Karnataka Schools: ರಾಜ್ಯದ 10,241 ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ: ₹321 ಕೋಟಿ ವೆಚ್ಚದಲ್ಲಿ ದುರಸ್ತಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು 321.44 ಕೋಟಿ ರೂ. ವೆಚ್ಚದಲ್ಲಿ ದುರಸ್ತಿಪಡಿಸಲಾಗಿದೆ. ಅಲ್ಲದೆ, 1,252 ಕೋಟಿ ರೂ. ಖರ್ಚು ಮಾಡಿ, 8,355 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಶ್ರೀ ಮಧು ಬಂಗಾರಪ್ಪ ವಿಧಾನ ಪರಿಷತ್ತಿನಲ್ಲಿ ಸೋಮವಾರ ತಿಳಿಸಿದರು.

ವಿಧಾನಪರಿಷತ್‌ ಕಲಾಪ ವೇಳೆ ಸದಸ್ಯರಾದ ಶ್ರೀ ತಿಪ್ಪಣ್ಣಪ್ಪ ಕಮಕನೂರು ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಪಾಯಕಾರಿ ಸ್ಥಿತಿಯಲ್ಲಿರುವ ಶಾಲೆಗಳ ಕಟ್ಟಡದ ದುರಸ್ತಿಗೆ ತುರ್ತು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ರಾಜ್ಯದ ಯಾವುದೇ ಸರ್ಕಾರಿ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ ಎಂದಾದರೆ ಕೂಡಲೇ ಗುರುತಿಸಬೇಕು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಇಲಾಖೆಯ ಬಿಇಒ, ಡಿಡಿಪಿಐ ಮತ್ತಿತರ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದರು.

Karnataka Schools

ಸರ್ಕಾರಿ ಶಾಲೆಗೆ ಬರುವ ಮಕ್ಕಳು ಸುರಕ್ಷಿತವಾಗಿರುವಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಿಗದಿತವಾಗಿ ಶಾಲೆಗಳ ಗುಣಮಟ್ಟದ ಬಗ್ಗೆ ವರದಿ ನೀಡುವಂತೆಯೂ ಸೂಚಿಸಲಾಗಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ಕೊಟ್ಟರು.

ಚಾವಣಿ ಕುಸಿತ: ತಪ್ಪಿತಸ್ಥರ ವಿರುದ್ಧ ಕ್ರಮ

ಇನ್ನೂ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಜಿಲ್ಲೆ ಸಂಗೋಳಗಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ತಾರಸಿಯ ಗಾರೆ ಕುಸಿದಿರುವುದು ಮತ್ತು ಕಲಬುರಗಿ ನಗರದ ಸರ್ಕಾರಿ ಮಹಿಳಾ ಪಿಯು ಕಾಲೇಜಿನ ಚಾವಣಿ ಕುಸಿದಿರುವುದು ತಮ್ಮ ಗಮನಕ್ಕೆ ಬಂದಿದೆ. ಈಗಾಲೇ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಸಚಿವರು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

59 ಸರ್ಕಾರಿ ಶಾಲೆಗಳ ದುರಸ್ತಿ ಪ್ರಗತಿ

2026-27 ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 59 ಸರ್ಕಾರಿ ಶಾಲೆಗಳನ್ನು ದುರಸ್ತಿ ಪಡಿಸಲಾಗುತ್ತಿದೆ. 121.07 ಕೋಟಿ ರೂಪಾಯಿ ವೆಚ್ಚದಲ್ಲಿ 55 ತರಗತಿ ಕೊಠಡಿಗಳ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದೆ. ಇನ್ನೂ 2024-25ನೇ ಸಾಲಿನಲ್ಲಿ 248 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 978 ತರಗತಿ ಕೂರಠಡಿಗಳ ದುರಸ್ತಿಗಾಗಿ ರೂ.30.21 ಕೋಟಿಗಳನ್ನು ಬಿಡುಗಡೆ ಮಾಡಲಾಗಿತ್ತು.

ಅದೇ ರೀತಿ 2024-25ನೇ ಸಾಲಿಗೆ 118 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ತಲಾ 01 ರಂತೆ ಒಟ್ಟು 118 ಶೌಚಾಲಯ ಬ್ಲಾಕ್‌ ನಿರ್ಮಾಣ ಮಾಡಲು ರೂ.10.00 ಕೋಟಿಗಳನ್ನು ಬಿಡುಗಡೆ ಮಾಡಲಾಗಿತ್ತು. 2025-26ನೇ ಸಾಲಿನಲ್ಲಿ 117 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 266 ತರಗತಿ ಕೂಠಡಿ ನಿರ್ಮಾಣ ಮಾಡಲು ರೂ.75.98 ಕೋಟಿ, 96 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 267 ತರಗತಿ ಕೂಠಡಿ ದುರಸ್ತಿಗಾಗಿ ರೂ 5.24 ಕೋಟಿ ಹಾಗೂ 67 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 123 ಶೌಚಾಲಯ ಬ್ಲಾಕ್‌ಗಳ ನಿರ್ಮಾಣಕ್ಕಾಗಿ 12.60 ಕೋಟಿ ಅನುದಾನಕ್ಕೆ ಮಂಜೂರಾತಿ ನೀಡಲಾಗಿದೆ ಎಂದು ಅವರು ಅಂಕಿ ಸಂಖ್ಯೆ ಸಮೇತ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+