• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಾಲಾ ಬೇಸಿಗೆ ರಜೆ ಕುರಿತು ಸರ್ಕಾರದಿಂದ ಮಹತ್ವದ ನಿರ್ಧಾರ

|

ಬೆಂಗಳೂರು,ಫೆಬ್ರವರಿ 10: ಶಾಲಾ ಬೇಸಿಗೆ ರಜೆ ಕುರಿತು ಕರ್ನಾಟಕ ಸರ್ಕಾರ ಮಹತ್ವದ ಸೂಚನೆ ನೀಡಿದೆ.

ಕಳೆದ ವರ್ಷ ಕೊರೊನಾ ಸೋಂಕು, ಲಾಕ್ ಡೌನ್ ನಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಈ ಬಾರಿ ಬೇಸಿಗೆ ರಜೆ ಕಡಿತ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಫೆ.20ರವರೆಗೆ ಶಾಲಾ,ಕಾಲೇಜು ದಾಖಲಾತಿ ದಿನಾಂಕ ವಿಸ್ತರಣೆ: ಸುರೇಶ್ ಕುಮಾರ್

ಮುಂಬರುವ ಬೇಸಿಗೆ ರಜೆ ದಿನಗಳನ್ನು ಕಡಿತ ಮಾಡಲಾಗುವುದು ಎಂದು ಹೇಳಿದ್ದಾರೆ.ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಪರೀಕ್ಷೆಗಳು ಜೂನ್‌ನಲ್ಲಿ ಕೊನೆಗೊಳ್ಳುತ್ತವೆ ಮತ್ತು ಮುಂದಿನ ಶೈಕ್ಷಣಿಕ ವರ್ಷವು ಜುಲೈ ಆರಂಭದಲ್ಲಿ ಪ್ರಾರಂಭವಾಗುವುದರಿಂದ, ಬೇಸಿಗೆ ರಜಾದಿನಗಳನ್ನು ಕಡಿತ ಮಾಡಲಾಗುವುದು. ಆದರೆ ರದ್ದುಗೊಳಿಸುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಸಕಾಲಕ್ಕೆ ಶಾಲಾ, ಕಾಲೇಜು ಪ್ರಾರಂಭ ಮಾಡದ ಹಿನ್ನೆಲೆಯಲ್ಲಿ ಶಿಕ್ಷಣದಿಂದ ಮಕ್ಕಳು ದೂರ ಸರಿಯುತ್ತಿದ್ದಾರೆ. ಅಲ್ಲದೆ ಬಾಲ್ಯ ವಿವಾಹದ ಸಂಖ್ಯೆಯು ಹೆಚ್ಚಳವಾಗಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದುಹೋದ ಸಮಯವನ್ನು ಸರಿದೂಗಿಸಲು ಮತ್ತು ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಳಂಬವಾಗುವುದನ್ನು ತಡೆಯಲು, ಶಿಕ್ಷಣ ಇಲಾಖೆಯು ರಜಾದಿನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಯೋಜನೆಯನ್ನು ರೂಪಿಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

   ಶಿಕ್ಷಣ ಸಚಿವರಿಂದ ಮಹತ್ವದ ನಿರ್ಧಾರ! | Oneindia Kannada

   ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಸಕಾಲಕ್ಕೆ ಶಾಲಾ, ಕಾಲೇಜು ಪ್ರಾರಂಭ ಮಾಡದೆ ಇರುವುದರಿಂದ ಶಿಕ್ಷಣದಿಂದ ಮಕ್ಕಳು ದೂರ ಸರಿಯುತ್ತಿದ್ದಾರೆ. ಅಲ್ಲದೆ ಬಾಲ್ಯ ವಿವಾಹದ ಸಂಖ್ಯೆಯು ಹೆಚ್ಚಳವಾಗಿದೆ ಎಂದು ಸಚಿವರು ತೀವ್ರ ಕಳವಳ ವ್ಯಕ್ತಪಡಿಸಿದರು.

   English summary
   Karnataka Minister for Primary and Secondary Education Suresh Kumar on Tuesday announced that the summer holidays will be curtailed in schools this year.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X