ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025: ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯಲು ಅವಕಾಶ

ಬೆಂಗಳೂರು, ಮೇ 06: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಖಾಸಗಿ ಅಭ್ಯರ್ಥಿಗಳು 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ಕ್ಕೆ ನೋಂದಣಿ ಮಾಡಿಕೊಳ್ಳಲುವ ಕುರಿತು ಆದೇಶವನ್ನು ಹೊರಡಿಸಿದೆ. 2024-25 ಸಾಲಿಗೆ ನೋಂದಾಯಿಸಿಕೊಂಡು ಎಸ್ಎಸ್‌ಎಲ್‌ಸಿ ಪರೀಕ್ಷೆ-1ರಿಂದ ಹೊರಗುಳಿದ 15 ವರ್ಷ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ 2025ರ ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ಹೆಚ್. ಬಸವರಾಜೇಂದ್ರ, ಅಧ್ಯಕ್ಷರು, ಕ.ಶಾ.ಪ.ಮೌ.ನಿ ಮಂಡಲಿ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ಹಾಜರಾತಿ ಕೊರತೆಯಿಂದಾಗಿ ಪರೀಕ್ಷೆಯಿಂದ ಹೊರಗುಳಿದ 15 ವರ್ಷ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ 2025ರ ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯಲು ನೋಂದಣಿಗೆ ಅವಕಾಶ ಕಲ್ಪಿಸಿರುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

Karnataka SSLC Exam 2 In May Private Candidates Registration

ಈ ವಿಷಯಕ್ಕೆ ಸಂಬಂಧಿಸಿದಂತೆ, ಮಂಡಳಿಯ ಕಾಯ್ದೆ-1966 ನಿಯಮ- 37ರನ್ವಯ ಶಾಲಾ ವಿದ್ಯಾರ್ಥಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಿದ ದಿನಗಳಿಗೆ ಅನುಸಾರ ಕನಿಷ್ಠ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿರುತ್ತದೆ. 2024-253 ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು, ಹಾಜರಾತಿ ಕೊರತೆಯಿಂದಾಗಿ ವಿದ್ಯಾರ್ಥಿಗಳ ನೋಂದಣಿಯನ್ನು ಮುಖ್ಯ ಶಿಕ್ಷಕರು ಶಾಲಾ ಹಂತದಲ್ಲಿ ರದ್ದು ಪಡಿಸಲಾಗಿರುವುದರಿಂದ ಸದರಿ ವಿದ್ಯಾರ್ಥಿಗಳು 2025ರ ಪರೀಕ್ಷೆ-1 ಕ್ಕೆ ಹಾಜರಾಗಲು ಸಾಧ್ಯವಾಗಿರುವುದಿಲ್ಲ.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಹಾಗೂ ಸದರಿ ವಿದ್ಯಾರ್ಥಿಗಳು ಮುಂದಿನ ಉನ್ನತ ಶಿಕ್ಷಣದ ವ್ಯಾಸಂಗದಿಂದ ವಂಚಿತರಾಗದಂತೆ ಕ್ರಮವಹಿಸುವ ಸಲುವಾಗಿ, ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ಮೇ-2025ರಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ಪರೀಕ್ಷೆಗೆ ಅನ್‌ಲೈನ್ ಮೂಲಕ ಮುಖ್ಯೋಪಾಧ್ಯಾಯರ ಲಾಗಿನ್‌ನಲ್ಲಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.

2025ರ ಮಾರ್ಚ್ 1ನೇ ತಾರೀಖಿಗೆ 15 ವರ್ಷ ವಯೋಮಿತಿ ತುಂಬುವ ವಿದ್ಯಾರ್ಥಿಗಳು ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಣಿ ಮಾಡಿಕೊಳ್ಳಲು ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಂತಹ ಅಭ್ಯರ್ಥಿಗಳು ಸರ್ಕಾರಿ/ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಶಾಲೆಗಳಿಗೆ ನೋಂದಣಿಗಾಗಿ ಅರ್ಜಿ ಸಲ್ಲಿಸಬೇಕು. 15 ವರ್ಷ ತುಂಬದ ಅಭ್ಯರ್ಥಿಗಳನ್ನು ನೋಂದಾಯಿಸಿಕೊಂಡಲ್ಲಿ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ.

ಈ ಬಗ್ಗೆ ಎಚ್ಚರಿಸುವುದು ಹಾಗೂ ವಿಧಿಸಿರುವ ಷರತ್ತುಗಳನ್ನು ಈ ಎಲ್ಲಾ ಅರ್ಹ ವಿದ್ಯಾರ್ಥಿಗಳು ಪಾಲಿಸಬೇಕಾಗಿರುತ್ತದೆ. 20250 ಪರೀಕ್ಷೆ-2ರಲ್ಲಿ ಈ ಅಭ್ಯರ್ಥಿಗಳಿಗೆ ಪ್ರಥಮ ಪ್ರಯತ್ನವಾಗಿರುತ್ತದೆ, ಈ ಪರೀಕ್ಷೆಯಿಂದ ಸತತ 6 ಪ್ರಯತ್ನಗಳ ಒಳಗಾಗಿ ಉತ್ತೀರ್ಣ ಹೊಂದಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಅವಕಾಶದ ನಂತರವೂ ಪೂರ್ಣಗೊಳಿಸಲಾಗದ ಅಭ್ಯರ್ಥಿಗಳು ನಂತರದ ಪರೀಕ್ಷೆಯಿಂದ ನಿಯಮಾನುಸಾರ ಹೊಸದಾಗಿ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಂಡು ಎಲ್ಲಾ ವಿಷಯಗಳ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗುತ್ತದೆ.

ಈ ವಿದ್ಯಾರ್ಥಿಗಳು ಮಾರ್ಚ್-2025ರ ಪರೀಕ್ಷೆ-1ಕ್ಕೆ ನೋಂದಾಯಿಸಿ ಈಗಾಗಲೇ ಪರೀಕ್ಷಾ ಶುಲ್ಕ ಪಾವತಿಸಿರುತ್ತಾರೆ. ಆದ್ದರಿಂದ ಸದರಿ ಅಭ್ಯರ್ಥಿಗಳು 2025ರ ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿ ಪರೀಕ್ಷೆಗೆ ಹಾಜರಾಗಲು ನೋಂದಣಿ ಶುಲ್ಕವನ್ನು ಮಾತ್ರ ಪಾವತಿಸತಕ್ಕದ್ದು, ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರು ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಲು ಇರುವ ನಿಯಮದಂತೆ ತಮ್ಮ ಶಾಲಾ ಅಭ್ಯರ್ಥಿಗಳನ್ನು ನೋಂದಾಯಿಸಿ ಕೆಳಕಂಡ ದಿನಾಂಕದೊಳಗೆ ಆನ್ ಲೈನ್ ಮುಖಾಂತರ ಶುಲ್ಕ ಪಾವತಿಸಲು ತಿಳಿಸಿದೆ.

ಮಾರ್ಚ್-2025ರ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಹಾಜರಾತಿ ಕೊರತೆ ಇರುವ ಕಾರಣ 2025ರ ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಯಾಗಿ (CCEPF) ಹಾಜರಾಗಲು ನೋಂದಣಿ ಶುಲ್ಕ ಹಾಗೂ ಅರ್ಜಿ ಶುಲ್ಕ (ಪ್ರತಿ ಅಭ್ಯರ್ಥಿಗೆ) 236 ರೂ.ಗಳು.

ಮಾರ್ಚ್-2025ರ ಪರೀಕ್ಷೆ-1ಕ್ಕೆ ನೋಂದಾಯಿಸಿ ಕೊಂಡು ಹಾಜರಾತಿ ಕೊರತೆಯಿಂದಾಗಿ ಮೇ-2025ರ ಪರೀಕ್ಷೆ-2ಕ್ಕೆ ಹಾಜರಾಗುವ ಖಾಸಗಿ ಅಭ್ಯರ್ಥಿಗಳ ನೋಂದಣಿ ಮತ್ತು ಆನ್ ಲೈನ್ ಮುಖಾಂತರ ವಿವರಗಳನ್ನು ಅಪ್ ಲೋಡ್ ಮಾಡುವುದಕ್ಕೆ ನಿಗದಿಪಡಿಸಿರುವ ದಿನಾಂಕ 3/5/2025 ರಿಂದ 10/5/2025 ಆಗಿದೆ.

ಶಾಲಾ ಲಾಗಿನ್‌ನಲ್ಲಿ ಚಲನ್ ಜನರೇಟ್ ಮಾಡಿಕೊಂಡು ದಿನಾಂಕ ಬ್ಯಾಂಕ್‌ಗೆ ಶುಲ್ಕ ಪಾವತಿಸುವುದಕ್ಕೆ ನಿಗದಿಪಡಿಸಿರುವ ದಿನಾಂಕ 12/5/2025 ರಿಂದ 15/5/2025 ಆಗಿದೆ. ಶಾಲಾ ಮುಖ್ಯೋಪಾದ್ಯಾಯರ ಮುಖಾಂತರ ವಿದ್ಯಾರ್ಥಿಗಳ/ ಪೋಷಕರ ಗಮನಕ್ಕೆ ತಂದು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಲು ಈ ಮೂಲಕ ಸೂಚಿಸಿದೆ. ಅಂತಿಮ ದಿನಾಂಕದ ನಂತರ ನೋಂದಣಿಗೆ ಅವಕಾಶವಿರುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+