SSLC ಫೇಲ್‌ ಆದವರಿಗೆ ಸುವರ್ಣಾವಕಾಶ: ಪರೀಕ್ಷೆ-2ರ ಸಂಪೂರ್ಣ ಶುಲ್ಕ ಸರ್ಕಾರವೇ ಭರಿಸಲಿದೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಪ್ರಕಟಿಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಫಲಿತಾಂಶದಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ನಿರಾಸೆಗೊಂಡು ತಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಬಾರದು ಎಂಬ ಉದ್ದೇಶದಿಂದ, ಪರೀಕ್ಷೆ-2ಕ್ಕೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಸರ್ಕಾರವೇ ಸಂಪೂರ್ಣವಾಗಿ ಭರಿಸಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, "ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಪ್ರತಿಯೊಬ್ಬ ವಿದ್ಯಾರ್ಥಿಯೂ ಕಡ್ಡಾಯವಾಗಿ ಮುಂಬರುವ ಪರೀಕ್ಷೆ-2 ಅನ್ನು ಬರೆಯಬೇಕು. ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವುದು ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಜವಾಬ್ದಾರಿಯಾಗಿದೆ. ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಆರ್ಥಿಕ ಹೊರೆಯಾಗಬಾರದು ಎಂಬ ಸದುದ್ದೇಶದಿಂದ, ವಿದ್ಯಾರ್ಥಿಗಳು ಪಾವತಿಸಬೇಕಿದ್ದ ಶುಲ್ಕವನ್ನು ಈ ಬಾರಿ ಸರ್ಕಾರವೇ ಪಾವತಿಸಲು ನಿರ್ಧರಿಸಿದೆ" ಎಂದು ಸ್ಪಷ್ಟಪಡಿಸಿದ್ದಾರೆ.

SSLC

ಅನುತ್ತೀರ್ಣರಾದ ವಿದ್ಯಾರ್ಥಿಗಳ ಅಂಕಿ-ಅಂಶ

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ರಾಜ್ಯವು ಉತ್ತಮ ಉತ್ತೀರ್ಣ ಪ್ರಮಾಣವನ್ನು ಕಂಡಿದ್ದರೂ, ಒಟ್ಟು 45,415 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ. ಸಚಿವರು ನೀಡಿದ ವಿವರಗಳ ಪ್ರಕಾರ, 20,691 ವಿದ್ಯಾರ್ಥಿಗಳು ಕೇವಲ ಒಂದು ವಿಷಯದಲ್ಲಿ ಫೇಲ್ ಆಗಿದ್ದರೆ, 10,509 ಮಂದಿ ಎರಡು ವಿಷಯಗಳಲ್ಲಿ, 6,103 ಮಂದಿ ಮೂರು ವಿಷಯಗಳಲ್ಲಿ, 3,799 ಮಂದಿ ನಾಲ್ಕು ವಿಷಯಗಳಲ್ಲಿ, 2,552 ಮಂದಿ ಐದು ವಿಷಯಗಳಲ್ಲಿ ಹಾಗೂ 1,716 ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ. ಈ ಎಲ್ಲರೂ ಕಡ್ಡಾಯವಾಗಿ ಎರಡನೇ ಪರೀಕ್ಷೆಗೆ ನೋಂದಾಯಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ಬ್ರೇಕ್, ಉಲ್ಲಂಘಿಸಿದರೆ ಕ್ರಮ; ಮಾರ್ಗಸೂಚಿಗಳೇನೇನು?
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ಬ್ರೇಕ್, ಉಲ್ಲಂಘಿಸಿದರೆ ಕ್ರಮ; ಮಾರ್ಗಸೂಚಿಗಳೇನೇನು?

ಶಿಕ್ಷಣ ಇಲಾಖೆಯ ಖಡಕ್ ಸೂಚನೆ

ಪರೀಕ್ಷೆಯ ಫಲಿತಾಂಶದಿಂದಾಗಿ ಯಾವುದೇ ವಿದ್ಯಾರ್ಥಿಯು ನಿರಾಸೆಗೊಂಡು ಶಿಕ್ಷಣವನ್ನು ನಿಲ್ಲಿಸಬಾರದು ಎಂಬುದು ಸರ್ಕಾರದ ದೃಢ ನಿಲುವಾಗಿದೆ. ಈ ಹಿನ್ನೆಲೆಯಲ್ಲಿ, ಅನುತ್ತೀರ್ಣರಾಗಿರುವ ಎಲ್ಲ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿಗಳು ಕಡ್ಡಾಯವಾಗಿ 'ಪರೀಕ್ಷೆ-2'ಗೆ ನೋಂದಾಯಿಸುವಂತೆ ನೋಡಿಕೊಳ್ಳಬೇಕು. ಜೊತೆಗೆ ಅವರನ್ನು ಶೈಕ್ಷಣಿಕವಾಗಿ ಮತ್ತಷ್ಟು ಉತ್ತಮವಾಗಿ ಸಜ್ಜುಗೊಳಿಸಲು ಅಗತ್ಯವಿರುವ ಎಲ್ಲ ಪೂರಕ ಕ್ರಮಗಳನ್ನು ತಕ್ಷಣವೇ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ (DDPI) ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿಯಲ್ಲಿ ಸಂತೆಬೆನ್ನೂರು ವಿದ್ಯಾರ್ಥಿನಿಗೆ 90ರ ಬದಲಿಗೆ ಸಿಕ್ಕಿದ್ದು ಕೇವಲ 46 ಅಂಕ
ಎಸ್‌ಎಸ್‌ಎಲ್‌ಸಿಯಲ್ಲಿ ಸಂತೆಬೆನ್ನೂರು ವಿದ್ಯಾರ್ಥಿನಿಗೆ 90ರ ಬದಲಿಗೆ ಸಿಕ್ಕಿದ್ದು ಕೇವಲ 46 ಅಂಕ

ಸಾಮಾನ್ಯವಾಗಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ (ಇದೀಗ ಪರೀಕ್ಷೆ-2) ಹಾಜರಾಗುವ ವಿದ್ಯಾರ್ಥಿಗಳು ಪ್ರತಿ ವಿಷಯಕ್ಕೂ ನಿರ್ದಿಷ್ಟ ಮೊತ್ತದ ಶುಲ್ಕವನ್ನು ಪಾವತಿಸಬೇಕಿತ್ತು. ಇದು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೊರೆಯಾಗುತ್ತಿತ್ತು. ಆದರೆ, ಈಗ ಈ ಉಚಿತ ಅವಕಾಶ ನೀಡಿರುವುದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಕೇವಲ ತೇರ್ಗಡೆಯಾಗಿದ್ದು, ಅಂಕಗಳನ್ನು ಸುಧಾರಿಸಿಕೊಳ್ಳಲು ಬಯಸುವವರು ಮಾತ್ರ ನಿಗದಿತ ಶುಲ್ಕ ಪಾವತಿಸಬೇಕಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+