ಶಿವಮೊಗ್ಗದಲ್ಲಿ ಪಶ್ಚಿಮ ಘಟ್ಟ ಅಭಿವೃದ್ಧಿ ಸಂಸ್ಥೆ ಸ್ಥಾಪನೆ
ಬೆಂಗಳೂರು, ಆ. 05: ಪಶ್ಚಿಮ ಘಟ್ಟ ಉಳಿವಿಗೆ ಸಂಬಂಧಿಸಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಪಶ್ಚಿಮ ಘಟ್ಟ ಅಭಿವೃದ್ಧಿ ಸಂಸ್ಥೆ ಸ್ಥಾಪಿಸಲು ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿದೆ.
ಶಿವಮೊಗ್ಗ ಜಿಲ್ಲೆ ಚಕ್ರಾದ 117 ಎಕರೆ ಪ್ರದೇಶದಲ್ಲಿ ಸಂಸ್ಥೆ ತಲೆ ಎತ್ತಲಿದೆ. ಇಲ್ಲಿ ಜೀವಸಂಕುಲ ವೈವಿದ್ಯ ಕಾಪಾಡುವಿಕೆ, ಸಂಶೋಧನೆ ಕೆಲಸಗಳು ನಿರಂತರವಾಗಿ ಸಾಗಲಿದೆ.[ಕರಾವಳಿ, ಮಲೆನಾಡಲ್ಲಿ ಮಳೆ ಅಬ್ಬರ ಹೇಗಿತ್ತು?]

ಅರಣ್ಯ ಸಚಿವ ರಮಾನಾಥ ರೈ ಸಲ್ಲಿಸಿದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅಸ್ತು ಹೇಳಿದೆ. ಈ ಬಗ್ಗೆ ವಿವರಣೆ ನೀಡಿದ ಸಚಿವರು, ನಾವು ಕಸ್ತೂರಿ ರಂಗನ್ ವರದಿ ಬಗ್ಗೆ ಯಾವ ಹೇಳಿಕೆಯನ್ನು ಸಲ್ಲಿಕೆ ಮಾಡಿಲ್ಲ. ಸಂಸದೆ ಶೋಭಾ ಕರಂದ್ಲಾಜೆ ಅರ್ಥವಿಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯ ಸರ್ಕಾರ ಗಣಿಗಾರಿಕೆನ್ನು ಸಂಪೂರ್ಣ ನಿಷೇಧ ಮಾಡಲು ಚಿಂತನೆ ನಡೆಸುತ್ತಿದೆ. ರಾಜ್ಯದಲ್ಲಿ ಯಾವುದೇ ಬಗೆಯ ಥರ್ಮಲ್ ಘಟಕ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.












Click it and Unblock the Notifications