ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟ

|
Google Oneindia Kannada News

ಬೆಂಗಳೂರು, ಮೇ 18: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟವಾಗಿದೆ. ಒಟ್ಟು 8,48,196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜೂನ್ 25 ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ.

Karnataka SSLC Exam 2020 Dates Announced

ಲಾಕ್‌ಡೌನ್‌ನಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂಗ್ಲಿಷ್, ಸಮಾಜ ವಿಜ್ಞಾನ, ಗಣಿತ, ವಿಜ್ಞಾನ, ಒಟ್ಟು ನಾಲ್ಕು ವಿಷಯಗಳಿಗೆ ಒಂದೊಂದು ದಿನದ ಅಂತರ ಮಾತ್ರ ಇರುತ್ತದೆ. ಒಟ್ಟು ಹತ್ತು ದಿನಗಳ ಪರೀಕ್ಷೆ ಇದಾಗಿರಲಿದೆ.

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ದಿನಾಂಕ ಪ್ರಕಟದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ದಿನಾಂಕ ಪ್ರಕಟ

ಕೆಲವು ತಜ್ಞರು ಪರೀಕ್ಷೆ ಬೇಡ ಎಂದು ಅಭಿಪ್ರಾಯಪಟ್ಟಿದ್ದರು. ಆದರೆ ಪರೀಕ್ಷೆ ನಡೆಸಬೇಕೆಂಬುದು ಸರ್ಕಾರದ ನಿಲುವು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ಒಂದು ತಿಂಗಳ ನಂತರ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಮೌಲ್ಯಮಾಪನಕ್ಕೆ ಒಂದು ತಿಂಗಳ ಕಾಲಾವಕಾಶ ಬೇಕಿದೆ. ಫಲಿತಾಂಶ ಬಳಿಕ ಸಪ್ಲಿಮೆಂಟರಿ ಪರೀಕ್ಷೆ ನಡೆಸಲಾಗುತ್ತದೆ ಎಂದರು.

ಎಲ್ಲೆಲ್ಲಿ ಪರೀಕ್ಷಾ ಕೇಂದ್ರಗಳು ಆರಂಭವಾಗಲಿವೆಯೋ ಅಂತಹ ಕಡೆ ಈಗಾಗಲೇ ಪರೀಕ್ಷೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. 2879 ಕೇಂದ್ರಗಳಲ್ಲಿ 848196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪ್ರತಿದಿನವು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಪರೀಕ್ಷೆ ಬರೆಯಲು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 43720 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣಾ ಸ್ಕ್ರೀನ್ ಜತೆಗೆ ಸ್ಯಾನಿಟೈಸರ್ ವ್ಯವಸ್ಥೆಯನ್ನು ಮಾಡಲಾಗುವುದು, ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಮೇಲ್ವಿಚಾರಕರು ಶಿಕ್ಷಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

English summary
The Karnataka Education Minister, S Suresh Kumar informed that Karnataka SSLC Exam 2020 Held From June 15 to July 4 .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X