ಕರ್ನಾಟಕದಲ್ಲಿ ಹೊಸದಾಗಿ 11,042 ಕೊರೊನಾ ಸೋಂಕಿತರು ಪತ್ತೆ
ಬೆಂಗಳೂರು ಜೂನ್ 10:ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಯುತ್ತಿತ್ತು, ಆದರೆ ಕಳೆದ 24 ಗಂಟೆಗಳಲ್ಲಿ ಪ್ರಕರಣಗಳ ಸಂಖ್ಯೆ ಸ್ವಲ್ಪ ಹೆಚ್ಚಾಗಿದೆ.
ರಾಜ್ಯದಲ್ಲಿ ಹೊಸದಾಗಿ 11042 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2739290ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಂದು 194 ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 32485 ಆಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 210652 ಆಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ. 6.58 ರಷ್ಟಿದ್ದು, ಮರಣ ಪ್ರಮಾಣ ಶೇ. 1.75 ರಷ್ಟಿದೆ.

ಬೆಂಗಳೂರಿನಲ್ಲಿ 2191 ಪ್ರಕರಣಗಳು ದೃಢಪಟ್ಟಿದ್ದು, 47 ಸೋಂಕಿತರು ಸಾವನ್ನಪ್ಪಿದ್ದಾರೆ. 4846 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
15721 ಸೋಂಕಿತರು ಇಂದು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 2496132ಕ್ಕೆ ಏರಿಕೆಯಾಗಿದೆ.
Recommended Video
ರಾಜ್ಯದಲ್ಲಿ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಜೂನ್ 14ರಿಂದ ಲಾಕ್‌ಡೌನ್ ಸಡಿಲಗೊಳಿಸುವ ಕುರಿತು ಸರ್ಕಾರ ಕ್ರಮ ಕೈಗೊಂಡಿದೆ. ಲಾಕ್‌ಡೌನ್ ಸಡಿಲಗೊಂಡಿರುವ ಜಿಲ್ಲೆಗಳಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.












Click it and Unblock the Notifications