ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌ಎಸ್‌ಎಲ್‌ಸಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ: ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಮಾರ್ಚ್ 27: ಇಂದು ನಡೆಯಬೇಕಿರುವ ಎಸ್‌ಎಸ್‌ಎಲ್‌ಸಿ ದ್ವಿತೀಯ ಭಾಷಾ ಪತ್ರಿಕೆಯಾದ ಆಂಗ್ಲಭಾಷೆ ಪ್ರಶ್ನೆಪತ್ರಿಕೆಯ ಮಾದರಿಯಂತೆಯೇ ಇರುವ ಪ್ರಶ್ನೆಪತ್ರಿಕೆ ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಮೂಲಕ ಆತಂಕ ಸೃಷ್ಟಿಸಿತ್ತು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಆದರೆ ಸೋರಿಕೆ ವಿಚಾರವನ್ನು ನಿರಾಕರಿಸಿರುವ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, ಅದು 2016ರ ಪ್ರಶ್ನೆಪತ್ರಿಕೆ ಎಂದು ತಿಳಿಸಿದೆ. ವಿದ್ಯಾರ್ಥಿಗಳು ಆತಂಕಕ್ಕೊಳಗಾಗುವುದು ಬೇಡ ಎಂದು ತಿಳಿಸಿದೆ.

ಎಸ್‌ಎಸ್‌ಎಲ್‌ಸಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲಎಸ್‌ಎಸ್‌ಎಲ್‌ಸಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ

ದ್ಯಾರ್ಥಿಗಳ ಜೀವನದ ಜತೆ ಚೆಲ್ಲಾಟವಾಡುತ್ತಿರುವ ಇಂತಹ ಕಿಡಿಗೇಡಿಗಳ ವಿರುದ್ದ ಸೈಬರ್ ಕ್ರೈಮ್ ಇಲಾಖೆ ದೂರು ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Karnataka SSLC English exam No question paper leak

ಈ ಬಾರಿ ಒಟ್ಟು 8 ಲಕ್ಷದ 41 ಸಾವಿರದ 666 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇದರಲ್ಲಿ 4 ಲಕ್ಷದ 47 ಸಾವಿರದ 864 ಬಾಲಕರಿದ್ದಾರೆ. ಹಾಗೆಯೇ 3 ಲಕ್ಷದ 93 ಸಾವಿರದ 802 ಬಾಲಕಿಯರು ಪರೀಕ್ಷೆಯನ್ನು ಎದುರಿಸಲಿದ್ದಾರೆ.

ಸೋಮವಾರ ವಾಟ್ಸ್‌ಆ್ಯಪ್‌ನಲ್ಲಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಗೊಂದಲ ಮೂಡಿಸಿತ್ತು. ಬೆಳಗ್ಗೆ ಗಣಿತ ಪ್ರಶ್ನೆ ಆರಂಭವಾಗುತ್ತಿದ್ದಂತೆ ಖಾಸಗಿ ಅಭ್ಯರ್ಥಿಯೊಬ್ಬ ಪ್ರಶ್ನೆ ಪತ್ರಿಕೆಯ ಚಿತ್ರಗಳನ್ನು ಸೆರೆ ಹಿಡಿದು ವಾಟ್ಸ್‌ಆ್ಯಪ್‌ ಮೂಲಕ ರವಾನೆ ಮಾಡಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮುಜಾಹಿದ್‌ ಪಾಶಾರನ್ನು ಬಂಧಿಸಿರುವುದಾಗಿ ಮೈಸೂರು ಡಿಡಿಪಿಐ ಪಾಂಡುರಂಗ ದೃಢ ಪಡಿಸಿದ್ದರು.

ವಿಜಯಪುರ : ವಾಟ್ಸಪ್‌ನಲ್ಲಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆವಿಜಯಪುರ : ವಾಟ್ಸಪ್‌ನಲ್ಲಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ

ಇದೀಗ ಇಂಗ್ಲೀಷ್ ಪ್ರಶ್ನೆ ಪತ್ರಿಕೆ ಸಹ ಲೀಕ್ ಆಗಿರುವ ಸುದ್ದಿಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಕ್ಕೀಡಾಗಿದ್ದರು. ಇದೀಗ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಅಧಿಕೃತ ಹೇಳಿಕೆ ನೀಡುವ ಮೂಲಕ ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಪರೀಕ್ಷೆ ಎದುರಿಸಬಹುದಾಗಿದೆ.

English summary
The SSLC second language English paper has not been leaked , officials of KSEEB clarified on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X