ಮಳೆ.. ಮಳೆ.. ಹಾಯಾಗಿದೆ ಎದೆಯೊಳಗೆ.. ಅಂತಿದ್ದಾರೆ ಕನ್ನಡಿಗರು!

ಮಳೆ.. ಮಳೆ.. ನಿನ್ನೆ ಸುರಿದ ಒಂದೇ ಒಂದು ಭರ್ಜರಿ ಮಳೆ, ಕನ್ನಡಿಗರು ನಿಟ್ಟುಸಿರನ್ನೇ ಬಿಡುವಂತೆ ಮಾಡಿದೆ. ಯಾಕಂದ್ರೆ ಮಳೆ ಇಲ್ಲದೆ ಕನ್ನಡಿಗರು ನರಳಾಡಿ ಹೋಗಿದ್ದರು. ಇನ್ನು ನಮ್ಮ ಬೆಂಗಳೂರಿನ ಪರಿಸ್ಥಿತಿ ಕೈಮೀರಿ ಹೋಗಿತ್ತು. ಆದರೆ ನಿನ್ನೆ ಮಧ್ಯಾಹ್ನ ಶುರುವಾದ ಮಳೆ, ಸಂಜೆ ವೇಳೆಗೆ ಬೆಂಗಳೂರಿಗರ ದಾಹ ನೀಗಿಸಿತ್ತು. ಬೆಂಗಳೂರು ಮಾತ್ರವಲ್ಲ, ಕನ್ನಡ ನಾಡಿನ ಬಹುತೇಕ ಜಿಲ್ಲೆಗಳಿಗೆ ನಿನ್ನೆ ಮಳೆಯ ಸಿಂಚನ ಆಗಿದೆ. ಹಾಗಾದರೆ, ಮುಂದಿನ 24 ಗಂಟೆ ಸಮಯದಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ? ಮುಂದೆ ಓದಿ.

ಮಳೆ ಬೀಳುತ್ತಿಲ್ಲ ಅಂತಾ ಕನ್ನಡಿಗರು ಪರದಾಡುತ್ತಿರುವ ಸಮಯಕ್ಕೇ, ಭರ್ಜರಿ ಮಳೆ ಆಗಮನ ಆಗಿದೆ. ಕಳೆದ 5 ತಿಂಗಳಿಂದ ಕರ್ನಾಟಕದ ಕರಾವಳಿ ಜಿಲ್ಲೆ ಸೇರಿದಂತೆ ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಕೊಪ್ಪಳ, ಧಾರವಾಡ, ಕಲಬುರಗಿ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಕೊರತೆ ಕಾರಣಕ್ಕೆ ಜನ ನಲುಗಿದ್ದಾರೆ. ಆದ್ರೆ ಇದೀಗ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬರುತ್ತಿದ್ದು ಜನ ಕುಣಿದು ಕುಪ್ಪಳಿಸಿದ್ದಾರೆ. ಹಾಗೇ ಮುಂದಿನ 24 ಗಂಟೆಯಲ್ಲಿ ಈ ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

Karnataka Received Heavy Rain On May 3 Of 2024 And Rain Created Happiness

ಮಳೆ.. ಮಳೆ.. ಈ ಜಿಲ್ಲೆಗಳಿಗೆ ಮಳೆ!

ಅಂದಹಾಗೆ ಈಗ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಮುಂದಿನ 24 ಗಂಟೆ ಅವಧಿಯಲ್ಲಿ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಅದರಲ್ಲಿ ನಮ್ಮ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೂಡ ಸೇರಿದ್ದು, ಮಂಡ್ಯ ಜಿಲ್ಲೆಯ ಹಲವು ಭಾಗಗಳು ಹಾಗೂ ಮೈಸೂರಲ್ಲೂ ಇಂದು ಮತ್ತೆ ಮಳೆ ಅಬ್ಬರಿಸಲಿದೆ. ಇನ್ನುಳಿದಂತೆ ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆಯಲ್ಲೂ ಮಳೆಯ ಅಬ್ಬರ ಗ್ಯಾರಂಟಿ ಅಂತ ಹೇಳಲಾಗುತ್ತಿದೆ. ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಮಳೆ ಬೀಳುತ್ತಿದೆ. ಈ ಹಿನ್ನೆಲೆ, ಕಾವೇರಿ ನದಿಗೆ ಭಾರಿ ಪ್ರಮಾಣದ ನೀರು ಹರಿದು ಬರುವ ನಿರೀಕ್ಷೆ ಕೂಡ ಇದೆ.

ಮಳೆ.. ಮಳೆ.. ಮಳೆ!

ನಿನ್ನೆ ಕನ್ನಡಿಗರ ರಾಜಧಾನಿ ಬೆಂಗಳೂರಲ್ಲಿ ಬಂದ ಭಾರಿ ಮಳೆ ನೆಮ್ಮದಿ ನೀಡಿತ್ತು. ಅದರಲ್ಲೂ ಇಷ್ಟು ದಿನ ಮಳೆ ಇಲ್ಲದೆ ಪರದಾಡಿದ್ದ ನಮ್ಮ ಜನರಿಗೆ, ಭರ್ಜರಿ ಮಳೆಯ ರಸದೌತಣ ಸಿಕ್ಕಿತು. ನೋಡ ನೋಡುತ್ತಲೇ ಇಡೀ ಬೆಂಗಳೂರಿಗೆ ಮುತ್ತಿಗೆ ಹಾಕಿದ ಮಳೆ ಮೋಡಗಳು, ಗಂಟೆಗಟ್ಟಲೇ ಮಳೆ ಸುರಿಸಿದವು. ಈ ಮೂಲಕ ಭರ್ಜರಿ ಮಳೆ ಕಂಡು, ಜನರು ಕೂಡ ಕುಣಿದಾಡಿದರು. ಹಾಗೇ ಮಂಡ್ಯ & ಮೈಸೂರು ಭಾಗದಲ್ಲಿ ಕೂಡ ಭಾರಿ ಮಳೆ ತಂಪು ಹರಿಸಿದೆ. ಕಾವೇರಿಯ ಮಡಿಲಿನಲ್ಲಿ ಇದ್ದರೂ ನೀರು ಇಲ್ಲದೆ ನರಳಿದ್ದರು ಕನ್ನಡಿಗರು. ಅದ್ರಲ್ಲೂ ಹಳೇ ಮೈಸೂರು ಭಾಗದಲ್ಲಿ ಕೂಡ ಕಾವೇರಿ ನದಿ ಬತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿಯೇ, ಮಳೆ ಬರಲಿ ಅಂತಾ ಜನರು ಪ್ರಾರ್ಥನೆ ಮಾಡುತ್ತಿದ್ದರು.

ಪ್ರಕೃತಿ ಮೇಲೆ ದೌರ್ಜನ್ಯ ನಡೆಸುತ್ತಿದ್ದರೆ...

ಮನುಷ್ಯ ಕ್ರೂರಿ ಆಗುತ್ತಿದ್ದು, ಪ್ರಕೃತಿ ವಿರುದ್ಧ ತನ್ನ ಕ್ರೂರ ನೀತಿಗಳನ್ನು ಅನ್ವಯಿಸುತ್ತಿದ್ದಾನೆ. ಇದೇ ಕಾರಣಕ್ಕೆ ಇದೀಗ ಮಳೆ ಸರಿಯಾದ ಸಮಯಕ್ಕೆ ಬರದ ಪರಿಸ್ಥಿತಿ ನಿರ್ಮಾಣ ಆಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಕೈಮೀರಿ ಹೋಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ವಿಜ್ಞಾನಿಗಳು ಹಾಗೂ ತಜ್ಞರು ಕೂಡ ಎಚ್ಚರಿಕೆ ಸಂದೇಶ ರವಾನೆ ಮಾಡಿದ್ದು ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸುತ್ತಿದ್ದಾರೆ. ಆದರೆ ಮನುಷ್ಯ ಮಾತ್ರ ತನ್ನ ದುರಾಸೆಯ, ಮತ್ತು ದುರ್ಬುದ್ಧಿಯ ಮಿತಿ ಮೀರಿದ್ದು ಸಮಸ್ಯೆಗೆ ದಾರಿ ಮಾಡಿಕೊಟ್ಟಿದೆ. ಹೀಗಾಗಿ ಮುಂದೆ ಮನುಷ್ಯರ ಬದುಕಿಗೆ ಇದು ಸಮಸ್ಯೆ ಎದನ್ನಲಾಗುತ್ತಿದೆ. ಪರಿಸರ ಸಂರಕ್ಷಕರು ಕೂಡ ಇದೇ ವಿಚಾರವಾಗಿ ಈಗ ಚರ್ಚೆ ಮಾಡುತ್ತಿದ್ದಾರೆ, ಹೀಗಾಗಿ ಇದೆಲ್ಲಾ ಏನಾಗುತ್ತೆ ಎಂಬ ಚಿಂತೆಯು ಹಬ್ಬಿದೆ.

ತಂಪು.. ತಂಪು.. ಕೂಲ್.. ಕೂಲ್..!

ಮಳೆ.. ಮಳೆ.. ಭರ್ಜರಿ ಮಳೆ ಬಂದಿದ್ದು, ಭೂತಾಯಿ & ಮನಸ್ಸು ಎರಡೂ ತಂಪಾಗಿದೆ. ಎಲ್ಲೆಲ್ಲೂ ಮಳೆಯ ಅಬ್ಬರ ಜೋರಾಗಿದೆ. ಕೆಲವೇ ಕೆಲವು ದಿನಗಳ ಹಿಂದೆ ಕರ್ನಾಟಕದಲ್ಲಿ ಎಲ್ಲಾ ಜಿಲ್ಲೆಗಳ ಜನರು ಭಾರಿ ಬಿಸಿಲು & ಬಿಸಿಯಾದ ಗಾಳಿಗೆ ನಲುಗಿ ಹೋಗಿದ್ದರು. ಮನೆ ಮೇಲೆ ಇರುವ ನೀರಿನ ಟ್ಯಾಂಕರ್ ಕೂಡ ಕರಗಿ ಹೋಗುವಷ್ಟು, ಮನೆಯಲ್ಲಿ ಬರುವ ನಲ್ಲಿ ನೀರು ಕೂಡ ಕುದಿಯುವಷ್ಟು ಬಿಸಿಲು ಇತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದ್ದು, ತಂಪು ತಂಪು ಕೂಲ್.. ಕೂಲ್.. ಆಗಿದೆ ನಮ್ಮ ಕರ್ನಾಟಕ. ಹಾಗಾದರೆ ಇನ್ನೂ ಎಷ್ಟು ದಿನಗಳ ಕಾಲ ವಾತಾವರಣ ಹೀಗೆ ಇರಲಿದೆ ಗೊತ್ತಾ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+