SSLC, PUC ವಿದ್ಯಾರ್ಥಿಗಳೇ ಗಮನಿಸಿ: ಜನಗಣತಿ ಇದ್ರೂ ಪರೀಕ್ಷೆ ಮುಂದ್ ಹೋಗಲ್ಲ! ಅಂತಿಮ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026-27ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದನ್ನ ಪ್ರಕಟಿಸಿದೆ. ಎರಡೂ ಬೋರ್ಡ್ ಪರೀಕ್ಷೆಗಳ (ಪರೀಕ್ಷೆ-1) ಅಂತಿಮ ವೇಳಾಪಟ್ಟಿಯನ್ನ ಮಂಡಳಿಯು ಗುರುವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ.

ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು 2027ರ ಮಾರ್ಚ್ 22 ರಿಂದ ಏಪ್ರಿಲ್ 5ರವರೆಗೆ ನಡೆಯಲಿದ್ದರೆ, ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 27 ರಿಂದ ಮಾರ್ಚ್ 18ರವರೆಗೆ ಜರುಗಲಿವೆ. ಕಳೆದ ಆಗಸ್ಟ್ 8 ರಂದು ಬಿಡುಗಡೆ ಮಾಡಲಾಗಿದ್ದ ತಾತ್ಕಾಲಿಕ ವೇಳಾಪಟ್ಟಿಯನ್ನೇ ಬಹುತೇಕ ಅಂತಿಮಗೊಳಿಸಲಾಗಿದ್ದು, ದ್ವಿತೀಯ ಪಿಯುಸಿಯ ಇತಿಹಾಸ ಪರೀಕ್ಷೆಯ ದಿನಾಂಕದಲ್ಲಿ ಮಾತ್ರ ಸಣ್ಣ ಬದಲಾವಣೆ ಮಾಡಲಾಗಿದೆ.

Karnataka SSLC and 2nd PUC Final Exam Time Table 2027 Out Check Subject Wise Exam Dates Here

ಜನಗಣತಿ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ ಆಗಲ್ಲ

ಮುಂಬರುವ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ರಾಜ್ಯಾದ್ಯಂತ ಎರಡನೇ ಹಂತದ ಜನಗಣತಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನ ಕೊಂಚ ಮುಂದೂಡುವಂತೆ ಕೇಂದ್ರ ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯ ರಾಜ್ಯ ಸರ್ಕಾರಕ್ಕೆ ಪತ್ರ ಮೂಲಕ ಮನವಿ ಮಾಡಿತ್ತು.

ಆದರೆ, ಪರೀಕ್ಷೆಗಳನ್ನ ಮುಂದೂಡಿದರೆ ವಿದ್ಯಾರ್ಥಿಗಳ ಮುಂದಿನ ಸಿಇಟಿ, ನೀಟ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರವು ಪರೀಕ್ಷೆ ಮುಂದೂಡಲು ಒಪ್ಪಿಗೆ ಸೂಚಿಸಿಲ್ಲ. ನಿಗದಿತ ಸಮಯದಲ್ಲೇ ಪರೀಕ್ಷೆಗಳು ನಡೆಯಲಿವೆ ಎಂದು ಸ್ಪಷ್ಟಪಡಿಸಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2027: ಅಂತಿಮ ವೇಳಾಪಟ್ಟಿ

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 22 ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ವಿಷಯವಾರು ದಿನಾಂಕಗಳ ವಿವರ ಈ ಕೆಳಗಿನಂತಿದೆ:

* ಮಾರ್ಚ್ 22: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್‌, ಸಂಸ್ಕೃತ)

* ಮಾರ್ಚ್ 25: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದುಸ್ತಾನಿ ಸಂಗೀತ, ಕರ್ನಾಟಕ ಸಂಗೀತ

* ಮಾರ್ಚ್ 27: ದ್ವಿತೀಯ ಭಾಷೆ (ಇಂಗ್ಲೀಷ್‌, ಕನ್ನಡ)

* ಮಾರ್ಚ್ 30: ಗಣಿತ, ಸಮಾಜಶಾಸ್ತ್ರ

* ಏಪ್ರಿಲ್ 2: ತೃತೀಯ ಭಾಷೆ (ಹಿಂದಿ, ಕನ್ನಡ, ಉರ್ದು, ತುಳು, ಇಂಗ್ಲೀಷ್‌, ಸಂಸ್ಕೃತ, ಕೊಂಕಣಿ, ಮರಾಠಿ) ಹಾಗೂ ಎನ್‌ಎಸ್‌ಕ್ಯೂಎಫ್ ವಿಷಯಗಳು

* ಏಪ್ರಿಲ್ 3: ಜೆಟಿವಿಎಸ್ ವಿಷಯಗಳು

* ಏಪ್ರಿಲ್ 5: ಸಮಾಜ ವಿಜ್ಞಾನ

ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕ 2027

ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಫೆಬ್ರವರಿ ಅಂತ್ಯದಲ್ಲೇ ಪರೀಕ್ಷೆಗಳು ಶುರುವಾಗಲಿದ್ದು, ಇದರ ಸಂಪೂರ್ಣ ವೇಳಾಪಟ್ಟಿ ಹೀಗಿದೆ:

* ಫೆಬ್ರವರಿ 27: ಕನ್ನಡ, ಅರೇಬಿಕ್

* ಮಾರ್ಚ್ 1: ಇಂಗ್ಲಿಷ್

* ಮಾರ್ಚ್ 2: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

*ಮಾರ್ಚ್ 3: ಭೂಗೋಳಶಾಸ್ತ್ರ, ಮನಃಶಾಸ್ತ್ರ

* ಮಾರ್ಚ್ 4: ಸಮಾಜಶಾಸ್ತ್ರ, ಭೌತಶಾಸ್ತ್ರ

* ಮಾರ್ಚ್ 5: ಲೆಕ್ಕಶಾಸ್ತ್ರ (ಅಕೌಂಟೆನ್ಸಿ)

* ಮಾರ್ಚ್ 8: ರಸಾಯನಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ

* ಮಾರ್ಚ್ 9: ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ

* ಮಾರ್ಚ್ 11: ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್ ಸೇರಿ ಎನ್‌ಎಸ್‌ಕ್ಯೂಎಫ್ ವಿಷಯಗಳು

* ಮಾರ್ಚ್ 12: ವ್ಯವಹಾರ ಅಧ್ಯಯನ (ಬ್ಯುಸಿನೆಸ್ ಸ್ಟಡೀಸ್), ಗಣಿತ

* ಮಾರ್ಚ್ 13: ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಗೃಹವಿಜ್ಞಾನ

* ಮಾರ್ಚ್ 15: ರಾಜ್ಯಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ

* ಮಾರ್ಚ್ 16: ಸಂಖ್ಯಾಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ (ಎಲೆಕ್ಟ್ರಾನಿಕ್ಸ್)

* ಮಾರ್ಚ್ 17: ಹಿಂದಿ

* ಮಾರ್ಚ್ 18: ಇತಿಹಾಸ

ವಿದ್ಯಾರ್ಥಿಗಳು ಈ ಅಂತಿಮ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ತಮ್ಮ ಪರೀಕ್ಷಾ ಸಿದ್ಧತೆಗಳನ್ನು ಮತ್ತಷ್ಟು ಚುರುಕುಗೊಳಿಸುವಂತೆ ಶಿಕ್ಷಣ ಇಲಾಖೆ ಸಲಹೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+