ಕರ್ನಾಟಕ; 998 ಹೊಸ ಕೋವಿಡ್ ಪ್ರಕರಣಗಳು ದಾಖಲು

ಬೆಂಗಳೂರು, ಡಿಸೆಂಬರ್ 07 : ಕರ್ನಾಟಕದಲ್ಲಿ 998 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,94,004ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 24,767.

ಆರೋಗ್ಯ ಇಲಾಖೆ ಸೋಮವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಇಂದು 1601 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಒಟ್ಟು ಗುಣಮುಖರಾದವರು 8,57,351.

Karnataka Reported 998 Fresh COVID Cases

ರಾಜ್ಯದಲ್ಲಿ ಇಂದು 11 ಜನರು ಮೃತಪಟ್ಟಿದ್ದಾರೆ. ಇದುವರೆಗೂ ಮೃತಪಟ್ಟವರು 11,867. ವಿವಿಧ ಜಿಲ್ಲೆಗಳ ಆಸ್ಪತ್ರೆಯ ಐಸಿಯುನಲ್ಲಿ 279 ಜನರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಸೋಮವಾರ 6472 ಆಂಟಿಜೆನ್ ಪರೀಕ್ಷೆಗಳನ್ನು ಮಾಡಲಾಗಿದೆ. 69,999 ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ಮಾಡಲಾಗಿದೆ. ಒಟ್ಟು 76,471 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ. ಇದುವರೆಗೂ 11789715 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು? : ಬೆಂಗಳೂರು ನಗರದಲ್ಲಿ 501 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 3,74,525ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 19,269.

ಸೋಮವಾರ ಚಿಕ್ಕಬಳ್ಳಾಪುರ 48, ದಕ್ಷಿಣ ಕನ್ನಡ 23, ದಾವಣಗೆರೆ 10, ಹಾಸನ 43, ಕಲಬುರಗಿ 27, ಮೈಸೂರು 34, ಕೋಲಾರ 25, ಯಾದಗಿರಿ 26, ಬೆಳಗಾವಿಯಲ್ಲಿ 18 ಹೊಸ ಪ್ರಕರಣಗಳು ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+