Karnataka Rural Banks Merge: ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗಳು ವಿಲೀನ, ಹೊಸ ಯೋಜನೆ ಜಾರಿ..
ಬೆಂಗಳೂರು, ಏಪ್ರಿಲ್ 07: 'ಒಂದು ರಾಷ್ಟ್ರ ಒಂದೇ ಚುನಾವಣೆ' ಪರಿಚಯಿಸಿರುವ ಕೇಂದ್ರ ಸರ್ಕಾರವು 'ಒಂದು ರಾಜ್ಯ ಒಂದೇ ಗ್ರಾಮೀಣ ವಿಕಾಸ ಬ್ಯಾಂಕ್' ಯೋಜನೆಯನ್ನು ಜಾರಿಗೆ ತರಲು ಸಿದ್ಧವಾಗಿದೆ. ಈ ಸಂಬಂಧ ಎರಡು ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗಳು ವಿಲೀನಗೊಂಡು ಒಂದೇ ಆಗಲಿವೆ. ಈ ಸಂಬಂಧ ಕೇಂದ್ರ ಹಣಕಾಸು ಸಚಿವಾಲಯವು ಶೀಘ್ರವೇ ಯೋಜನೆ ಕುರಿತ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಒಂದೇ ರಾಜ್ಯ ಒಂದು ಗ್ರಾಮೀಣ ಬ್ಯಾಂಕ್ ಯೋಜನೆ ಜಾರಿಯಾಗಲಿದೆ. ಯೋಜನೆಯಡಿ ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ. ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್ಆರ್‌ಬಿ) ಕಾರ್ಯದಕ್ಷತೆ ಹೆಚ್ಚಿಸುವುದು, ವೆಚ್ಚಗಳ ಸಾರ್ವತ್ರಿಕರಣ ನಿಯಂತ್ರಿಸಲು ಸರ್ಕಾರ ಮುಂದಾಗಿದೆ.

ಇದಲ್ಲದೇ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್ಆರ್‌ಬಿ) ಸಂಖ್ಯೆಯನ್ನು 42ರಿಂದ 28ಕ್ಕೆ ಇಳಿಕೆ ಮಾಡಲು ಕೇಂದ್ರ ಹಣಕಾಸು ಸಚಿವಾಲಯ ನಿರ್ಧರಿಸಿ ಈ ಹೊಸ ಯೋಜನೆ ಜಾರಿಗೆ ತರುತ್ತಿದೆ ಎಂದು ಕೇಂದ್ರದ ಮೂಲಗಳು ಮಾಹಿತಿ ನೀಡಿವೆ. ಇದರಿಂದ ಒಂದಷ್ಟು ನೌಕರರಿಗೆ ಸಮಸ್ಯೆ ಸಹ ಆಗಬಹುದು ಎಂದು ಹೇಳಲಾಗುತ್ತಿದೆ.
ಈಗಾಗಲೇ ಯೋಜನೆ ಜಾರಿ ಸಂಬಂಧ ಬ್ಯಾಂಕ್‌ಗಳ ಸಂಖ್ಯೆ ಇಳಿಕೆಯ ಪ್ರಕ್ರಿಯೆಗಳು ಪೂರ್ಣಗೊಂಡಿದೆ. ಮೂಲಗಳ ಪ್ರಕಾರ ಒಟ್ಟು 15 ಆರ್‌ಆರ್‌ಬಿಗಳನ್ನು ವಿಲೀನಗೊಳಿಸಲು ಮುಂದಾಗಿದೆ. ಆಂಧ್ರ ಪ್ರದೇಶವು ಅತೀ ಹೆಚ್ಚು ಅಂದರೆ ನಾಲ್ಕು ಆರ್‌ಆರ್‌ಬಿಗಳನ್ನು ಹೊಂದಿದೆ. ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಮೂರು, ಬಿಹಾರ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಧ್ಯ ಪ್ರದೇಶ, ಮಹಾರಾಷ್ಟ್ರ, ಓಡಿಶಾ ಹಾಗೂ ರಾಜಸ್ಥಾನದಲ್ಲಿ ತಲಾ ಎರಡು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳನ್ನು ಹೊಂದಿವೆ. ಹಣಕಾಸು ಮರುಪೂರಣ ಕಾರ್ಯ ಭರದಿಂದ ಸಾಗಿದೆ ಎಂದು ತಿಳಿದು ಬಂದಿದೆ.
ಇದನ್ನು ಒಂದು ರಾಜ್ಯ ಒಂದು ಆರ್‌ಆರ್‌ಬಿ ಯೋಜನೆ ಅಂತಲೂ ಹೇಳಲಾಗುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಆಸರೆಯಾಗಿದ್ದ ಬ್ಯಾಂಕ್‌ಗಳು ಇದೀಗ ವಿಲೀನಕ್ಕೆ ಸಜ್ಜಾಗಿವೆ. ಹೊಸ ಆರ್ಥಿಕ ವರ್ಷದಲ್ಲಿ ಇಂಥದ್ದೊಂದು ಯೋಜನೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ತಿರ್ಮಾನಿಸಿದೆ..












Click it and Unblock the Notifications