ಮತದಾರರ ಪಟ್ಟಿ ಪರಿಷ್ಕರಣೆಗೆ ಮತ್ತೆ ಗಡುವು ವಿಸ್ತರಣೆ: ಅಕ್ಟೋಬರ್ 27ಕ್ಕೆ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಈಗ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಗಡುವನ್ನ ಭಾರತ ಚುನಾವಣಾ ಆಯೋಗ ಮತ್ತೆ ವಿಸ್ತರಿಸಿದೆ. 2026ರ ಅಕ್ಟೋಬರ್‌ 01 ಅನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ನಡೆಸಲಾಗುತ್ತಿರುವ ಈ ಪರಿಷ್ಕರಣೆಯ ಹೊಸ ವೇಳಾಪಟ್ಟಿಯನ್ನ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಮನವಿಯ ಮೇರೆಗೆ ಚುನಾವಣಾ ಆಯೋಗವು ಪ್ರಕಟಿಸಿದೆ.

ಮತದಾರರ ಪಟ್ಟಿಯಿಂದ ಅರ್ಹ ಮತದಾರರು ಹೊರಗುಳಿಯದಂತೆ ನೋಡಿಕೊಳ್ಳಲು ಮತ್ತು ಆಕ್ಷೇಪಣೆಗಳನ್ನ ಸೂಕ್ತವಾಗಿ ಪರಿಶೀಲಿಸಲು ಕಾಲಾವಕಾಶ ಬೇಕಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ವೇಳಾಪಟ್ಟಿಯ ಬಗ್ಗೆ ಎಲ್ಲಾ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಚುನಾವಣಾಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳಿಗೆ ಲಿಖಿತವಾಗಿ ಮಾಹಿತಿ ನೀಡುವಂತೆ ಮತ್ತು ಮಾಧ್ಯಮಗಳ ಮೂಲಕ ಪ್ರಚಾರ ನಡೆಸುವಂತೆ ಆಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ.

Karnataka

ಪರಿಷ್ಕೃತ ವೇಳಾಪಟ್ಟಿಯ ಪ್ರಮುಖ ದಿನಾಂಕಗಳು

ಚುನಾವಣಾ ಆಯೋಗವು ಪ್ರಕಟಿಸಿರುವ ಹೊಸ ವೇಳಾಪಟ್ಟಿಯ ಪ್ರಕಾರ ಮತಗಟ್ಟೆ ಮಟ್ಟದ ಅಧಿಕಾರಿಗಳು ಅಂದರೆ ಬಿಎಲ್‌ಒಗಳು ನಡೆಸುವ ಮನೆ ಮನೆ ಭೇಟಿ ಪ್ರಕ್ರಿಯೆಯಿಂದ ಹಿಡಿದು ಅಂತಿಮ ಮತದಾರರ ಪಟ್ಟಿ ಪ್ರಕಟಣೆಯವರೆಗಿನ ದಿನಾಂಕಗಳಲ್ಲಿ ಬದಲಾವಣೆಯಾಗಿದೆ:

1. ಮನೆ ಮನೆ ಭೇಟಿ ಪ್ರಕ್ರಿಯೆ:2026ರ ಜೂನ್‌ 30 ರಿಂದ 2026ರ ಆಗಸ್ಟ್‌ 17ರವರೆಗೆ

2. ಮತಗಟ್ಟೆಗಳ ಮರುಜೋಡಣೆ: ಆಗಸ್ಟ್‌ 17, 2026

3. ಕರಡು ಮತದಾರರ ಪಟ್ಟಿಯ ಪ್ರಕಟಣೆ: ಆಗಸ್ಟ್‌ 24, 2026

4. ಆಕ್ಷೇಪಣೆಗಳನ್ನ ಸಲ್ಲಿಸಲು ಕಾಲಾವಕಾಶ: 24, ಆಗಸ್ಟ್‌ 2026 ರಿಂದ 23, ಸೆಪ್ಟೆಂಬರ್‌ 2026ರವರೆಗೆ

5. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ: 24, ಆಗಸ್ಟ್‌ 2026 ರಿಂದ 22 ಅಕ್ಟೋಬರ್‌ 2026ರವರೆಗೆ

6. ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ: ಅಕ್ಟೋಬರ್ 27, 2026

ಮನೆ ಮನೆ ಭೇಟಿ

ಈ ಮೊದಲು ನಿಗದಿಪಡಿಸಿದ್ದ ವೇಳಾಪಟ್ಟಿಯಲಲಿ ಬಿಎಲ್‌ಒ ಅಧಿಕಾರಿಗಳ ಮನೆ ಮನೆ ತಪಾಸಣಾ ಕೆಲಸ ಈಗಾಗಲೇ ಮುಕ್ತಾಯಗೊಳ್ಳಬೇಕಿತ್ತು. ಆದರೆ ಹಲವು ಪ್ರದೇಶಗಳಲ್ಲಿ ಪರಿಶೀಲನೆ ಮತ್ತು ದತ್ತಾಂಶ ನಮೂದು ಕಾರ್ಯ ಬಾಕಿ ಇರುವ ಕಾರಣ, ಮನೆ ಮನೆ ಭೇಟಿ ಪ್ರಕ್ರಿಯೆಯನ್ನ ಆಗಸ್ಟ್ 17ರವರೆಗೆ ಮುಂದುವರಿಸಲು ಅವಕಾಶ ನೀಡಲಾಗಿದೆ. ಇದೇ ಆಗಸ್ಟ್ 17ರಂದು ಮತಗಟ್ಟೆಗಳ ತಾರ್ಕಿಕ ಮರುಹೊಂದಾಣಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಆಗಸ್ಟ್ 24ರಂದು ರಾಜ್ಯದಾದ್ಯಂತ ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತದೆ.

ಗೈರುಹಾಜರಾದವರು, ಸ್ಥಳಾಂತರಗೊಂಡವರು, ಮೃತಪಟ್ಟವರು ಹಾಗೂ ನಕಲಿ ಮತದಾರರನ್ನು (ASDDO ಪಟ್ಟಿ) ಗುರುತಿಸಿ ಪಟ್ಟಿಯನ್ನ ಹೊಸದಾಗಿ ಪಟ್ಟಿ ರೆಡಿ ಮಾಡುವ ಕೆಲಸ ಪ್ರಗತಿಯಲ್ಲಿದೆ. ತಪ್ಪಾಗಿ ಈ ಪಟ್ಟಿಗೆ ಸೇರ್ಪಡೆಯಾಗಿರುವ ಮತದಾರರು ತಮ್ಮ ವಿವರಗಳನ್ನ ಸರಿಪಡಿಸಿಕೊಳ್ಳಲು ಆಗಸ್ಟ್ 17ರವರೆಗೆ ಅವಕಾಶ ಲಭ್ಯವಿರುತ್ತದೆ.

ಆಕ್ಷೇಪಣೆ ಸಲ್ಲಿಕೆ

ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನ ಸಲ್ಲಿಸಲು ಆಗಸ್ಟ್ 24 ರಿಂದ ಸೆಪ್ಟೆಂಬರ್ 23 ರವರೆಗೆ ಒಂದು ತಿಂಗಳ ಕಾಲವಕಾಶ ನೀಡಲಾಗಿದೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಹೆಸರು ತೆಗೆದುಹಾಕಲು ಆಕ್ಷೇಪಣೆ ಸಲ್ಲಿಸಲು ಈ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಸ್ವೀಕೃತವಾದ ಎಲ್ಲಾ ಹಕ್ಕು ಮತ್ತು ಆಕ್ಷೇಪಣೆಗಳನ್ನ ಅಕ್ಟೋಬರ್ 22ರೊಳಗೆ ಪರಿಶೀಲಿಸಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಗಡುವು ನೀಡಲಾಗಿದೆ. ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ, ಅಕ್ಟೋಬರ್ 27ರಂದು ರಾಜ್ಯದ ಅಂತಿಮ ಮತದಾರರ ಪಟ್ಟಿಯನ್ನ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳಿಗೆ ಸೂಚನೆ

* ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ತಮ್ಮ ವ್ಯಾಪ್ತಿಯ ಬಿಎಲ್‌ಒ ಅಧಿಕಾರಿಗಳನ್ನ ಸಂಪರ್ಕಿಸಬೇಕು.

* ಆಗಸ್ಟ್ 24ರಂದು ಬಿಡುಗಡೆಯಾಗುವ ಕರಡು ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದರೆ, ತಕ್ಷಣವೇ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ.

* ರಾಜಕೀಯ ಪಕ್ಷಗಳು ತಮ್ಮ ಬೂತ್ ಮಟ್ಟದ ಏಜೆಂಟರ ಮೂಲಕ ಪರಿಷ್ಕರಣಾ ಕಾರ್ಯದಲ್ಲಿ ಸಹಕರಿಸಲು ಚುನಾವಣಾಧಿಕಾರಿಗಳು ಮನವಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+