ಅಥವಾ ಹೊಸ ಸೇರ್ಪಡೆಗೆ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
* ಹೊಸ ಪೇಜ್ನಲ್ಲಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
* ನಂತರ ತಿಳಿಸಲಾದ ಎಲ್ಲಾ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ
* ಫಾರ್ಮ್ ಅನ್ನು ಸಬ್ಮೀಟ್ ಮಾಡಿ.
* ಅರ್ಜಿ ಸಲ್ಲಿಸುವ ವೇಳೆ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ಬರುತ್ತದೆ. ಇಲ್ಲದಿದ್ದರೆ, ಹೊಸ ಪಡಿತರ ಚೀಟಿ ಬುರುವುದಿಲ್ಲ. ಆದ್ದರಿಂದ ಮುಂಚಿತವಾಗಿ ಎಲ್ಲಾ ದಾಖಲೆಗಳು ಸರಿಯಾಗಿವೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications