ಕರ್ನಾಟಕದಲ್ಲಿ ಸಂಪೂರ್ಣ ಲಾಕ್‌ಡೌನ್, ಏನಿರುತ್ತೆ? ಏನಿರಲ್ಲ?
ಬೆಂಗಳೂರು, ಮೇ 7: ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ ನಿರ್ಣಾಯಕ ಹೋರಾಟ ನಡೆಸಿದ್ದು, ರಾಜ್ಯವನ್ನು ಸಂಪೂರ್ಣ ಲಾಕ್‌ಡೌನ್ ಮಾಡುವ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ.
Recommended Video
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಮೇ 10 ರ ಬೆಳಗ್ಗೆ 6ಗಂಟೆಯಿಂದ 24 ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯಾಾದ್ಯಂತ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗುವುದು ಎಂದರು.
ಇದರ ಬೆನ್ನಲ್ಲೇ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಏನಿರುತ್ತೆ?
ಅಗತ್ಯ ವಸ್ತುಗಳನ್ನು ಖರೀದಿಸಲು ವಾಹನದಲ್ಲಿ ಹೋಗುವ ಹಾಗಿಲ್ಲ, ನಡೆದುಕೊಂಡೆ ಅಂಗಡಿಗಳಿಗೆ ಹೋಗಬೇಕು
* ಆಹಾರ, ಹಾಲು, ಹಣ್ಣು ಮಾಂಸದ ಅಂಗಡಿ ಮಾರಾಟಕ್ಕೆ ಅವಕಾಶ(ಬೆಳಗ್ಗೆ 6 ರಿಂದ 10 ಗಂಟೆ)
* ತಳ್ಳುಗಾಡಿಯಲ್ಲಿ ತರಕಾರಿ ಮಾರಾಟ ಮಾಡಲು ಅವಕಾಶ. (ಬೆಳಗ್ಗೆ 6 ರಿಂದ ಸಂಜೆ 6 ಅವಕಾಶ).
* ಎಲ್ಲಾ ಬಗ್ಗೆ ವೈದ್ಯಕೀಯ ಸೇವೆ, ತುರ್ತು ಚಿಕಿತ್ಸೆಗೆ ತೆರಳಲು ಅವಕಾಶ.
* ಕೋವಿಡ್ ನಿಯಮಾವಳಿಯಂತೆ ಶೇ 50ರಷ್ಟು ಹಾಜರಾತಿಯೊಂದಿಗೆ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಲಿವೆ. ರಸ್ತೆ ಕಾಮಗಾರಿ, ಕಟ್ಟಡ ಕಾಮಗಾರಿ ಯಾವುದೇ ರೀತಿಯ ಅಡ್ಡಿಯಿಲ್ಲ.
* ವಿವಾಹ/ಶುಭ ಕಾರ್ಯಕ್ರಮದಲ್ಲಿ 50 ಜನ ಮಾತ್ರ ಭಾಗವಹಿಸಲು ಅವಕಾಶ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
ಹೊಸ ಮಾರ್ಗಸೂಚಿಗಳ ಮುಖ್ಯಾಂಶಗಳು@mla_sudhakar @WFRising @citizenkamran @BangaloreBuzz @RCBTweets @NammaKarnataka_@ADinfodeptBIDAR @MangaloreCity @allaboutbelgaum @mysuruvarthe@MysuruMemes @Kalaburgivarthe@Hubballi_Infra pic.twitter.com/NDy5qGCecY
— K'taka Health Dept (@DHFWKA) May 7, 2021
ಏನಿರಲ್ಲ?
ಅಂಗಡಿ ಮುಂಗ್ಗಟ್ಟು, ಮಾರುಕಟ್ಟೆ, ಶಾಪಿಂಗ್ ಮಾಲ್, ಸಿನಿಮಾ ಮಂದಿರ, ಹೊಟೆಲ್, ರೆಸಾರ್ಟ್, ಕೈಗಾರಿಕಾ ಚಟುವಟಿಕೆ ನಿಬಂಧಿಸಲಾಗಿದೆ.
ಬಸ್ ಸಂಚಾರ ಇಲ್ಲ:
* ಕೆಎಸ್ಸಾರ್ಟಿಸಿ, ಬಿಎಂಟಿಸಿ, ನಮ್ಮ ಮೆಟ್ರೋ ಸೇರಿದಂತೆ ಸಾರಿಗೆ ಸಂಚಾರ 14 ದಿನಗಳ ಕಾಲ ಬಂದ್ ಆಗಲಿದೆ. ಅಂತಾರಾಜ್ಯ ಬಸ್ ಸಂಚಾರವೂ ಸ್ಥಗಿತ. ಖಾಸಗಿ ವಾಹನಗಳಲ್ಲಿ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ.
* ಸಿನಿಮಾ ಹಾಲ್, ಗ್ರಂಥಾಲಯ, ರಂಗಮಂದಿರ, ಜಿಮ್, ಕ್ರೀಡಾಂಗಣ, ಆಡಿಟೋರಿಯಂ, ಈಜುಕೊಳ ಎಲ್ಲವೂ ಬಂದ್.
* ಹೋಟೆಲ್, ರೆಸ್ಟೋರೆಂಟ್ ಬಂದ್ ಆಗಿರಲಿದ್ದು, ಪಾರ್ಸೆಲ್ ವ್ಯವಸ್ಥೆಗೆ ಅನುಮತಿ ಇರಲಿದೆ.
* ಮದ್ಯ ಮಳಿಗೆಯಲ್ಲಿ ಪಾರ್ಸೆಲ್ ವ್ಯವಸ್ಥೆಗೆ ಮಾತ್ರ ಅನುಮತಿ (ನಿರ್ಬಂಧಿತ ಅವಧಿ ಬೆಳಗ್ಗೆ 6 ರಿಂದ 10)











Click it and Unblock the Notifications