Get Updates
Get notified of breaking news, exclusive insights, and must-see stories!

KSRTC: ವಿಶ್ವ ದಾಖಲೆ ಪಟ್ಟಿ ಸೇರಿದ ಕರ್ನಾಟಕದ 'ಶಕ್ತಿ ಯೋಜನೆ'...Shakti Scheme

ಬೆಂಗಳೂರು, ಆಗಸ್ಟ್ 18: ಕರ್ನಾಟಕ ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾಗಿ ಎರಡು ವರ್ಷ ಪೂರ್ಣಗೊಂಡಿದೆ. ಒಟ್ಟು ಐದು ಬಿಲಿಯನ್ ಮಹಿಳೆಯರು ಉಚಿತ ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಈ ಯೋಜನೆ ಇತರ ರಾಜ್ಯಗಳಿಗೂ ಮಾದರಿಯಾಗಿದೆ. ಸದ್ಯ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆ Golden Book of World Records ನಲ್ಲಿ ದಾಖಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು ವಿಶ್ವ ದಾಖಲೆ ಬರೆದಿದೆ. ಯೋಜನೆಯಡಿ ಅತೀ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು Golden Book of World Records ನಲ್ಲಿ ಸೇರ್ಪಡೆಯಾಗಿದೆ. 2023 ಜೂನ್ 11 ರಿಂದ 2025 ಜುಲೈ 25ರ ಅವಧಿಯಲ್ಲಿ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೇಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ‌ ಪಡೆದಿದೆ.

Karnataka s Shakti Scheme Enters Golden Book of World Records with 5 Billion Women Passengers

ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು, ಉಪ ಮುಖ್ಯಮಂತ್ರಿ‌ ಹಾಗೂ ಕೆ.ಪಿ.ಸಿ.ಸಿ‌ ಅಧ್ಯಕ್ಷ ಡಿ ಕೆ‌ ಶಿವಕುಮಾರ್ ಅವರು ಬಲವಾಗಿ ನಂಬಿದ್ದಾರೆ ಎಂದು ಸಚಿವರು ತಿಳಿಸಿದರು.

ಸವಾಲಿನ ಶಕ್ತಿ ಯೋಜನೆ ಜಾರಿ

ನಾನು ಸಾರಿಗೆ ಸಚಿವನಾಗಿ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ‌ ಕೂಡಲೇ ದೇಶದಲ್ಲೇ ಪ್ರಪ್ರಥಮ ಬಾರಿಗೆ ‌ಜಾರಿಗೆ ತಂದ ಗ್ಯಾರೆಂಟಿ ಯೋಜನೆಯಾದ ಶಕ್ತಿ‌ ಯೋಜನೆಯು ಅತ್ಯಂತ ಸವಾಲಿನಿಂದ ಕೂಡಿದ್ದಾಗಿತ್ತು. ಕಳೆದ ಐದಾರು ವವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ‌ ಬಸ್ಸುಗಳ ಸೇರ್ಪಡೆಯಾಗಿಲ್ಲ. ಹೊಸ‌ ನೇಮಕಾತಿ ಆಗಿಲ್ಲ. ಸಾರಿಗೆ ಸಂಸ್ಥೆಗಳು ಸಾಲದ‌ ಸುಳಿಯಲ್ಲಿದ್ದವು. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಮುನ್ನಡೆಸಿರುವುದು ನನಗೆ ವೈಯಕ್ತಿಕವಾಗಿ ಸಂತೃಪ್ತಿ ತಂದಿದೆ ಕಾರ್ಯವೈಖರಿ ವಿವರಿಸಿದರು.

Karnataka s Shakti Scheme Enters Golden Book of World Records with 5 Billion Women Passengers

5800 ಹೊಸ ಬಸ್ ಸೇರ್ಪಡೆ

ಈ ಎರಡು ವರ್ಷಗಳ‌ ಶಕ್ತಿ ಯೋಜನೆಯ ಹಾದಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ‌ 5800 ಹೊಸ ಬಸ್ಸುಗಳ ಸೇರ್ಪಡೆ 10000 ಹೊಸ ನೇಮಕಾತಿ, ಸಾಲ ಪಾವತಿಸಲು ಸರ್ಕಾರದಿಂದ 2000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಇತರೆ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದೆ. ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಸವಾಲುಗಳಿದ್ದವು. ಎಲ್ಲವನ್ನು ನಾನು ಇತ್ಯರ್ಥ ಪಡಿಸಲು ಸಾಧ್ಯವಿಲ್ಲ ಆದರೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ ಮತ್ತು ಮಾಡುತ್ತಿದ್ದೇನೆ.

ಶಕ್ತಿ ಯೋಜನೆ: ಮಹಿಳೆ ಉದ್ಯೋಗಿಗಳ ಸಂಖ್ಯೆ ಹೆಚ್ಚಳ

Beyond Free Rides- ಎಂಬ ಹೆಸರಿನಲ್ಲಿ ಸಸ್ಟನೇಬಲ್ ಮೊಬಿಲಿಟಿ ನೆಟ್‌ವರ್ಕ್ ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ನಡೆಸಿರುವ ಅಧ್ಯಯನ ನಡೆಸಿ ವರದಿ ನೀಡಿದೆ. ಅದರಡಿ ಬೆಂಗಳೂರಿನಲ್ಲಿ ಶೇಕಡಾ 23 ಮತ್ತು ಹುಬ್ಬಳ್ಳಿ - ಧಾರವಾಡದಲ್ಲಿ ಶೇಕಡಾ 21 ಮಹಿಳಾ ಉದ್ಯೋಗಿಗಳ ಸಂಖ್ಯೆಯು ಶಕ್ತಿ ಯೋಜನೆಯಿಂದ ಹೆಚ್ಚಳವಾಗಿದೆಯೆಂದು ತಿಳಿಸಿದೆ. ಇದರಿಂದ‌ ರಾಜ್ಯದ ತಲಾ ಆದಾಯವು ಹೆಚ್ಚಳವಾಗಲು ಕಾರಣವಾಗಿದೆ ಎಂದು ಹೇಳಿದರು.

ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಇಂದು ಹೆಮ್ಮೆ ಮತ್ತು ಗೌರವ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ‌ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿರುವುದೇ ನಮ್ಮ ಸರ್ಕಾರದ ಶಕ್ತಿ‌ ಯೋಜನೆಯ ಯಶಸ್ಸಿಗೆ ಹಿಡಿ‌ದ ಕೈಗನ್ನಡಿಯಾಗಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಇಂಥದ್ದೊಂದು ಚಾರಿತ್ರಿಕ ಸಾಧನೆಯು KSRTC, BMTC, KKRTC ಮತ್ತು NWKRTC ಸಾರಿಗೆ ಸಂಸ್ಥೆಯ ಆಡಳಿತ ಮಂಡಳಿ, ಸಾರಿಗೆ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸಾರಿಗೆ ಇಲಾಖೆಯ ಕಾರ್ಯದರ್ಶಿ, ವ್ಯವಸ್ಥಾಪಕ ನಿರ್ದೇಶಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಮರ್ಪಿಸಲಾಗಿದೆ. ಸಂಸ್ಥೆಗಳ ಸಿಬ್ಬಂದಿಗಳ ಪರಿಶ್ರಮ, ಕಾರ್ಯತತ್ಪರತೆ ಮತ್ತು ಪ್ರಾಮಾಣಿಕ ಸೇವೆ ಅನನ್ಯ, ಅಭಿನಂದನೀಯ. ಇದರೊಂದಿಗೆ ಕಾರ್ಮಿಕ‌ ಮುಖಂಡರುಗಳ ಸಹಕಾರವನ್ನು ಮರೆಯುವಂತಿಲ್ಲ. ಅವರಿಗೆ ಸರ್ಕಾರದ ಪರ ಧನ್ಯವಾದ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+