ಗೋವಾಕ್ಕೆ ಬಸ್ ಸಂಚಾರ ಆರಂಭಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಬೆಂಗಳೂರು, ಜುಲೈ 06; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಗೋವಾ ರಾಜ್ಯಕ್ಕೆ ಬಸ್‌ಗಳ ಸಂಚಾರವನ್ನು ಆರಂಭಿಸಿದೆ. ಬಸ್‌ನಲ್ಲಿ ಸಂಚಾರ ನಡೆಸುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವನ್ನು ಹೊಂದಿರಬೇಕು.
ಜುಲೈ 6ರ ಮಂಗಳವಾರದಿಂದ ಬಸ್‌ಗಳು ಗೋವಾಕ್ಕೆ ಸಂಚಾರ ನಡೆಸಲಿವೆ. ಕರ್ನಾಟಕ-ಗೋವಾ ನಡುವೆ ಸಂಚಾರ ನಡೆಸುವವರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ ನೆಗೆಟಿವ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಪಡೆದಿರಬೇಕು.
ಪ್ರಯಾಣಿಕರು ನೆಗೆಟಿವ್ ವರದಿ ಹೊಂದಿರುವ ಬಗ್ಗೆ ಆಯಾ ಬಸ್‌ನ ನಿರ್ವಾಹಕರು ಕಡ್ಡಾಯವಾಗಿ ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಈ ಕುರಿತು ಸಿಬ್ಭಂದಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ.

ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಎಷ್ಟು ಬಸ್‌ಗಳು ಸಂಚಾರ ನಡೆಸಲಿವೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿಲ್ಲ.
ಲಾಕ್‌ಡೌನ್ ಸಡಿಲಿಕೆ; ಎರಡು ತಿಂಗಳ ಬಳಿಕ ಗೋವಾದಲ್ಲಿ ಲಾಕ್‌ಡೌನ್ ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ. ಬಾರ್ ಮತ್ತು ರೆಸ್ಟೋರೆಂಟ್‌ಗಳು ಶೇ 50ರಷ್ಟು ಜನರೊಂದಿಗೆ ಕಾರ್ಯ ನಿರ್ವಹಣೆ ಮಾಡಲು ಅವಕಾಶ ನೀಡಲಾಗಿದೆ.
ಗೋವಾಕ್ಕೆ ವಿಮಾನ, ರಸ್ತೆ ಹೀಗೆ ಯಾವುದೇ ಮಾರ್ಗವಾಗಿ ಸಂಚಾರ ನಡೆಸುವ ಜನರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರಬೇಕು.












Click it and Unblock the Notifications