KSRTC 464 Awards: ಕೆಎಸ್‌ಆರ್‌ಟಿಸಿಯಿಂದ ಅತ್ಯುತ್ತಮ ಸಾಧನೆ, ದಾಖಲೆ ಬರೆದ ಶಕ್ತಿ ಯೋಜನೆ
ಬೆಂಗಳೂರು, ಅಕ್ಟೋಬರ್ 18: ಕರ್ನಾಟಕದಾದ್ಯಂತ ಮಾತ್ರವಲ್ಲದೇ ನೆರೆಯ ರಾಜ್ಯದವರೆಗೂ ಸೇವೆ ನೀಡುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ (KSRTC) ಬಸ್‌ಗಳು ತನ್ನ ಉಪ್ರಕಮಗಳಿಂದಲೇ ಸಾಕಷ್ಟು ಪ್ರಶಸ್ತಿಗೆ ಭಾಜನವಾಗಿದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ಆಯಾ ಕಾಲಘಟ್ಟದಲ್ಲಿ ಅನೇಕ ಪ್ರಶಸ್ತಿ ಪಡೆದಿವೆ. ಇದೀಗ 1997 ರಿಂದ 2025 ಸೆಪ್ಟೆಂಬರ್ ವರೆಗೆ ಪಡೆದ ಪ್ರಶಸ್ತಿಗಳ ವಿವರ ಸಾರಿಗೆ ಇಲಾಖೆ ನೀಡಿದೆ. ಅದರಲ್ಲಿ ಕಳೆದ ಎರಡು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಧಿಕ ಪ್ರಶಸ್ತಿಗಳು ಬಂದಿವೆ ಎಂದು ತಿಳಿಸಿದೆ.
ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಗಳಿಗಿಂತಲೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ ಪ್ರಶಸ್ತಿ ಪಡೆಯುವುದರಲ್ಲಿ ಅಗ್ರಸ್ಥಾನದಲ್ಲಿದೆ.

ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳಾ ಟಿಕೇಟ್ ಉಚಿತ ಪ್ರಯಾಣ- ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ. KSRTC 1997 ರಿಂದ ಸೆಪ್ಟೆಂಬರ್ 2025 ರವರೆಗೆ ಅತೀ ಹೆಚ್ಚು ಪ್ರಶಸ್ತಿಗಳನ್ನು ಪಡೆದಿರುವ ಸಾರ್ವಜನಿಕ ರಸ್ತೆ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿದೆ. ಅದರೊಂದಿಗೆ ಶಕ್ತಿ ಯೋಜನೆಗಾಗಿ Golden Book of World Records ಮತ್ತು London Book of World Records ಹಾಗೂ
Golden Book of World Records" & "International Book of Records ಗೂ ಸೇರ್ಪಡೆಯಾಗಿದೆ. ಈ ಕುರಿತು ಖುದ್ದು ಸಚಿವ ರಾಮಲಿಂಗಾ ರೆಡ್ಡಿ ಮತ್ತು ಸಿಎಂ ಸಿದ್ದರಾಮಯ್ಯ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
KSRTC ಒಂದಕ್ಕೆ 464 ಪ್ರಶಸ್ತಿ
1997 ರಿಂದ ಅಕ್ಟೋಬರ್ 2025 ರವರೆಗೆ 04 ಸಾರಿಗೆ ಸಂಸ್ಥೆಗಳಿಗೆ ಲಭಿಸಿರುವ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಒಟ್ಟು ಸಂಖ್ಯೆ 667. ಅದರಲ್ಲಿ ಕೆಎಸ್ ಆರ್ ಟಿ ಸಿ ಸಂಸ್ಥೆಯೊಂದೇ ಪಡೆದಿರುವ ಪ್ರಶಸ್ತಿಗಳು 464. ಈ ಉಪಕ್ರಮವು ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ ಎಂದು ಸಾರಿಗೆ ಇಲಾಖೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಸಾರಿಗೆ ಸಚಿವರಾಗಿದ್ದ 2013 ರಿಂದ ಆಗಸ್ಟ್ 2017 ರವರೆಗೆ 204 ಪ್ರಶಸ್ತಿಗಳು ಲಭಿಸಿವೆ. ಜೂನ್ 2023 ಅಕ್ಟೋಬರ್ 2025 ರವರೆಗೆ 218 ಪ್ರಶಸ್ತಿಗಳು ಒಟ್ಟು 422 ಪ್ರಶಸ್ತಿಗಳು ಸಿಕ್ಕಿವೆ. ಈ ಮೂಲಕ ಕಳೆದ ಎರಡೂವರೆ ವರ್ಷದಲ್ಲಿ ಹೆಚ್ಚು ಪ್ರಶಸ್ತಿಗಳು ಲಭಿಸಿವೆ. ಏನು ಸಾಧನೆ ಮಾಡಿದ್ದಾರೆ ಎಂದು ಕೇಳುವ ಬಿಜೆಪಿಗೆ ಈ ಮೂಲಕ ಸರ್ಕಾರ ಟಕ್ಕರ್ ನೀಡಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications