ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು, ನ.13 : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2015ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ. ಮಾ.30ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಏಪ್ರಿಲ್ 13ರವರೆಗೆ ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು ಪರೀಕ್ಷೆಯ ಪ್ರಾರಂಭದಲ್ಲಿ 15 ನಿಮಿಷಗಳ ಕಾಲಾವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಾರ್ಯದರ್ಶಿ ಎಚ್.ಮಂಜುನಾಥ್ ಪತ್ರಿಕಾಪ್ರಕಟಣೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು ಪರೀಕ್ಷೆಯ ಪ್ರಾರಂಭದಲ್ಲಿ 15 ನಿಮಿಷಗಳ ಕಾಲಾವಕಾಶವನ್ನು ಕಲ್ಪಿಸಲಾಗಿದೆ.

ಜೂನಿಯರ್ ಟೆಕ್ನಿಕಲ್ ಶಾಲಾ ಅಭ್ಯರ್ಥಿಗಳಿಗೆ ಏ.15ರಂದು ಆಯಾ ಶಾಲೆಗಳಲ್ಲಿಯೇ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ.30ರಂದು ಪರೀಕ್ಷೆಗಳು ಆರಂಭವಾಗಲಿದ್ದು, ಏ.13ರ ತನಕ ನಡೆಯಲಿವೆ.
ವೇಳಾಪಟ್ಟಿ ಇಲ್ಲಿದೆ ನೋಡಿ
ಮಾರ್ಚ್ 30 ರಂದು : ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)ಸಮಯ: ಬೆ.9.30ರಿಂದ ಮ.12.30
ಏಪ್ರಿಲ್ 1 : ವಿಜ್ಞಾನ ( ಬೆ.9.30 ರಿಂದ ಮ.12.30), ಭಾರತೀಯ ರಾಜ್ಯಶಾಸ್ತ್ರ ಮತ್ತು ಪೌರನೀತಿ ( ಬೆ.9.30ರಿಂದ ಮ.12.30), ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ (ಮ.2ರಿಂದ ಸಂ.5)
ಏಪ್ರಿಲ್ 4 : ಎಲಿಮೆಂಟ್ಸ್ ಆಫ್ ಎಂಜಿನಿಯರಿಂಗ್ (ಬೆ.9.30ರಿಂದ ಮ.12.15), ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ (ಬೆ.9.30ರಿಂದ ಮ.12.45), ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ (ಬೆ.9.30ರಿಂದ ಮ.12.45), ಭಾರತೀಯ ಅರ್ಥಶಾಸ್ತ್ರ ( ಬೆ.9.30ರಿಂದ ಮ.12.30), ಎಂಜಿನಿಯರಿಂಗ್ ಡ್ರಾಯಿಂಗ್ (ಮ.2ರಿಂದ ಸಂ.5.15)
ಏಪ್ರಿಲ್ 6 : ಗಣಿತ (ಬೆ.9.30ರಿಂದ ಮ.12.30), ಭಾರತೀಯ ಸಮಾಜಶಾಸ್ತ್ರ (ಬೆ.9.30ರಿಂದ ಮ.12.30)
ಏಪ್ರಿಲ್ 8 : ದ್ವಿತೀಯ ಭಾಷೆ - ಇಂಗ್ಲಿಷ್, ಕನ್ನಡ (ಬೆ.9.30ರಿಂದ ಮ.12),
ಏಪ್ರಿಲ್ 10 : ತೃತೀಯ ಭಾಷೆ - ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು (ಬೆ.9.30ರಿಂದ ಮ.12)
ಏಪ್ರಿಲ್ 13 : ಸಮಾಜ ವಿಜ್ಞಾನ (ಬೆ.9.30ರಿಂದ ಮ.12.30).
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications