3 ದಿನದಲ್ಲಿ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟ: ಕಿಮ್ಮನೆ ರತ್ನಾಕರ್

ಬೆಂಗಳೂರು, ಅಕ್ಟೋಬರ್. 14: ಪ್ರೌಢಶಾಲಾ ಶಿಕ್ಷಕರ ಆಯ್ಕೆ ಪಟ್ಟಿಯನ್ನು 3 ದಿನದೊಳಗೆ ಮತ್ತು 10 ದಿನದ ಬಳಿಕ ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಲಿದೆ.

ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ಆಯ್ಕೆ ಪ್ರಕ್ರಿಯೆ ಮುಗಿದಿದ್ದು ಯಾವುದೇ ಗೊಂದಲ ಇಲ್ಲ. ಮೊದಲಿಗೆ 1130 ಮಂದಿ ಪ್ರೌಢಶಾಲಾ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಇದಾದ ಮೇಲೆ 9511 ಜನ ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆ ಪಟ್ಟಿ ನೀಡಲಾಗುತ್ತದೆ ಎಂದು ತಿಳಿಸಿದರು.[ಶಿಕ್ಷಕರಿಗೂ ಗ್ರಾಮೀಣ ಸೇವೆ ಕಡ್ಡಾಯ : ಕಿಮ್ಮನೆ ರತ್ನಾಕರ್]

karnataka

28 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಮೊದಲಿಗೆ ಕೊರತೆ ಇರುವ ಜಾಗಗಳನ್ನು ಭರ್ತಿ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು. ಉಳಿದ ಹುದ್ದೆಗಳನ್ನು 2 ಕಂತುಗಳಲ್ಲಿ ನೇಮಿಸಿಕೊಳ್ಳಲು ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆಯ ಒಪ್ಪಿಗೆ ಪಡೆಯಲಾಗುವುದು ಎಂದು ತಿಳಿಸಿದರು.

ಶಿಕ್ಷಕರ ನೇಮಕದಲ್ಲಿ ಶಿಕ್ಷಣ ಇಲಾಖೆ ವಿಳಂಬ ಅನುಸರಿಸುತ್ತಿದೆ. ಈ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ಶಿಕ್ಷಣ ಇಲಾಖೆಗೆ ಪತ್ರ ಬರೆದು ಅಸಾಮಾಧಾನ ಹೊರ ಹಾಕಿದ್ದರು.[ಮೇಷ್ಟ್ರೇ, ಶಾಲಾ ಮಕ್ಕಳ ಗಲ್ಲ ಗಿಂಜ್ತೀರಾ? ಹುಷಾರ್!]

ಪಿಯು ಉಪನ್ಯಾಸಕರ ನೇಮಕ
ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅಂಕಮಿತಿ ಸಡಿಲಗೊಳಿಸುವುದು ಮತ್ತು ಬಡ್ತಿಗೆ ಸಂಬಂಧಿಸಿದಂತೆ ನಿಯಮಾವಳಿ ತಿದ್ದುಪಡಿ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಪಿಯು ಉಪನ್ಯಾಸಕರ ನೇಮಕಾತಿ ವಿಳಂಬವಾಗುತ್ತಿದೆ ಹೊರತು ಬೇರೆ ಯಾವುದೇ ಕಾರಣವಿಲ್ಲ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+