ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

BREAKING: ಭರವಸೆ ಮೂಡಿಸಿದ ಹೈಕೋರ್ಟ್‌ ತೀರ್ಪು: ಶಿಕ್ಷಣ ಸಚಿವ ಸುರೇಶ್ ಕುಮಾರ್

|
Google Oneindia Kannada News

ಬೆಂಗಳೂರು, ಜು. 12: "ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಉಚ್ಚ ನ್ಯಾಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ" ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.

"ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ ಮತ್ತು ರಾಜ್ಯ ಆರೋಗ್ಯ ಇಲಾಖೆ ರೂಪಿಸಿದ ಮಾರ್ಗಸೂಚಿ ಪಾಲನೆಗಳಂತಹ ಉಪಕ್ರಮಗಳ ಕುರಿತಂತೆ ಸರ್ಕಾರದ ವೈಜ್ಞಾನಿಕ ಆಲೋಚನೆಗಳನ್ನು ಪುರಸ್ಕರಿಸಿದೆ. ಇದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಕ್ರಮವಾಗಿದೆ ಎಂದಿರುವ ಹೈಕೋರ್ಟ್, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದನ್ನು ತುಂಬು ಮನಸ್ಸಿನಿಂದ ಶ್ಲಾಘಿಸಿದೆ" ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

"ಇದು ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ ಸಕಾಲಿಕ ನಿರ್ಧಾರವನ್ನು ಕೈಗೊಂಡಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದ್ದು, ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿದೆ. ಕಳೆದ ವರ್ಷವೂ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧದಲ್ಲಿ ಇದೇ ರೀತಿಯಲ್ಲಿ ಹೈಕೋರ್ಟ್ ತೀರ್ಪು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿದಾರರ ಸಲ್ಲಿಸಿದ್ದ ಎಸ್.ಎಲ್.ಪಿ. ಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿ, ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು ರಾಜ್ಯದ ಕ್ರಮವನ್ನು ಪುರಸ್ಕರಿಸಿತ್ತು" ಎಂದು ಅವರು ನೆನಪಿಸಿಕೊಂಡಿದ್ದಾರೆ.

Karnataka SSLC Exam 2021: Education Minister S Suresh Kumar Welcomes High Court order

Recommended Video

ಕಷ್ಟಕ್ಕೆ ಸ್ಪಂದಿಸೋ ರಾಜಕಾರಣಿ Zameer Ahmed Khan! | oneindia kannada

ಹೈಕೋರ್ಟ್‌ ತೀರ್ಪು: ಕೋವಿಡ್ 19 ಸಾಂಕ್ರಾಮಿಕದ ನಡುವೆ ಎಸ್ಎಲ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ, ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿತ್ತು. ನ್ಯಾ. ಬಿವಿ ನಾಗರತ್ನ ಹಾಗೂ ನ್ಯಾ. ಎಚ್ ಸಂಜೀವ್ ಕುಮಾರ್ ಅವರ ನ್ಯಾಯಪೀಠವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಸೂಕ್ತ, ಸರ್ಕಾರ ಕೈಗೊಂಡ ಮಾರ್ಗಸೂಚಿಗಳು ಸಮರ್ಪಕವಾಗಿದೆ ಎಂದು ಪರಿಗಣಿಸಿತ್ತು. ಜೊತೆಗೆ 2ನೇ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ ಎಂದು ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದು ಎಂಬ ವಾದವನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತೀರ್ಪು ನೀಡಿತ್ತು.

English summary
Karnataka SSLC Exam 2021: Education Minister S Suresh Kumar Welcomes High Court order says it boost confidence in education dept and students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X