Beer Price: ಬಿಯರ್ ಮಾರಾಟದಲ್ಲಿ ಭಾರೀ ಕುಸಿತ: ಬರೀ 195.27 ಲಕ್ಷ ಬಾಕ್ಸ್ ಸೇಲ್: ಅಬಕಾರಿ ಸಚಿವ
Year Ender 2025: ಕರ್ನಾಟಕ ಸರ್ಕಾರ ಜಾರಿಗೆ ತಂದ ಅಬಕಾರಿ ಸುಂಕದ ಏರಿಕೆ ಹಾಗೂ ಇತರ ಕಾರಣಗಳಿಂದಾಗಿ ಈ ವರ್ಷ ಬಿಯರ್ ಮಾರಾಟದಲ್ಲಿ ಕುಸಿತ ಕಂಡಿದೆ. ಅದರಲ್ಲೂ ಏಪ್ರಿಲ್-ಸೆಪ್ಟಂಬರ್ ವರೆಗೆ ಬಿಯರ್ ಸೇಲ್ನಲ್ಲಿ ಗಮನಾರ್ಹ ಇಳಿಕೆ ಆಗಿದೆ. ಸುಂಕ ಹೇರಿಕೆಯಿಂದ ಸರ್ಕಾರಕ್ಕೆ ಆದಾಯ ಹೆಚ್ಚಾಗಿದೆ. ಈ ಮಾರಾಟ ಇಳಿಕೆಗೆ ನಿಖರ ಕಾರಣಗಳನ್ನು ಅಬಕಾರಿ ಸಚಿವರೇ ತಿಳಿಸಿದ್ದಾರೆ. ಅದರ ಬಗೆಗಿನ ಹೆಚ್ಚಿನ ಮಾಹಿತಿ ಇಲ್ಲಿದೆ.
ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಬಿಯರ್ ಮಾರಾಟ ಗಣನೀಯ ಕುಸಿತ ಕಂಡಿದೆ ಎಂದು ಅಬಕಾರಿ ಖಾತೆ ಸಚಿವ ಆರ್.ಬಿ. ತಿಮ್ಮಾಪುರ ಅವರೇ ಸ್ವತಃ ಸೋಮವಾರ ಮಾಹಿತಿ ನೀಡಿದ್ದಾರೆ. ಕಳೆದ ವರ್ಷದ 2024ರ ಇದೇ ಅವಧಿಗೆ ಹೋಲಿಕೆ ಮಾಡಿದರೆ ಬಿಯರ್ ಮಾರಾಟದಲ್ಲಿ 2025ರಲ್ಲಿ ಶೇಕಡಾ 19.55 ರಷ್ಟು ನಕಾರಾತ್ಮಕ ಬೆಳವಣಿಗೆ ಆಗಿದೆ ಎಂದು ಸಚಿವರು ಮಾಹಿತಿ ನೀಡಿದರು.

2025 ಸೆಪ್ಟೆಂಬರ್ ರವರೆಗೆ ಕರ್ನಾಟಕದಲ್ಲಿ ಒಟ್ಟು 195.27 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗಿಂತ 47.46 ಲಕ್ಷ ಬಾಕ್ಸ್ಗಳು ಕಡಿಮೆ ಆಗಿದೆ. ಇದು ಶೇಕಡಾ 19.55 ರಷ್ಟು ಕಡಿಮೆ. ಇದಕ್ಕೆ ಕೆಲವು ಪ್ರಮುಖ ಕಾರಣ ಇಲ್ಲಿವೆ ಎಂದು ಚಳಿಗಾಲ ಅಧಿವೇಶನದಲ್ಲಿ ಕೇಳದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
ವಿಧಾನ ಪರಿಷತ್ತಿನ ನಿಯಮ 330 ರ ಅಡಿಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ಎಂಎಲ್ಸಿ ಕೆ.ಎಸ್. ನವೀನ್ ಅವರು ಅಬಕಾರಿ ಇಲಾಖೆಗೆ ಸಂಬಂಧಿಸಿದ ಪ್ರಶ್ನೆ ಕೇಳಿದರು. ಇದಕ್ಕೆ ಲಿಖಿತ ಉತ್ತರದಲ್ಲಿ ಸಚಿವರು ಉತ್ತರಿಸಿದರು.
2025ರಲ್ಲಿ ಬಿಯರ್ ದರ ನಿರಂತರ ಹೆಚ್ಚಳ..!
ಈ ವರ್ಷ ರಾಜ್ಯದಲ್ಲಿ ಭಾರೀ ಮಳೆ ದಾಖಲಾಗಿದೆ. ಅದರಿಂದ ಶೀತ ವಾತಾವರಣ ಉಂಟಾಗಿದ್ದು, ಇದು ಸಹ ಬಿಯರ್ ಮಾರಾಟ ಕುಸಿತವಾಗಲು ಪ್ರಮುಖ ಕಾರಣವೆಂದು ಅವರು ತಿಳಿಸಿದರು. ಮೂಲಗಳ ಪ್ರಕಾರ, ಅಬಕಾರ ಸುಂಕ ಹೆಚ್ಚಿಸಿದ್ದರಿಂದಲೂ ಸಹ ಬಿಯರ್ ಮಾರಾಟದಲ್ಲಿ ಇಳಿಕೆ ಆಗಿದೆ. ರಾಜ್ಯದಲ್ಲಿ ನಿರಂತರವಾಗಿ ಬಿಯರ್ ಬೆಲೆ ಹೆಚ್ಚಾಗಿದೆ. 180 ರೂಪಾಯಿಗೆ ಸಿಗುತ್ತಿದ್ದ ಒಂದು ಬಿಯರ್ ದರ 250 ರೂಪಾಯಿಗೆ ಹೆಚ್ಚಾಗಿದೆ. ಕಡಿಮೆ ಬೆಲೆಯ 110 ರೂಪಾಯಿ ಬಿಯರ್ 170-180 ರೂಪಾಯಿಗೆ ಏರಿಕೆ ಕಂಡಿದೆ. ಹೀಗೆ ದರ ಹೆಚ್ಚಿದ್ದು ಸಹ ಪ್ರಮುಖ ಕಾರಣ ಎನ್ನಲಾಗಿದೆ.
ಸದನದಲ್ಲಿ ಮುಂದುವರಿದು ಮಾತನಾಡಿದ ಸಚಿವ ಆರ್.ಬಿ.ತಿಮ್ಮಾಪುರ ಅವರು, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಮದ್ಯ ಗ್ರಾಹಕರು ಲಿವರ್ ಸಿರೋಸಿಸ್/ಕಾಮಾಲೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಕಳವಳ ವ್ಯಕ್ತಪಡಿಸಿದ ಅವರು, ನಮ್ಮ ಅಬಕಾರಿ ಇಲಾಖೆಯ ಆದಾಯದ ಕನಿಷ್ಠ 20 ಪ್ರತಿಶತವನ್ನು ಅವರ ಉತ್ತಮ ಚಿಕಿತ್ಸೆಗಾಗಿ ವಿನಿಯೋಗಿಸುವ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದರು.
ಅಬಕಾರಿ ಇಲಾಖೆಯಿಂದ ಉತ್ಪತ್ತಿಯಾಗುವ ಆದಾಯವನ್ನು ರಾಜ್ಯದ ಏಕೀಕೃತ ನಿಧಿಯಲ್ಲಿ ಠೇವಣಿ ಇಡಲಾಗುತ್ತದೆ. ಸರ್ಕಾರ ತಾನು ಬಜೆಟ್ನಲ್ಲಿ ಅನುಮೋದನೆ ನೀಡುವ ಕಾರ್ಯಕ್ರಮಗಳಿಗೆ ಆ ಹಣ ವ್ಯಯಿಸಲಾಗುವುದು. ಇತರ ಯಾವುದೇ ಉದ್ದೇಶಕ್ಕಾಗಿ ಹಣವನ್ನು ಮೀಸಲಿಡಲು ಯಾವುದೇ ನಿರ್ದಿಷ್ಟ ವ್ಯವಸ್ಥೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಸಚಿವರ ಪ್ರಕಾರ, ಸರ್ಕಾರವು ಈಗಾಗಲೇ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ನಂತಹ ಕೇಂದ್ರ ಮತ್ತು ರಾಜ್ಯ ಯೋಜನೆಗಳ ಮೂಲಕ ಸಾರ್ವಜನಿಕ ಆರೋಗ್ಯ ಕೇಂದ್ರಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಮೂಲಕ ಜನರಿಗೆ ಒಟ್ಟು ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಸೇವೆ ನೀಡುತ್ತಿದೆ. ಇನ್ನೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ಬೇಡಿಕೆಯ ಆಧಾರದ ಮೇಲೆ ಬಜೆಟ್ನಲ್ಲಿ ಅಗತ್ಯ ಅನುದಾನ ಸಹ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಕಳಪೆ ಮದ್ಯ ಮಾರಾಟ ಶಾಪ್ ನಿಷೇಧ, ಕ್ರಮ
ರಾಜ್ಯದಲ್ಲಿ ಕಳಪೆ ಗುಣಮಟ್ಟದ ಮದ್ಯ ಮಾರಾಟ ಮತ್ತು ಹೊಸ ಮದ್ಯದಂಗಡಿಗಳ ನಿಷೇಧದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಜೋರಾಗಿದೆ. ಇಂತಹ ಕಳಪೆ ಮದ್ಯ ಮಾರಾಟ, ಅಂಗಡಿಗಳ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಮತ್ತು ಪ್ರತಿ ಜಿಲ್ಲೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅನ್ನು ನೇಮಿಸಬೇಕು ಎಂದು ಹಲವು ಒತ್ತಾಯ ಮಾಡಿದ್ದಾರೆ.
ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಬೋಸರಾಜು ಅವರು ರಾಜ್ಯ ಸರ್ಕಾರದ ನಿಲುವನ್ನು ಮತ್ತಷ್ಟು ಸ್ಪಷ್ಟೀಕರಿಸಿದರು. ಆರೋಗ್ಯ ಚಿಕಿತ್ಸೆ, ನಕಲಿ ಮದ್ಯದಂಗಡಿಗಳ ವಿರುದ್ಧ ಕ್ರಮಗಳಿಂದ ಮದ್ಯ ಸೇವನೆಯನ್ನು ಪ್ರೋತ್ಸಾಹಿಸುತ್ತಿಲ್ಲ. ಮದ್ಯದ ಹಾನಿಗಳ ವಿರುದ್ಧ ಜಾಗೃತಿ ಅಭಿಯಾನದ ಭಾಗವಾಗಿ ಸಕ್ರಿಯವಾಗಿ ನಡೆಸಲಾಗುತ್ತಿದೆ. ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಮದ್ಯ ಸೇವನೆಯನ್ನು ನಿಯಂತ್ರಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications