• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜಿಎಸ್‌ಟಿ ಬಗ್ಗೆ ಚರ್ಚಿಸಲು ಕರೆದಿದ್ದ ವಿಶೇಷ ಅಧಿವೇಶನ ರದ್ದು

|

ಬೆಂಗಳೂರು, ಸೆಪ್ಟೆಂಬರ್ 10 : ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧೇಯಕದ ಬಗ್ಗೆ ಚರ್ಚೆ ನಡೆಸಲು ಕರೆದಿದ್ದ ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನವನ್ನು ರದ್ದುಗೊಳಿಸಲಾಗಿದೆ. ಸೆ.14ರಂದು ವಿಶೇಷ ಅಧಿವೇಶನ ಕರೆಯಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಹತ್ವದ ಜಿಎಸ್‌ಟಿ ವಿಧೇಯಕ ಅಂಗೀಕಾರವಾಗಿದೆ. ವಿಧೇಯಕವನ್ನು ರಾಜ್ಯದಲ್ಲಿಯೂ ಅಂಗೀಕರಿಸಲು ವಿಶೇಷ ಅಧಿವೇಶನ ಕರೆಯಲಾಗಿತ್ತು.[ಜಿಎಸ್ಟಿ ಎಂದರೇನು? ಇದರಿಂದ ಯಾರಿಗೆ ಪ್ರಯೋಜನ?]

ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, 'ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಈಗಾಗಲೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಬಿಲ್‌ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಆದ್ದರಿಂದ, ವಿಶೇಷ ಅಧಿವೇಶನ ರದ್ದುಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ' ಎಂದರು.[ಕರ್ನಾಟಕದ ಆದಾಯದ ಮೇಲೆ ಜಿಎಸ್ಟಿ ಪರಿಣಾಮವೇನು?]

ಬೆಂಗಳೂರಿನ ವಿಧಾನಸೌಧದಲ್ಲಿ ಸೆ.14ರ ಬುಧವಾರ ವಿಶೇಷ ಅಧಿವೇಶ ನಡೆಸಿ, ಸರಕು ಮತ್ತು ಸೇವಾ ತೆರಿಗೆ ವಿಧೇಯಕವನ್ನು ಮಂಡನೆ ಮಾಡಲು ನಿರ್ಧರಿಸಲಾಗಿತ್ತು. ರಾಷ್ಟ್ರದಾದ್ಯಂತ ಏಕರೂಪ ತೆರಿಗೆಯನ್ನು ಜಾರಿಗೆ ತರುವ, ಸರಕು ಮತ್ತು ಸೇವಾ ತೆರಿಗೆ ವಿಧೇಯಕ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ.[ಜಿಎಸ್ಟಿ ಪರಿಣಾಮ, ಯಾವುದು ಏರಿಕೆ? ಯಾವುದು ಇಳಿಕೆ?]

English summary
Karnataka government cancelled a special one-day session of the state legislature scheduled on September 14, 2016 to discuss about the Goods and Service Tax (GST) bill.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X