Karnataka rain: ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಮುಂದಿನ 2 ದಿನ ಮಳೆ, ಐಎಂಡಿ ವರದಿ
ಬೆಂಗಳೂರು, ಡಿಸೆಂಬರ್ 11: ಕರ್ನಾಟಕದ ದಕ್ಷಿಣ ಕನ್ನಡ, ಹಾಸನ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಾನುವಾರ ಸುರಿದ ಮಳೆ ಇನ್ನೂ ಎರಡರಿಂದ ಮೂರು ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮೂರು ದಿನಗಳ ಪೈಕಿ ಕರಾವಳಿಯಲ್ಲಿ ಮಳೆ ಆರ್ಭಟ ತುಸು ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ಅಂದರೆ ಭಾನುವಾರ ರಾಜ್ಯ ಒಂದೆರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಆಗಿದೆ. ಈ ಮಳೆ ಮುಂದುವರಿಯುವ ಲಕ್ಷಣಗಳು ಇವೆ ಇದರ ಹೊರತು ಗಂಭೀರ ಸ್ವರೂಪದ ಹವಾಮಾನ ಬದಲಾವಣೆಗಳು ಇಲ್ಲ ಎಂದು ಹೇಳಲಾಗುತ್ತಿದೆ.

ಕರಾವಳಿಯ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಲಕ್ಷಣಗಳು ಇವೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಸಾಧಾರಣ ಮಳೆ ನಿರೀಕ್ಷೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಗುರ ಮಳೆ ಆಗಬಹುದು ಎಂದು ಅಂದಾಜಿಸಲಾಗಿದೆ. ಮೂರು ದಿನ ನಂತರ ಒಣ ಹವೆಯ ವಾತಾವರಣ ಸೃಷ್ಟಿಯಾಗಲಿದೆ.
ಈ ಜಿಲ್ಲೆಗಳಲ್ಲಿ ಜೋರು ಮಳೆ ಸಂಭವ
ಅದೇ ರೀತಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಎರಡು ದಿನ ಜೋರು ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಬಿಸಿಲಿನ ದರ್ಶನವಾಗುವ ಆಗಲಿದೆ.

ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಣ್ಣ ಮಳೆಯು ಮುನ್ಸೂಚನೆಗಳೆ ಇಲ್ಲದಾಗಿದೆ. ಈ ಭಾಗದಲ್ಲಿ ಬರೀ ಶುಷ್ಕ ವಾತಾವರಣ, ಅಧಿಕ ಬಿಸಿಲು ಕಂಡು ಬರಲಿದೆ. ಬೆಳಗ್ಗೆ ಮತ್ತು ರಾತ್ರಿ ತುಸು ಚಳಿಯ ಅನುಭವ ಇತ್ತೀಚಿನ ದಿನಗಳಲ್ಲಿ ಆಗುತ್ತಿದೆ. ಇದರ ಹೊರತು ಇಲ್ಲಿ ಹಿಂಗಾರು ಮಳೆ ಸಂಪೂರ್ಣ ದುರ್ಬಲವಾಗಿದೆ.
ರಾಜ್ಯದ ಗರಿಷ್ಠ ತಾಪಮಾನ: ಬೆಂಗಳೂರು ಮಳೆ ವಿವರ
ರಾಜ್ಯದ ಗರಿಷ್ಠ ತಾಪಮಾನ ಹೊನ್ನಾವರ ಮತ್ತು ಕಾರವಾರದಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಪೆಣಂಬೂರು ಮತ್ತು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಧಿಕ ಉಷ್ಣಾಂಶ ಕಂಡು ಬಂದಿದೆ.
ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ಹಗುರದಿಂದ ಸಾಧಾರಣವಾಗಿ ಮಳೆ ಬರುವ ಮುನ್ಸೂಚನೆಗಳು ಇವೆ. ಇಂದು ಸೋಮವಾರ ಸಂಜೆ ನಂತರ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಭಾನುವಾರ ಅಷ್ಟಾಗಿ ಬಿಸಿಲಿನ ವಾತಾವರಣ ಕಂಡು ಬರಲಿಲ್ಲ. ಸಂಜೆ ಇನ್ನೇನು ಮಳೆ ಬಂದೆ ಬಿಟ್ಟಿತು ಎಂಬಂತಹ ವಾತಾವರಣ ಸೃಷ್ಟಿಯಾಗಿತ್ತು. ಇನ್ನೂ ಎರಡು ಮೂರು ದಿನ ನಗರದ ವಾತಾವರಣ ತಂಪಿನಿಂದ ಕೂಡಿರಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ (KSMDMC) ತಿಳಿಸಿದೆ.












Click it and Unblock the Notifications