ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

11 ಗಂಟೆಗೆ ಕರ್ನಾಟಕ ದ್ವಿತೀಯ ಪಿಯು ಫಲಿತಾಂಶ

|
Google Oneindia Kannada News

Recommended Video

ಕರ್ನಾಟಕ 2nd ಪಿ ಯು ಸಿ ಫಲಿತಾಂಶ ಇಂದು ಪ್ರಕಟ | ಮೇ 7ರಂದು ಎಸ್ ಎಸ್ ಎಲ್ ಸಿ ರಿಸಲ್ಟ್ಸ್ | Oneindia Kannada

ಬೆಂಗಳೂರು, ಏಪ್ರಿಲ್ 30: ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಗಳ ಫಲಿತಾಂಶ ಇಂದು (ಏ.30) ರಂದು ಪ್ರಕಟವಾಗಲಿದೆ.

ಫಲಿತಾಂಶವನ್ನು www.pue.kar.nic.in ವೆಬ್‌ಸೈಟ್‌ನಲ್ಲಿ ನೋಂದಣಿ ಸಂಖ್ಯೆಯನ್ನು ಬಳಸಿ ವೀಕ್ಷಿಸಬಹುದು.2017-18ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಗಳು ಮಾರ್ಚ್ 1ರಿಂದ 17ರವರೆಗೆ ನಡೆದಿತ್ತು. ಸುಮಾರು 6.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಂಡಿದ್ದರು. ಅದರಲ್ಲಿ 3,53,000 ವಿದ್ಯಾರ್ಥಿಗಳು ಮತ್ತು 3,34,000 ವಿದ್ಯಾರ್ಥಿನಿಯರಿದ್ದರು.

ಆನ್ ಲೈನ್ ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನೋಡುವುದು ಹೇಗೆ?ಆನ್ ಲೈನ್ ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನೋಡುವುದು ಹೇಗೆ?

ರಾಜ್ಯದಾದ್ಯಂತ 1,004 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ವಿದ್ಯಾರ್ಥಿಗಳು ತಾವು ಓದಿದ ಕಾಲೇಜಿನಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಪ್ರಶ್ನೆ ಪತ್ರಿಕೆ ರವಾನಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿತ್ತು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

Second year PU result out soon

ಸೋಮವಾರ ಮಧ್ಯಾಹ್ನ ಒಂದು ಗಂಟೆಗೆ ಫಲಿತಾಂಶವನ್ನು ವೆಬ್‌ಸೈಟ್‌ಗಳಲ್ಲಿ ನೋಡಬಹುದು. ಮೇ 1ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು kar.nic.in , karresults.nic.inಮತ್ತು pue.kar.nic.in ವೆಬ್‌ಸೈಟ್‌ಗಳ ಮೂಲಕ ಪಡೆದುಕೊಳ್ಳಬಹುದು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೆಬ್‌ಸೈಟ್‌ ಗಳಲ್ಲಿ ಫಲಿತಾಂಶ ನೋಡುವುದು ಹೇಗೆ?
1) http://karresults.nic.in ವೆಬ್‌ಸೈಟ್‌ಗೆ ಭೇಟಿನೀಡಿ,
2) ನೋಂದಣಿ ಸಂಖ್ಯೆ ಮತ್ತು ಇತರ ಅಗತ್ಯ ಮಾಹಿತಿ ನೀಡಿ,
3) Submit ಬಟನ್ ಕ್ಲಿಕ್ ಮಾಡಿ,
4) ಫಲಿತಾಂಶದ ಮಾಹಿತಿಯನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಬಹುದು, ಎಸ್‌ಎಂಎಸ್ ಮೂಲಕ ಫಲಿತಾಂಶ, ನಿಮ್ಮ ಮೊಬೈಲ್‌ನಲ್ಲಿ KAR12 ಎಂದು ಟೈಪ್ ಮಾಡಿ, ಸ್ಪೇಸ್ ಕೊಟ್ಟು ನಿಮ್ಮ ನೋಂದಣಿ ಸಂಖ್ಯೆಯನ್ನು ಟೈಪ್ ಮಾಡಿ. 56263ಗೆ ಎಸ್‌ಎಂಎಸ್ ಮಾಡಿ. ಫಲಿತಾಂಶವನ್ನು ಎಸ್‌ಎಂಎಸ್ ಮೂಲಕ ಪಡೆದುಕೊಳ್ಳಬಹುದು.

ಅಂಕ ಎಷ್ಟು ಬಂತೆಂದು ಬೀಗದೆ, ಬಾಗದೆ ಮುನ್ನಡೆಯಿರಿಅಂಕ ಎಷ್ಟು ಬಂತೆಂದು ಬೀಗದೆ, ಬಾಗದೆ ಮುನ್ನಡೆಯಿರಿ

ಕಳೆದ ವರ್ಷ ಉಡುಪಿ ಶೈಕ್ಷಣಿಕ ಜಿಲ್ಲೆಯು ಶೇ.90 ರಷ್ಟು ಫಲಿತಾಂಶ ಪಡೆದು ಮೊದಲ ಸ್ಥಾನದಲ್ಲಿತ್ತು. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳು ನಂತರದ ಸ್ಥಾನದಲ್ಲಿದ್ದವು. ಬೀದರ್ ಜಿಲ್ಲೆಯು ಶೇ.42.05 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿತ್ತು. 132 ಕಾಲೇಜುಗಳು ಶೂನ್ಯ ಸಂಪಾದಿಸಿದ್ದವು.

ಮೇ 7ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ: ರಾಜ್ಯ ಚುನಾವಣೆ ಮತದಾನ ನಡೆದು ಫಲಿತಾಂಶ ಹೊರಬೀಳುವ ಒಂಬತ್ತು ದಿನಗಳ ಮೊದಲೇ ಎಸ್ಸೆಸ್ಸೆಲ್ಸಿ ಫಲಿತಾಂಶ ಹೊರಬೀಳಲಿದೆ. ಏಪ್ರಿಲ್ 15ರಿಂದ 25ರವರೆಗೆ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ನಡೆಯಲಿದೆ.

ಮೇ 7ರಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಶಾಲೆಗಳಲ್ಲಿ ಮೇ 8ರಂದು ಪ್ರಕಟಿಸಲಾಗುತ್ತದೆ. ಮಾರ್ಚ್ 23ರಿಂದ ಏಪ್ರಿಲ್ 6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. ಒಟ್ಟು 8,54, 424 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

English summary
Around 6.90 lakhs sexond year PU students result will be out on Monday April 30, pre education department has told. The result will be declared in the department official website and students can get result at their colleges later.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X