ಕರ್ನಾಟಕದಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕಿನ ಮೊದಲ ಪ್ರಕರಣ ಪತ್ತೆ
ಬೆಂಗಳೂರು, ಮಾರ್ಚ್ 11: ಕರ್ನಾಟಕದಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕಿನ ಮೊದಲ ಪ್ರಕರಣ ಪತ್ತೆಯಾಗಿದೆ. ಈ ಕುರಿತು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ, ಮಾರ್ಚ್ 10ರವರೆಗೆ ಯುಕೆಯಿಂದ ಬಂದಿದ್ದ 64 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.
ಅಂತಾರಾಷ್ಟ್ರೀಯ ಪ್ರಯಾಣಿಕರೊಬ್ಬರಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರಿ ಸೋಂಕು ಪತ್ತೆಯಾಗಿರುವುದು ತಿಳಿದುಬಂದಿದೆ. ಡಿಸೆಂಬರ್ 2020ರಲ್ಲೇ ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರಿ ಸೋಂಕು ಕಾಣಿಸಿಕೊಂಡಿತ್ತು. ರಾಜ್ಯದಲ್ಲಿ 760 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಕರ್ನಾಟಕದಲ್ಲಿ ಮಾರ್ಚ್ 10ರವರೆಗೆ 7456 ಸಕ್ರಿಯ ಕೊರೊನಾ ಪ್ರಕರಣಗಳಿದ್ದವು. 9,56,801 ಪ್ರಕರಣಗಳಿವೆ, 12,379 ಮಂದಿ ಮೃತಪಟ್ಟಿದ್ದಾರೆ.ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,100 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,12,85,561ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ವೈರಸ್ ಗೆ ನಿನ್ನೆ ಒಂದೇ ದಿನ 126 ಮಂದಿ ಬಲಿಯಾಗಿದ್ದಾರೆ, ಈ ಮೂಲಕ ಸಾವಿನ ಸಂಖ್ಯೆ 1,58,189ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 22 ಸಾವಿರದ 854 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ.
ಈ ನಡುವೆ ಒಟ್ಟಾರೆ 1,12,85,561 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 18,100 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,09,38,146ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,89,226 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.












Click it and Unblock the Notifications