SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್‌ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ
Karnataka SSLC Board Exam 2026: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಅಂತಿಮ (10ನೇ ತರಗತಿ) ಬೋರ್ಡ್ ಪರೀಕ್ಷೆಗಳು ಮಾರ್ಚ್ 18, 2026ರಿಂದ ಆರಂಭವಾಗಲಿವೆ. ರಾಜ್ಯದಾದ್ಯಂತ ಲಕ್ಷಾಂತರ ಮಂದಿ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ. ಹಾಗಾದ್ರೆ, ಪರೀಕ್ಷೆ ಸಮಯ, ಡ್ರೆಸ್ ಕೋಡ್, ಮಾರ್ಗಸೂಚಿಗಳು ಹಾಗೂ ಸಂಪೂರ್ಣ ವೇಳಾಪಟ್ಟಿ ಬಗ್ಗೆ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಹಿಂದೆ ಪ್ರಕಟಿಸಲಾದ ಕರ್ನಾಟಕ ಎಸ್‌ಎಸ್‌ಎಲ್‌ಸಿ ವೇಳಾಪಟ್ಟಿ 2026 ಪ್ರಕಾರ, 10ನೇ ತರಗತಿ ಬೋರ್ಡ್ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿವೆ. ಈ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುತ್ತಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು ಇಲ್ಲಿವೆ ನೋಡಿ.

ವಿದ್ಯಾರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು
* ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ಗಂಟೆವರೆಗೆ ಇರಲಿದ್ದು, ಒಟ್ಟು ಪರೀಕ್ಷಾ ಅವಧಿ 3 ಗಂಟೆ 15 ನಿಮಿಷಗಳು.
* ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳ ಸಮಯ ನೀಡಲಾಗುತ್ತದೆ. ಪ್ರಶ್ನೆಪತ್ರಿಕೆಯನ್ನು ಬೆಳಿಗ್ಗೆ 10 ಗಂಟೆಗೆ ನೀಡಲಾಗುತ್ತದೆ. ನಂತರ ವಿದ್ಯಾರ್ಥಿಗಳು 10:15ರಿಂದ ಉತ್ತರ ಬರೆಯಲು ಆರಂಭಿಸಬಹುದು.
* ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯದೊಳಗೆ ಅಂದರೆ, ಬೆಳಿಗ್ಗೆ 9:45ರಿಂದ 10 ಗಂಟೆಯೊಳಗೆ ತಲುಪಲು ಸೂಚಿಸಲಾಗಿದೆ.
* ಹಾಲ್ ಟಿಕೆಟ್ (ಪ್ರವೇಶ ಪತ್ರ) ಮತ್ತು ಅಗತ್ಯ ದಾಖಲೆಗಳನ್ನು ಜೊತೆಯಲ್ಲಿ ತರಬೇಕು ಎಂದು ಮಂಡಳಿ ಸೂಚಿಸಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ
ಮಾರ್ಚ್ 18 - ಪ್ರಥಮ ಭಾಷೆ
ಮಾರ್ಚ್ 23 - ವಿಜ್ಞಾನ
ಮಾರ್ಚ್ 25 - ದ್ವಿತೀಯ ಭಾಷೆ
ಮಾರ್ಚ್ 28 - ಗಣಿತ
ಮಾರ್ಚ್ 30 - ತೃತೀಯ ಭಾಷೆ
ಏಪ್ರಿಲ್ 2 - ಸಮಾಜ ವಿಜ್ಞಾನ
ವಿಷಯವಾರು ವೇಳಾಪಟ್ಟಿ
* ಮಾರ್ಚ್ 18: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ (ಎನ್‌ಸಿಇಆರ್‌ಟಿ), ಸಂಸ್ಕೃತಿ)
* ಮಾರ್ಚ್ 23: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ
* ಮಾರ್ಚ್ 25: ದ್ವಿತೀಯ ಭಾಷೆ (ಇಂಗ್ಲೀಷ್, ಕನ್ನಡ)
* ಮಾರ್ಚ್ 28: ಕೋರ್ ಸಬ್ಜೆಕ್ಟ್ (ಗಣಿತ, ಸಮಾಜಶಾಸ್ತ್ರ)
* ಮಾರ್ಚ್ 30: ತೃತೀಯ ಭಾಷೆ (ಹಿಂದಿ (NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ)
* ಏಪ್ರಿಲ್ 1: ಜಿ.ಟಿ.ಎಸ್. ವಿಷಯಗಳು (ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ - IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್ - IV, ಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ - IV, ಪ್ರೋಗ್ರಾಮಿಂಗ್ ಇನ್ ANSI 'C')
* ಏಪ್ರಿಲ್ 2: ಕೋರ್ ಸಬ್ಜೆಕ್ಟ್: ಸಮಾಜ ವಿಜ್ಞಾನ
ಡ್ರೆಸ್‌ಕೋಡ್ ಮತ್ತು ನಿಯಮಗಳು
* ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಧರಿಸುವುದು ಕಡ್ಡಾಯ.
* ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಸುಲಭವಾಗಿ ಗುರುತಿಸಲು ಸಾಧ್ಯವಾಗುವಂತೆ ಸರಳ ಹಾಗೂ ಸರಿಯಾದ ಶಾಲೆಯ ಯೂನಿಫಾರ್ಮ್ ಧರಿಸಿ ಬರಬೇಕು.
ಪರೀಕ್ಷಾ ಕೇಂದ್ರದಲ್ಲಿ ಯಾವೆಲ್ಲಾ ವಸ್ತುಗಳಿಗೆ ಅನುಮತಿ?
* ಎಸ್‌ಎಸ್‌ಎಲ್‌ಸಿ ಹಾಲ್ ಟಿಕೆಟ್
* ನೀಲಿ ಅಥವಾ ಕಪ್ಪು ಬಣ್ಣದ ಬಾಲ್‌ಪಾಯಿಂಟ್ ಪೆನ್‌ಗಳು
* ಜಾಮಿಟರ್ ಬಾಕ್ಸ್ (ಗಣಿತ ಪರೀಕ್ಷೆಗೆ)
* ಪಾರದರ್ಶಕ ನೀರಿನ ಬಾಟಲ್
* ಪರೀಕ್ಷೆಗೆ ಅಗತ್ಯವಿರುವ ವಸ್ತುಗಳು
* ಮುಖ್ಯವಾಗಿ ಹಾಲ್ ಟಿಕೆಟ್ ಇಲ್ಲದಿದ್ದರೆ, ವಿದ್ಯಾರ್ಥಿಗಳಿಗೆ ಪರೀಕ್ಷಾ ಹಾಲ್‌ಗೆ ಪ್ರವೇಶ ನೀಡಲಾಗುವುದಿಲ್ಲ ಎಂಬುದನ್ನು ಗಮನದಲ್ಲಿರಿಸಿಕೊಳ್ಳಬೇಕು.
ಯಾವೆಲ್ಲಾ ವಸ್ತುಗಳಿಗೆ ನಿಷೇಧ?
* ಮೊಬೈಲ್ ಫೋನ್‌ಗಳು
* ಸ್ಮಾರ್ಟ್ ವಾಚ್‌ಗಳು
* ಬ್ಲೂಟೂತ್ ಸಾಧನಗಳು, ಇಯರ್‌ಫೋನ್‌ಗಳು
* ಕ್ಯಾಲ್ಕ್ಯುಲೇಟರ್‌ಗಳು (ವಿಶೇಷವಾಗಿ ಅನುಮತಿ ನೀಡಿದಲ್ಲಿ ಮಾತ್ರ)
* ನೋಟ್ಸ್ ಅಥವಾ ಚೀಟಿಗಳು
* ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು
* ಈ ಮೇಲಿನ ನಿಯಮಗಳನ್ನು ಉಲ್ಲಂಘಿಸಿದರೆ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆಗಳು
* ಪರೀಕ್ಷಾ ಕೇಂದ್ರಕ್ಕೆ ಕನಿಷ್ಠ 30 ನಿಮಿಷ ಮುಂಚಿತವಾಗಿ ತಲುಪಬೇಕು.
* ನಿಗದಿಪಡಿಸಿದ ಆಸನದಲ್ಲಿ ಕುಳಿತುಕೊಳ್ಳಬೇಕು.
* ಉತ್ತರ ಪತ್ರಿಕೆಯ ಮೇಲೆ ನೋಂದಣಿ ಸಂಖ್ಯೆ ಮತ್ತು ವಿಷಯದ ಕೋಡ್ ಅನ್ನು ಎಚ್ಚರಿಕೆಯಿಂದ ಬರೆಯಬೇಕು.
* ಪರೀಕ್ಷಾ ಕೊಠಡಿಯಲ್ಲಿ ನಿಶ್ಶಬ್ದ ಮತ್ತು ಶಿಸ್ತು ಕಾಯ್ದುಕೊಳ್ಳಬೇಕು.
* ಪರೀಕ್ಷಾ ಅಧಿಕಾರಿಗಳು ನೀಡುವ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
* ಜೊತೆಗೆ, ಪರೀಕ್ಷೆಗೆ ಮುನ್ನವೇ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್‌ನಲ್ಲಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಪರಿಶೀಲಿಸಿಕೊಳ್ಳಬೇಕು, ಇದರಿಂದ ಕೊನೆಯ ಕ್ಷಣದಲ್ಲಿ ಯಾವುದೇ ಗೊಂದಲ ಉಂಟಾಗುವುದನ್ನು ತಪ್ಪಿಸಬಹುದು. ಒಟ್ಟಿನಲ್ಲಿ ಪರೀಕ್ಷೆ ಬರೆಯುವ ಎಲ್ಲಾ ವಿದಾರ್ಥಿಗಳಿಗೆ ನಮ್ಮ ಕಡೆಯಿಂದ ಆಲ್ ದಿ ಬೆಸ್ಟ್.
-
ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: 1-8ನೇ ತರಗತಿಗೆ ಹೊಸ ಪಠ್ಯಪುಸ್ತಕ ಬಿಡುಗಡೆ ಮಾಡಿದ NCERT -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications