School Summer Holidays 2025: ರಾಜ್ಯದಲ್ಲಿ ಶಾಲೆಗಳಿಗೆ ಬೇಸಿಗೆ ರಜೆ ಆರಂಭ, ಮುಕ್ತಾಯ ಯಾವಾಗ?
School Summer Holidays 2025: ಇದೀಗ ರಾಜ್ಯದ ಬಹತೇಕ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಈಗಾಗಲೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವಧಿಗೂ ಮುನ್ನವೇ ಶಾಲಾಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನುವ ಸುದ್ದಿ ಹಬ್ಬಿತ್ತು. ಆದರೆ, ಇದೀಗ ಕೊನೆಗೂ ಬೇಸಿಗೆ ರಜೆ ಯಾವಾಗ ಆರಂಭವಾಗಲಿದೆ ಹಾಗೂ ಯಾವಾಗ ಕೊನೆಗೊಳ್ಳಲಿದೆ ಎನ್ನುವ ಅಪ್ಡೇಟ್ ಮಾಹಿತಿಯೊಂದು ಲಭ್ಯವಾಗಿದೆ.
ರಾಜ್ಯದಲ್ಲಿ ಈಗಾಗಲೇ ವಿವಿಧ ಹಂತಗಳಲ್ಲಿ ಪರೀಕ್ಷೆಗಳು ಆರಂಭ ಆಗಿವೆ. ಪಿಯುಸಿ ಪರೀಕ್ಷೆಗಳು ಮುಕ್ತಾಯದ ಹಂತದಲ್ಲಿವೆ. 10ನೇ ತರಗತಿ ಪರೀಕ್ಷೆಗಳು ಸದ್ಯದಲ್ಲೇ ಆರಂಭ ಆಗಲಿವೆ. ಇನ್ನು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿವಿಧ ತರಗತಿಗಳ ಪರೀಕ್ಷೆಗಳು ಶಾಲಾ ಹಂತದಲ್ಲಿ ಆರಂಭ ಆಗಿವೆ.

ಎಸ್‌ಎಸ್‌ಎಲ್‌ಸಿ ಬಿಟ್ಟು ಬಹುತೇಕ ತರಗತಿಗಳ ಎಲ್ಲಾ ಪರೀಕ್ಷೆಗಳೂ ಇದೇ ತಿಂಗಳು ಅಂದರೆ ಮಾರ್ಚ್‌ವೊಳಗೆ ಮುಕ್ತಾಯ ಆಗಲಿವೆ. ಇನ್ನು ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಕಾರ, ಈ ವರ್ಷದ ಬೇಸಿಗೆ ರಜೆಗಳು ಬಹುತೇಕ ಏಪ್ರಿಲ್‌ನಲ್ಲಿಯೇ ಆರಂಭ ಆಗಲಿದ್ದು, ಮೇ ಅಂತ್ಯದವರೆಗೂ ರಜೆ ಇರಲಿದೆ.
ಕಳೆದ ವರ್ಷದ ಶೈಕ್ಷಣಿಕ ಅವಧಿಯಲ್ಲಿಯೇ ಹೊರಡಿಸಿದ್ದ ಶಿಕ್ಷಣ ಇಲಾಖೆಯ ಸುತ್ತೋಲೆಯ ಪ್ರಕಾರ, 2025ನೇ ಸಾಲಿನ ಬೇಸಿಗೆ ರಜೆಗಳು ಏಪ್ರಿಲ್ 11ರಿಂದಲೇ ಆರಂಭ ಆಗಲಿದ್ದು, 2025ರ ಮೇ 28ರ ವರೆಗೆ ರಜೆಗಳು ಇರಲಿವೆ ಎನ್ನುವ ಅಪ್ಡೇಟ್ ಮಾಹಿತಿಯೊಂದು ಲಭ್ಯವಾಗಿದೆ.

ಈಗಾಗಲೇ ರಜ್ಯದೆಲ್ಲೆಡೆ ರಣಬಿಸಿಲು ಮುಂದುವರೆದ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಯಾವಾಗ ಪರೀಕ್ಷೆಗಳನ್ನು ಮುಗಿಸಿ ರಜೆ ನೀಡಲಾಗುತ್ತದೆ ಎಂದು ಕಾದು ಕುಳಿತ ಪೋಷಕರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಾಂತಾಗಿದೆ. ಮಾಹಿತಿ ಪ್ರಕಾರ, ಈ ವರ್ಷದ ಬೇಸಿಗೆ ರಜೆ ಏಪ್ರಿಲ್ 11ರಿಂದ ಆರಂಭ ಆಗಲಿದ್ದು, ಮೇ 28 ರವರೆಗೆ ರಜೆಗಳು ಇರಲಿವೆ ಎಂದು ತಿಳಿದುಬಂದಿದೆ. ಇನ್ನು ಜೂನ್‌ಗಿಂತ ಮೊದಲೇ ಶಾಲೆಗಳು ಪ್ರಾರಂಭವಾಗುತ್ತವೆ ಎನ್ನಲಾಗುತ್ತಿದೆ.
ಏಪ್ರಿಲ್ 10ರಂದು ಮಹಾವೀರ ಜಯಂತಿ ಇದ್ದು, ಅದಕ್ಕಾಗಿ, ಒಂದು ದಿನ ಮುಂಚೆ ಏಪ್ರಿಲ್ 9ರಂದೇ ಫಲಿತಾಂಶ ಪ್ರಕಟಿಸಿ ಶಿಕ್ಷಣ ಇಲಾಖೆ ರಜೆ ಘೋಷಿಸುವ ಸಾಧ್ಯತೆಯಿದೆ. ಇದೀಗ ಸರ್ಕಾರ ಅಧಿಕೃತ ಆದೇಶಕ್ಕಾಗಿ ಕಾಯುತ್ತಿದ್ದೇವೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ.
ಇದೀಗ ಬಿಸಿಲಿನ ಧಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಕಿದ್ದು, ಈ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಹಲವೆಡೆ ಅರ್ಧ ದಿನ ಶಾಲೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಆದ್ರೆ ಆಯಾ ಜಿಲ್ಲೆಗಳಲ್ಲಿ ಅಧಿಕಾರಿಗಳು ತೆಗೆದುಕೊಳ್ಳುವ ನಿರ್ಧಾರದ ಮೇಲೆ ಇದು ನಿಂತಿದೆ ಎಂದು ಹೇಳಲಾಗುತ್ತಿದೆ.
ಇನ್ನು ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಲಾಗಿದೆ. ಸರ್ಕಾರಿ ರಜೆಗಳನ್ನು ಹೊರತುಪಡಿಸಿ ಪ್ರತಿಭಟನೆ, ವಿಶೇಷ ಕಾರ್ಯಕ್ರಮಗಳಂತಹ ಸಂದರ್ಭಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರಿಂದ ಈ ವರ್ಷದ ಆರಂಭದಿಂದಲೂ ಇಲ್ಲಿಯವರೆಗೂ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ. ಮತ್ತೊಂದೆಡೆ, ಕೆಲವೇ ದಿನಗಳಲ್ಲಿ ಅಂದರೆ ಮುಂದಿನ ತಿಂಗಳು ಏಪ್ರಿಲ್‌ನಿಂದಲೇ ಬೇಸಿಗೆ ರಜೆಗಳು ಆರಂಭವಾಗಲಿವೆ ಎಂದು ತಿಳಿದುಬಂದಿದೆ.












Click it and Unblock the Notifications