ಮೇ. 16 ರಿಂದ ಶಾಲೆಗಳು ಪುನರಾರಂಭಕ್ಕೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು, ಏ. 21: ರಾಜ್ಯ ಪಠ್ಯ ಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಶಾಲೆಗಳ ಪ್ರಕಸ್ತ ಸಾಲಿನ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಕ್ರಿಯಾ ಯೋಜನೆಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಕ್ರಿಯಾ ಯೋಜನೆ ಪ್ರಕಾರ ಮೇ 16 ರಿಂದ ಏಪ್ರಿಲ್ 10 ರ ವರೆಗೆ ಶಾಲೆ ಕಾರ್ಯನಿರ್ವಹಣೆಗೆ ಅವಕಾಶ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೇ 16 ರಂದು ಶಾಲೆಗಳು ಆರಂಭ ಮಾಡಬೇಕು. ಮೇ 16 ರಿಂದ ಅಕ್ಟೋಬರ್ 02 ರವರೆಗೂ ಮೊದಲೇ ಅವಧಿ ಮುಕ್ತಾಯವಾಗಲಿದೆ. ದಸರಾ ರಜೆ ಬಳಿಕ ಅಕ್ಟೋಬರ್ 17 ರಿಂದ ಪುನಃ ಶಾಲೆಗಳು ಪ್ರಾರಂಭವಾಗಲಿದ್ದು, ಏ. 10 ರ ವರೆಗೆ ಶಾಲೆಗಳು ಕಾರ್ಯ ನಿರ್ವಹಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕೋವಿಡ್ ಪರಿಣಾಮ ಕಳೆದ ಮೂರು ವರ್ಷ ಶೈಕ್ಷಣಿಕ ಚಟುವಟಿಕೆ ಮೇಲೆ ಪ್ರಭಾವ ಬೀರಿದೆ. ಅನಿವಾರ್ಯವಾಗಿ ಶಾಲೆಗಳನ್ನು ಮುಚ್ಚಲಾಗಿತ್ತು. ಆನ್‌ ಲೈನ್ ತರಗತಿಗಳಿಗೆ ಅವಕಾಶ ಮಾಡಿಕೊಟ್ಟಿದ್ದರೂ ಮಕ್ಕಳ ಕಲಿಕೆ ಮೇಲೆ ನಕಾರಾತ್ಮಕ ಪರಿಣಾಮ ಬೀರಿತ್ತು. ಮಕ್ಕಳ ಕಲಿಕೆಗೆ ಒತ್ತು ನೀಡಿದ್ದು, ಈ ವರ್ಷ ಹೆಚ್ಚುವರಿಯಾಗಿ ಕಲಿಕೆಗೆ ಅವಕಾಶ ಮಾಡಿಕೊಟ್ಟು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ವರ್ಷವನ್ನು ಕಲಿಕಾ ಚೇತರಿಕೆ ವರ್ಷ ಎಂದು ಘೋಷಣೆ ಮಾಡಲಾಗಿದೆ.

2022-23 academic year schools re open from May 16th in Karnataka

ರಜಾ ಅವಧಿ:

ಅಕ್ಟೋಬರ್ 3 ರಿಂದ ಅಕ್ಟೋಬರ್ 16 ರ ವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಬೇಸಿಗೆ ರಜೆಯನ್ನು ಏಪ್ರಿಲ್ 11 ರಿಂದ ಮೇ. 28 ರ ವರೆಗೆ ನೀಡಲಾಗಿದೆ. ಒಟ್ಟಾರೆ ಪ್ರಸಕ್ತ ಸಾಲಿನಲ್ಲಿ 256 ದಿನ ಶಾಲೆಗಳು ಕಾರ್ಯ ನಿರ್ವಹಿಸಲಿವೆ.

2022-23 academic year schools re open from May 16th in Karnataka

ಪ್ರವೇಶಕ್ಕೆ ದಿನಾಂಕ ನಿಗದಿ:

ಮಕ್ಕಳ ಶಾಲಾ ದಾಖಲಾತಿಯನ್ನು ಮೇ. 16 ರಿಂದ ಆರಂಭಿಸಿ ಜುಲೈ 31 ರ ಒಳಗೆ ಪುರ್ಣಗೊಳಿಸಬೇಕು. ಕೋವಿಡ್ ಸನ್ನಿವೇಶನದ ಹಿನ್ನೆಲೆಯಲ್ಲಿ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸಲು ಸಾಧ್ಯವಾಗದಿದ್ದಲ್ಲಿ, ಪರ್ಯಾಯ ಮಾರ್ಗಗಳ ಮೂಲಕ ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+