ಊಹೆಗೂ ಮೀರಿ ಬಹುಮತ ಸಾಬೀತುಪಡಿಸುತ್ತೇವೆ: ಶ್ರೀರಾಮುಲು

ಬೆಂಗಳೂರು, ಮೇ 17: "ಊಹೆಗೂ ಮೀರಿ ನಾವು ಬಹುಮತ ಸಾಬೀತುಪಡಿಸುತ್ತೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಬಿಜೆಪಿಯ ಮೊಳಕಾಲ್ಮೂರು ಶಾಸಕ ಬಿ ಶ್ರೀರಾಮುಲು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, "ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲೇ ಸಾಕಷ್ಟು ಜನ ಅಸಾಮಾಧಾನ ಹೊಂದಿರುವವರಿದ್ದಾರೆ. ಅವರೆಲ್ಲ ಬಿಜೆಪಿಗೆ ಸೇರಲು ಸಿದ್ದರಾಗಿದ್ದಾರೆ" ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಅಷ್ಟೇ ಅಲ್ಲ, ಪಕ್ಷೇತರ ಶಾಸಕರೂ ಬಿಜೆಪಿ ಜೊತೆಯಲ್ಲಿದ್ದಾರೆ ಎಂದು ಸಹ ಶ್ರೀರಾಮುಲು ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದಲೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀರಾಮುಲು ಬಿರುಸಿನ ಪೈಪೋಟಿ ನೀಡಿ ಸೋತಿದ್ದರು.

Karnataka results: BJP will win floor test says Sriramulu

ಕರ್ನಾಟಕ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿಸದ್ದು, ಇನ್ನು 15 ದಿನಗಳ ಒಳಗೆ ಅವರು ಬಹುಮತ ಸಾಬೀತುಪಡಿಸಬೇಕಿದೆ.

ಮೇ 15 ರಂದು ಹೊರಬಿದ್ದ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ 104 ಸ್ಥಾನ ಗೆದ್ದು ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯಾಗಿ ಹೊರಹೊಮ್ಮಿತ್ತು. ಆದರೆ ಬಹುಮತ ಪಡೆದಿರಲಿಲ್ಲ. ಇತ್ತ 78 ಸ್ಥಾನ ಗೆದ್ದ ಕಾಂಗ್ರೆಸ್, 38 ಸ್ಥಾನ ಗೆದ್ದ ಜೆಡಿಎಸ್ ಗೆ ತನ್ನ ಬೆಂಬಲ ನೀಡಿ ಸರ್ಕಾರ ರಚಿಸಲು ಮನವಿ ಮಾಡಿತ್ತು. ಆದರೆ ರಾಜ್ಯಪಾಲರು ಬಿಜೆಪಿಯನ್ನು ಸರ್ಕಾರ ರಚನೆಗೆ ಆಹ್ವಾನಿಸಿದ್ದರಿಂದ ಇಂದು ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+