SSLC Admit Card: ಎಸ್‌ಎಸ್‌ಎಲ್‌ಸಿ ಪ್ರವೇಶ ಪತ್ರ ಬಿಡುಗಡೆ, ಹೇಗೆ ಪಡೆಯುವುದು? ವಿವರಗಳು
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯಾಗಿದ್ದು, ವಿದ್ಯಾರ್ಥಿಗಳು kseab.karnataka.gov.in ಗೆ ಭೇಟಿ ನೀಡಿ ಹಾಲ್ ಟಿಕೆಟ್ ಪಡೆಯಬಹುದು.
ಬೆಂಗಳೂರು, ಫೆಬ್ರವರಿ. 07: ಮಾರ್ಚ್ 31 ರಿಂದ ನಡೆಯಲಿರುವ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯಾಗಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಹಾಲ್ ಟಿಕೆಟ್ ಬಿಡುಗಡೆ ಮಾಡಿದೆ. ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಅಧಿಕೃತ ವೆಬ್‌ಸೈಟ್ ಅಂದರೆ kseab.karnataka.gov.in ಗೆ ಭೇಟಿ ನೀಡಬಹುದು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಅಥವಾ ವಿದ್ಯಾರ್ಥಿಗಳ ಪರವಾಗಿ ಶಾಲಾ ಅಧಿಕಾರಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಬಹುದು.

ಮಂಡಳಿಯ ವೆಬ್‌ಸೈಟ್‌ನಲ್ಲಿ ತಮ್ಮ ಶಾಲೆಗಳ ತಾತ್ಕಾಲಿಕ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ಅವುಗಳನ್ನು ಪರಿಶೀಲಿಸಬೇಕು, ಅಗತ್ಯವಿದ್ದರೆ, ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳಲ್ಲಿನ ತಿದ್ದುಪಡಿಗಳನ್ನು ಮಾಡುವಂತೆ ಶಾಲಾ ಮುಖ್ಯಸ್ಥರಿಗೆ ಸೂಚಿಸಿದೆ.
ಶಾಲಾ ಅಧಿಕಾರಿಗಳು ಅಥವಾ ವಿದ್ಯಾರ್ಥಿಗಳು ತಾತ್ಕಾಲಿಕ ಪ್ರವೇಶ ಪತ್ರದಲ್ಲಿ ಯಾವುದೇ ದೋಷವನ್ನು ಕಂಡರೂ ಫೆಬ್ರವರಿ 19, 2023 ರಂದು ಅಥವಾ ಅದಕ್ಕಿಂತ ಮೊದಲು ತಿದ್ದುಪಡಿಗಾಗಿ ಮನವಿ ಮಾಡಬೇಕು.
"ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಲು ಮತ್ತು ಅಂತಿಮಗೊಳಿಸಲು ಇದು ಕೊನೆಯ ಅವಕಾಶವಾಗಿದೆ. ಅದೇ ವಿವರಗಳನ್ನು ಅಂತಿಮ ಎಸ್‌ಎಸ್‌ಎಲ್‌ಸಿ ಪ್ರವೇಶ ಪತ್ರದಲ್ಲಿ ಮತ್ತು ವಿದ್ಯಾರ್ಥಿಗಳ ಅಂಕಪಟ್ಟಿಗಳಲ್ಲಿ ನಮೂದಿಸಲಾಗುತ್ತದೆ. ಏನಾದರೂ ವ್ಯತ್ಯಾಸಗಳಿದ್ದರೆ, ಶಾಲಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ" ಎಂದು ಅಧಿಕೃತ ಸೂಚನೆಯಲ್ಲಿ ತಿಳಿಸಿಲಾಗಿದೆ.

SSLC ಹಾಲ್ ಟಿಕೆಟ್ : ಡೌನ್‌ಲೋಡ್ ಮಾಡುವುದು ಹೇಗೆ?
* kseab.karnataka.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
* SSLC ಟ್ಯಾಬ್ ಮೇಲೆ ಕ್ಲಿಕ್ ಮಾಡಿ ಮತ್ತು ಶಾಲೆಯ ಲಾಗಿನ್ ಆಯ್ಕೆಮಾಡಿ
*ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ನಮೂದಿಸಿ ಮತ್ತು ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಿ
* ಡೌನ್‌ಲೋಡ್ ಆದ ಹಾಲ್ ಟಿಕೆಟ್ ಅನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಏಪ್ರಿಲ್ 4, 2023 ರಿಂದ ಪರೀಕ್ಷೆ ನಡಸಲು ಘೋಷಿಸಿತ್ತು. ಬಳಿಕ ಏ.4ರಂದು ಮಹಾವೀರ ಜಯಂತಿಯಂದು ರಜೆ ಘೋಷಣೆಯಾಗಿರುವ ಹಿನ್ನೆಲೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.
ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಪರೀಕ್ಷೆ ನಡೆಯಲಿದ್ದು, ಏಪ್ರಿಲ್ 4 ರಂದು ನಡೆಯಬೇಕಿದ್ದ ಗಣಿತ ಮತ್ತು ಸಮಾಜಶಾಸ್ತ್ರ ಪರೀಕ್ಷೆಗಳು ಈಗ ಏಪ್ರಿಲ್ 3 ರಂದು ನಡೆಯಲಿದೆ.












Click it and Unblock the Notifications