ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2016ನೇ ಸಾಲಿನ UPSC ಟಾಪರ್ ಕೋಲಾರದ ನಂದಿನಿ ಕೆ ಆರ್

|
Google Oneindia Kannada News

ಬೆಂಗಳೂರು, ಮೇ 30 : 2016ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಅಂತಿಮ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟವಾಗಿದ್ದು ಕರ್ನಾಟಕದ ಕೆ ಆರ್ ನಂದಿನಿ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.

ಕಳೆದ ಬಾರಿ ನಡೆದ ಯುಪಿಎಸ್ ಪರೀಕ್ಷೆ ಫಲಿತಾಂಶದಲ್ಲಿ 625ನೇ ರ್ಯಾಂಕ್ ಪಡೆಯುವ ಮೂಲಕ ಭಾರತೀಯ ಆದಾಯ ಸೇವೆ ಹುದ್ದೆ ಆಯ್ಕೆ ಮಾಡಿಕೊಂಡು ಸಧ್ಯ ಫರಿದಾಬಾದ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಕೋಲಾರ ಜಿಲ್ಲೆಯ ಕೆಂಬೋಡಿ ಗ್ರಾಮದ ನಂದಿನಿ ಕೆ ಆರ್ ಅವರು ಈಗ ಎರಡನೇ ಪ್ರಯತ್ನದಲ್ಲಿ ಪ್ರಥಮ ರ್ಯಾಂಕ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. [2016ನೇ ಸಾಲಿನ UPSC ಫಲಿತಾಂಶ ಪ್ರಕಟ, ಕರ್ನಾಟಕದ ನಂದಿನಿ ಪ್ರಥಮ]

Karnataka's Kolar district Nandini K R tops UPSC civil services exam

ಕೋಲಾರದ ಚಿನ್ಮಯ ವಿದ್ಯಾಲಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮುಗಿಸಿರುವ ನಂದಿನಿ, ಮೂಡಬಿದರೆಯ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ ಪಿಯುಸಿ ಹಾಗೂ ಬೆಂಗಳೂರಿನ ಎಂ.ಎಸ್.ರಾಮಯ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಸಿವಿಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿದ್ದಾರೆ.

ಇಂಜಿನಿಯರಿಂಗ್ ಪೂರ್ಣಗೊಳಿಸಿದ ಬಳಿಕ ನಂದಿನಿ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಸಿವಿಲ್ ಇಂಜಿನಿಯರಿಂಗ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ಇವರ ತಂದೆ ರಮೇಶ್ ಸರ್ಕಾರಿ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

English summary
Karnataka's Kolar district Nandini K R, an officer of the Indian Revenue Service, has topped the civil services examination, the result of which was declared on Wednesday by the UPSC.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X