ಕರ್ನಾಕಟದ ಶಬರಿಮಲೆ ಯಾತ್ರಿಕರಿಗೆ ಅಗತ್ಯ ಸಹಕಾರ ನೀಡಿ: ಕೇರಳ ಪತ್ರ ಬರೆದ ಶಾಲಿನಿ ರಜನೀಶ್
ಬೆಂಗಳೂರು, ನವೆಂಬರ್ 20: ಶಬರಿಮಲೆ ಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆಯನ್ನು ನೀಡಲು ಕೋರಿ ಕೇರಳದ ಮುಖ್ಯಕಾರ್ಯದರ್ಶಿಗಳಾದ ಡಾ.ಎ.ಜಯತಿಲಕ್ ಅವರಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಪತ್ರ ಬರೆದಿದ್ದಾರೆ.
ಕರ್ನಾಟಕ ರಾಜ್ಯದಿಂದ ಪ್ರತಿ ವರ್ಷ ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಶ್ರೀ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ, ವಿಶೇಷವಾಗಿ ನವೆಂಬರ್ ನಿಂದ ಜನವರಿ ತಿಂಗಳಿನಲ್ಲಿ ಶಬರಿಮಲೆಗೆ ವಾರ್ಷಿಕ ತೀರ್ಥಯಾತ್ರೆ ಕೈಗೊಳ್ಳುವ ಕರ್ನಾಟಕ ರಾಜ್ಯದ ಹೆಚ್ಚಿನ ಸಂಖ್ಯೆಯ ಭಕ್ತರ ಸುಗಮ ಸೌಲಭ್ಯ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇರಳ ಸರ್ಕಾರದ ಅಗತ್ಯ ಸಹಕಾರವನ್ನು ನೀಡುವಂತೆ ಮನವಿ ಮಾಡಿದ್ದಾರೆ.

ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಪತ್ರದಲ್ಲಿ, ಕರ್ನಾಟಕದ ಯಾತ್ರಿಕರು ಹೆಚ್ಚಾಗಿ ಬಳಸುವ ಪ್ರವೇಶ ಮಾರ್ಗಗಳಲ್ಲಿ, ವಿಶೇಷವಾಗಿ ಮಹತ್ವದ ದಿನಗಳಲ್ಲಿ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಸೂಕ್ತ ಸಾರಿಗೆ ವ್ಯವಸ್ಥೆ ಮಾಡುವುದು. ಅಗತ್ಯ ವೈದ್ಯಕೀಯ ನೆರವು, ತುರ್ತು ಪ್ರತಿಕ್ರಿಯೆ ಸೇವೆಗಳು ಮತ್ತು ಪ್ರಮುಖ ಸಾರಿಗೆ ಕೇಂದ್ರಗಳಲ್ಲಿ ಆರೋಗ್ಯ ಅಧಿಕಾರಿಗಳೊಂದಿಗೆ ಸಮನ್ವಯ ನಡೆಸುವುದು. ಯಾತ್ರಿಕರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಪೊಲೀಸ್ ಮತ್ತು ಸುರಕ್ಷತಾ ಕ್ರಮಗಳನ್ನು ವಿಶೇಷವಾಗಿ ಸೂಕ್ಷ್ಮ ಅಥವಾ ಹೆಚ್ಚಿನ ಸಾಂದ್ರತೆಯ ಸ್ಥಳಗಳಲ್ಲಿ ವ್ಯವಸ್ಥೆ ಮಾಡುವುದು.
ಯಾತ್ರಿಕರಿಗೆ ಸೌಲಭ್ಯಗಳು ಮತ್ತು ಕಾರ್ಯವಿಧಾನಗಳನ್ನು ಸಮನ್ವಯ ಮತ್ತು ಸಹಾಯ ಮಾಡಲು ಕನ್ನಡ ಭಾಷೆ ಸೇರಿದಂತೆ ಬಹುಭಾಷೆಗಳ ಸಂವಹನ ಹೊಂದಿರುವ ಸಹಾಯ ಕೇಂದ್ರಗಳು ಅಥವಾ ಮಾಹಿತಿ ಕೇಂದ್ರಗಳ ಸ್ಥಾಪನೆ ಮಾಡುವುದು. ತುರ್ತು ಪರಿಸ್ಥಿತಿ ಅಥವಾ ವಿಶೇಷ ಅವಶ್ಯಕತೆಗಳ ಸಂದರ್ಭದಲ್ಲಿ ಕರ್ನಾಟಕದ ಅಧಿಕಾರಿಗಳೊಂದಿಗೆ ಸಮನ್ವಯವನ್ನು ಸಾಧಿಸಲು ಕೇರಳದಲ್ಲಿ ಸಂಪರ್ಕ ಕೇಂದ್ರವನ್ನು ಸ್ಥಾಪಿಸುವುದು.
ಪ್ರತಿ ತೀರ್ಥಯಾತ್ರೆಯ ಋತುವಿನಲ್ಲಿ ಕೇರಳ ಸರ್ಕಾರವು ನೀಡುವ ನಿರಂತರ ಸಹಕಾರವನ್ನು ಕರ್ನಾಟಕ ಸರ್ಕಾರವು ಆತ್ಮೀಯವಾಗಿ ಗೌರವಿಸುತ್ತದೆ. ನಿಮ್ಮ ಬೆಂಬಲದೊಂದಿಗೆ, ಈ ವರ್ಷದ ತೀರ್ಥಯಾತ್ರೆಯು ಸುಗಮವಾಗಿ ಮುಂದುವರಿಯುತ್ತದೆ ಮತ್ತು ಎಲ್ಲಾ ಭಕ್ತರಿಗೆ ಸುರಕ್ಷಿತ ಮತ್ತು ಅರ್ಥಪೂರ್ಣ ಅನುಭವವನ್ನು ನೀಡುತ್ತದೆ ಎಂದು ನಮಗೆ ವಿಶ್ವಾಸವಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ನಿಮ್ಮ ಸಕಾರಾತ್ಮಕ ಸ್ಪಂದನೆ ಮತ್ತು ಅಗತ್ಯ ಸಹಕಾರಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ತಮ್ಮ ಅರೆಸರ್ಕಾರಿ ಪತ್ರದಲ್ಲಿ ಕೇರಳದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.
ಶಬರಿಮಲೆ ಯಾತ್ರಿಕರಿಗೆ ಸುರಕ್ಷತಾ ಸಲಹಾ ಮಾರ್ಗಸೂಚಿ
ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis) ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ.
1. ನೇಗ್ಲೇರಿಯಾ ಫೌಲೇರಿ (Naegleria fowlen) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳು.
2. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ
3. ನೇಗ್ಲೇರಿಯಾ ಫೌಲರಿ (Naegleria fowleri) ಅತ್ಯಂತ ವಿಷಕಾರಿ (virulent) ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis) ಎನ್ನುವ ಅಪರೂಪದ ಗಂಭೀರ ಮತ್ತು ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ. ಆದ್ದರಿಂದ ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.
4. ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು. ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ (behavioural disorders) ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications