ರಾಜ್ಯದಲ್ಲಿ ಮರಣ ಪ್ರಮಾಣಪತ್ರ ವಿತರಣೆ: ಸರ್ಕಾರದಿಂದ ಮಹತ್ವ ಆದೇಶ
Death Certificate: ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ಮರಣ ಪ್ರಮಾಣಪತ್ರ ವಿತರಣೆ ವ್ಯವಸ್ಥೆಯನ್ನು ಮತ್ತಷ್ಟು ಸರಳಗೊಳಿಸಿದೆ. ಈ ಸಂಬಂಧ ಶನಿವಾರ ನಮ್ಮ ಸರ್ಕಾರ ಪ್ರಮುಖ ಸುತ್ತೋಲೆ ಹೊರಡಿಸಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದ್ದಾರೆ. ಏನೆಲ್ಲ ನಿಯಮಗಳು ಜಾರಿಯಾಗಿದೆ. ವಿತರಣೆಗೆ ಏನೆಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ವಿವರ ಇಲ್ಲಿದೆ.
ಸಚಿವ ದಿನೇಶ್ ಗುಂಡೂರಾವ್ ಅವರು ಎಕ್ಸ್ ಪೋಸ್ಟ್ ನಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣಪತ್ರ (MCCD) ವಿತರಣಾ ವ್ಯವಸ್ಥೆಯನ್ನು ಪಾರದರ್ಶಕವಾಗಿ ಮತ್ತು ಕ್ರಮಬದ್ಧವಾಗಿ ಅನುಷ್ಠಾನಗೊಳಿಸುವ ಕುರಿತು ಆರೋಗ್ಯ ಇಲಾಖೆ ಮೂಲಕ ಹೊರಡಿಸಿದ ಸುತ್ತೋಲೆ ಇದಾಗಿದೆ ಎಂದರು.

ಕೇಂದ್ರ ಸರ್ಕಾರದ ಅಧಿಸೂಚನೆಯಂತೆ, ಕರ್ನಾಟಕದಲ್ಲಿ ನೋಂದಣಿ ಮತ್ತು ಜನನ ಮತ್ತು ಮರಣ (ತಿದ್ದುಪಡಿ) ನಿಯಮಗಳು, 2024 ಅನ್ನು 2025 ಜನವರಿ 16, ರಿಂದ ಜಾರಿಗೆ ತರಲಾಗುತ್ತಿದೆ. ಪ್ರಸ್ತುತ ದೃಢೀಕರಿಸಿರುವ ಶೇಕಡಾ 26.73ರಷ್ಟು ಮರಣ ಪ್ರಮಾಣದ ನೋಂದಣಿಯ ವ್ಯಾಪ್ತಿಯನ್ನು ಹೆಚ್ಚಿಸುವುದು. ಈ ನೆಲದ ಯಾವುದೇ ನಾಗರಿಕರ ಸಹಜ ಅಥವಾ ಅಸಹಜ ಸಾವಾದರೂ ಅದನ್ನು ವೈದ್ಯಕೀಯ ಇಲಾಖೆಯ ನಿಯಮದ ಅನ್ವಯ ನೋಂದಣಿಯಲ್ಲಿ ಬಿಟ್ಟುಹೋಗದಂತೆ ದಾಖಲೆಗೆ ಸೇರಿಸುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.
ಈ ಕಾರಣದಿಂದ ಆರೋಗ್ಯ ಸಂಸ್ಥೆಗಳಿಗೆ ಕಡ್ಡಾಯ ನಿಯಮ
1. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಸಂಭವಿಸುವ ಪ್ರತಿ ಮರಣಕ್ಕೂ ಕಡ್ಡಾಯವಾಗಿ MCCD (ಫಾರ್ಮ್ 4/4A) ನೀಡಬೇಕು.
2. MCCD ಅನ್ನು eJanMa ಮೂಲಕ ಸ್ಥಳೀಯ ರಿಜಿಸ್ಟರ್ಗೆ ಎಲೆಕ್ಟ್ರಾನಿಕ್ ರೂಪದಲ್ಲಿ ಸಲ್ಲಿಸಬೇಕು.
3. ಮರಣ ಸಂಭವಿಸಿದ 10 ದಿನಗಳ ಒಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
4. ಯಾವುದೇ ಮರಣಗಳು ಸಂಭವಿಸದಿದ್ದರೂ ಸಹ ('ಶೂನ್ಯ ವರದಿ'/Nil Report) ಮಾಸಿಕ ವರದಿಯನ್ನು ಕಡ್ಡಾಯವಾಗಿ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications