• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯದಲ್ಲಿ ಇಂದಿನಿಂದ ಟ್ರಾಫಿಕ್ ದಂಡ ಇಳಿಕೆ?

|

ಬೆಂಗಳೂರು, ಸೆಪ್ಟೆಂಬರ್ 16: ಸಂಚಾರ ಉಲ್ಲಂಘನೆಗೆ ವಿಧಿಸುತ್ತಿರುವ ದುಬಾರಿ ದಂಡ ಇಳಿಕೆ ಮಾಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಇಂದು ಅಧಿಕೃತ ಆದೇಶ ಹೊರಬೀಳಲಿದೆ.

ಈಗಾಗಲೇ ಸಾರಿಗೆ ಇಲಾಖೆಯು ದಂಡ ಮೊತ್ತದ ಇಳಿಕೆ ಪ್ರಮಾಣವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಶನಿವಾರ ಮತ್ತು ಭಾನುವಾರ ಸರ್ಕಾರಿ ರಜೆ ಇದ್ದಿದ್ದರಿಂದ ಆದೇಶ ಹೊರಬಿದ್ದಿರಲಿಲ್ಲ, ಬಹುತೇಕ ಸೋಮವಾರ ಆದೇಶ ಹೊರಬರುವ ನಿರೀಕ್ಷ ಇದೆ.

8 ದಿನದಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸಂಗ್ರಹಿಸಿದ ದಂಡವೆಷ್ಟು?

ಟ್ರಾಫಿಕ್ ನಿಯಮ ಉಲ್ಲಂಘನೆಗೆ ವಿಧಿಸಿದ ದುಬಾರಿ ಮೊತ್ತವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆಯಂತೆ ದಂಡಮೊತ್ತವನ್ನು ಕಡಿತಗೊಳಿಸಲಾಗಿದೆ. ಕೇಂದ್ರ ಸರ್ಕಾರವು ಸೆಪ್ಟೆಂಬರ್ 1ರಿಂದ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪರಿಷ್ಕರಿಸಿ ನಿಯಮ ಜಾರಿಗೊಳಿಸಿತ್ತು.

ದಂಡ ಪ್ರಮಾಣವನ್ನು ತಕ್ಷಣವೇ ಇಳಿಸಲು ನಿರ್ಧರಿಸಿದ್ದು ಸೆ.4ಕ್ಕೂ ಹಿಂದೆ ಇದ್ದ ನಿಯಮವನ್ನೇ ಮುಂದುವರೆಸಿದೆ.ಎರಡು ದಿನಗಳ ಹಿಂದೆ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದಂಡದ ಪ್ರಮಾಣ ಹೊರೆಯನ್ನು ಕಡಿಮೆ ಮಾಡಲೇಬೇಕು, ಇದಕ್ಕಾಗಿ ಗುಜರಾತ್ ಮಾದರಿಯ ಪರಿಷ್ಕರಣೆಗೆ ಆದೇಶ ಪ್ರತಿಗಳನ್ನು ತರಿಸಿ ಅಧ್ಯಯನ ನಡೆಸಿ ಎಂದು ಸಲಹೆ ನೀಡಿದ್ದರು.

ಟ್ರಾಫಿಕ್ ದಂಡ, ಕಾಂಗ್ರೆಸ್‌ಗೆ ಚುನಾವಣಾ ವಿಷಯ

ಟ್ರಾಫಿಕ್ ದಂಡ, ಕಾಂಗ್ರೆಸ್‌ಗೆ ಚುನಾವಣಾ ವಿಷಯ

ನೂತನ ಮೋಟಾರು ವಾಹನ ಕಾಯ್ದೆಯಲ್ಲಿನ ಭಾರೀ ದಂಡದ ವಿಷಯವನ್ನು ವರ್ಷಾಂತ್ಯಕ್ಕೆ ನಡೆಯಲಿರುವ ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆ ವೇಳೆ ಅಸ್ತ್ರವನ್ನಾಗಿ ಬಳಸಲು ಕಾಂಗ್ರೆಸ್ ನಿರ್ಧರಿಸಿದೆ.

ಟ್ರಾಫಿಕ್ ಇಲಾಖೆಯ ಸ್ಪಷ್ಟ ಆದೇಶ: ಈ ದಾಖಲೆ ಒರಿಜಿನಲ್ ಇಲ್ಲಾಂದ್ರೆ ಭಾರೀ ಫೈನ್

ಸರ್ಕಾರದ ಆದೇಶ ಕೈಸೇರುವವರೆಗೂ ದುಬಾರಿ ದಂಡ ಮುಂದುವರಿಕೆ

ಸರ್ಕಾರದ ಆದೇಶ ಕೈಸೇರುವವರೆಗೂ ದುಬಾರಿ ದಂಡ ಮುಂದುವರಿಕೆ

ಸರ್ಕಾರದಿಂದ ಅಧಿಕೃತ ಆದೇಶ ಬರುವವರೆಗೂ ದುಬಾರಿ ದಂಡ ಮುಂದುವರೆಸಲಿದ್ದೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಳೆ ದಂಡವನ್ನೇ ವಿಧಿಸುವಂತೆ ರಾಜ್ಯ ಸರ್ಕಾರ ಹೇಳಿದೆ ಎನ್ನುವ ವಿಚಾರ ಇದೆ ಆದರೆ ಅಧಿಕೃತವಾಗಿ ಆದೇಶ ನಮಗೆ ಬಂದಿಲ್ಲ ಹಾಗಾಗಿ ಅಲ್ಲಿಯವರೆಗೂ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಪ್ರಕಾರ ಪರಿಷ್ಕೃತವಾಗಿರುವ ದಂಡವನ್ನೇ ವಿಧಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಟ್ರಾಫಿಕ್ ನಿಯಮ ಉಲ್ಲಂಘನೆಗೆ ವಿಧಿಸುತ್ತಿರುವ ದಂಡ ವಾಹನ ಸವಾರರಿಗೆ ಹೊರೆಯಾಗಿದೆ ಎನ್ನುವ ಆರೋಪ ಕೇಳಿಬಂದ ಬಳಿಕ ಶೀಘ್ರವೇ ದಂಡದ ಮೊತ್ತವನ್ನು ಕಡಿಮೆ ಮಾಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ದುಬಾರಿ ದಂಡ: ವಾಹನ ಸವಾರರಿಗೆ ಕೊಂಚ ಸಮಾಧಾನ ನೀಡಿದ ಕೇಂದ್ರ ಸರ್ಕಾರ

ಮಹಾರಾಷ್ಟ್ರ, ಹರ್ಯಾಣ, ಜಾಖಂಡ್‌ನಲ್ಲಿ ಶೀಘ್ರ ಚುನಾವಣೆ

ಮಹಾರಾಷ್ಟ್ರ, ಹರ್ಯಾಣ, ಜಾಖಂಡ್‌ನಲ್ಲಿ ಶೀಘ್ರ ಚುನಾವಣೆ

ಮಹಾರಾಷ್ಟ್ರ, ಹರ್ಯಾಣ, ಜಾಖಂಡ್‌ಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ನೂತನ ಮೋಟಾರು ಕಾಯ್ದೆಯಲ್ಲಿ ಭಾರಿ ದಂಡ ಪರ, ವಿರೋಧ ಚರ್ಚೆ ಆರಂಭವಾಗಿರುವ ಬೆನ್ನಲ್ಲೇ ಇದೇ ದಂಡದ ವಿಷಯವನ್ನು ಬ್ರಹ್ಮಾಸ್ತ್ರವನ್ನಾಗಿ ಬಳಸಲು ಕಾಂಗ್ರೆಸ್ ನಿರ್ಧರಿಸಿದೆ. ಕೇಂದ್ರದಲ್ಲಿನ ತಮ್ಮದೇ ಸರ್ಕಾರ ಜಾರಿಗೆ ತಂದ ಕಾಯ್ದೆಯನ್ನು ಯಾವೇ ಜಾರಿಗೊಳಿಸದೇ ಹೋದಲ್ಲಿ ಅದು ಕೇಂದ್ರ ಬಿಜೆಪಿಗೆ ಸಾಕಷ್ಟು ಮುಜುಗರ ತರಲಿದೆ.

ಹುಷಾರ್‌! ಚಪ್ಪಲಿ ಹಾಕಿಕೊಂಡು ಬೈಕ್ ಓಡಿಸಿದರೂ ಬೀಳುತ್ತೆ ದಂಡ

ಈ ರಿಯಾಯಿತಿ ತಾತ್ಕಾಲಿಕ

ಈ ರಿಯಾಯಿತಿ ತಾತ್ಕಾಲಿಕ

ಈ ರಿಯಾಯ್ತಿ ತಾತ್ಕಾಲಿಕವಾಗಿದ್ದು ದಂಡ ಪ್ರಮಾಣವನ್ನು ಪರಿಷ್ಕರಿಸುವವರಿಗೆ ಜಾರಿಯಲ್ಲಿ ಇರಲಿದೆ. ಸಾರ್ವಜನಿಕರಿಗೆ ಹೆಚ್ಚು ಹೊರೆಯಾಗದಂತೆ ಆದರೆ ನಿಯಮ ಉಲ್ಲಂಘನೆ ಮಾಡಿದವರಿಗೆ ಬಿಸಿ ಮುಟ್ಟಿಸುವ ರೀತಿಯಲ್ಲಿ ಪರಿಷ್ಕರಿಸಲಾಗುವುದು ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವ.

ಶಾಕ್ ಆಯ್ತಾ, ಶಾಕ್ ಆಗ್ಲೇ ಬೇಕೂಂತ ತಾನೇ ಟ್ರಾಫಿಕ್ ಫೈನ್ ಹಾಕಿರೋದು..

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka Set To Slash Hefty Fines On Traffic Offenders From Today. Bowing to public pressure and the partys state unit cadres demand, the BJP-ruled Karnataka government looks set to reduce the hefty fines imposed on traffic offenders under the recently-amended Motor Vehicles Act (MVA), 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more