Breaking: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ 2 ಲಕ್ಷ ಡೋಸ್ ಕೊವಿಶೀಲ್ಡ್ ಲಸಿಕೆ

ಬೆಂಗಳೂರು, ಮೇ 26: ಕೇಂದ್ರ ಸರ್ಕಾರದ ಕೋಟಾದಡಿ ಕಳುಹಿಸಿದ 2 ಲಕ್ಷ ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ಬುಧವಾರ ಸಂಜೆ ಕರ್ನಾಟಕ ಸ್ವೀಕರಿಸಿದೆ. ಲಸಿಕೆಯನ್ನು ಪೂರೈಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಸಂಸ್ಥೆಗಳು ಸಂಶೋಧಿಸಿದ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆಯನ್ನು ರಾಜ್ಯದಲ್ಲಿ ವಿತರಣೆ ಮಾಡಲಾಗುತ್ತಿದೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಇದುವರೆಗೂ ಎಷ್ಟು ಪ್ರಮಾಣದ ಲಸಿಕೆಯನ್ನು ಪೂರೈಸಿದೆ ಹಾಗೂ ರಾಜ್ಯ ಸರ್ಕಾರವು ನೇರವಾಗಿ ಖರೀದಿಸಿದ ಕೊರೊನಾವೈರಸ್ ಲಸಿಕೆಯ ಪ್ರಮಾಣವೆಷ್ಟು ಎನ್ನುವುದರ ಬಗ್ಗೆ ಸಚಿವರು ಟ್ವೀಟ್ ಮಾಡಿದ್ದಾರೆ.

 Karnataka Received 2 Lakh Doses Of Covishield Under The Government Of India; Minister Dr Sudhakar

ಕೇಂದ್ರದಿಂದ ರಾಜ್ಯಕ್ಕೆ ಈವರೆಗೂ 1.07 ಕೋಟಿ ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ಪೂರೈಸಲಾಗಿದೆ. ಕರ್ನಾಟಕ ಸರ್ಕಾರವು 13.54 ಲಕ್ಷ ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ನೇರವಾಗಿ ಖರೀದಿಸಿದೆ ಎಂದು ಸಚಿವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ:

ಕರ್ನಾಟಕದಲ್ಲಿ ಈವರೆಗೂ 7,11,770 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 4,67,540 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 5,73,407 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,04,360 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. 45 ವರ್ಷಕ್ಕಿಂತ ಮೇಲ್ಪಟ್ಟ 81,59,946 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 19,76,685 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು 1,25,41,765 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ.

Recommended Video

      B S Yediyurappa ನವರನ್ನು ಸದ್ಯದಲ್ಲೇ ಕುರ್ಚಿಯಿಂದ ಇಳಿಸಿದ್ದಾರಾ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+