ಜಿಎಸ್‌ಟಿ ಬಗ್ಗೆ ಚರ್ಚಿಸಲು ಕರೆದಿದ್ದ ವಿಶೇಷ ಅಧಿವೇಶನ ರದ್ದು
ಬೆಂಗಳೂರು, ಸೆಪ್ಟೆಂಬರ್ 10 : ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧೇಯಕದ ಬಗ್ಗೆ ಚರ್ಚೆ ನಡೆಸಲು ಕರೆದಿದ್ದ ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನವನ್ನು ರದ್ದುಗೊಳಿಸಲಾಗಿದೆ. ಸೆ.14ರಂದು ವಿಶೇಷ ಅಧಿವೇಶನ ಕರೆಯಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಹತ್ವದ ಜಿಎಸ್‌ಟಿ ವಿಧೇಯಕ ಅಂಗೀಕಾರವಾಗಿದೆ. ವಿಧೇಯಕವನ್ನು ರಾಜ್ಯದಲ್ಲಿಯೂ ಅಂಗೀಕರಿಸಲು ವಿಶೇಷ ಅಧಿವೇಶನ ಕರೆಯಲಾಗಿತ್ತು.[ಜಿಎಸ್ಟಿ ಎಂದರೇನು? ಇದರಿಂದ ಯಾರಿಗೆ ಪ್ರಯೋಜನ?]

ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, 'ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಈಗಾಗಲೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಬಿಲ್‌ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಆದ್ದರಿಂದ, ವಿಶೇಷ ಅಧಿವೇಶನ ರದ್ದುಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ' ಎಂದರು.[ಕರ್ನಾಟಕದ ಆದಾಯದ ಮೇಲೆ ಜಿಎಸ್ಟಿ ಪರಿಣಾಮವೇನು?]
ಬೆಂಗಳೂರಿನ ವಿಧಾನಸೌಧದಲ್ಲಿ ಸೆ.14ರ ಬುಧವಾರ ವಿಶೇಷ ಅಧಿವೇಶ ನಡೆಸಿ, ಸರಕು ಮತ್ತು ಸೇವಾ ತೆರಿಗೆ ವಿಧೇಯಕವನ್ನು ಮಂಡನೆ ಮಾಡಲು ನಿರ್ಧರಿಸಲಾಗಿತ್ತು. ರಾಷ್ಟ್ರದಾದ್ಯಂತ ಏಕರೂಪ ತೆರಿಗೆಯನ್ನು ಜಾರಿಗೆ ತರುವ, ಸರಕು ಮತ್ತು ಸೇವಾ ತೆರಿಗೆ ವಿಧೇಯಕ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ.[ಜಿಎಸ್ಟಿ ಪರಿಣಾಮ, ಯಾವುದು ಏರಿಕೆ? ಯಾವುದು ಇಳಿಕೆ?]












Click it and Unblock the Notifications