ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿವರ: ಕರ್ನಾಟಕದಲ್ಲಿ ಹೇಗೆ ನಡೆಸಲಾಗುತ್ತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ?

|
Google Oneindia Kannada News

ಬೆಂಗಳೂರು, ಜೂನ್ 04: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ನಡುವೆಯೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಕ್ಕೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅಧಿಕೃತವಾಗಿ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಛಿ ನಡೆಸಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಬೇಕೋ ಬೇಡವೋ ಎಂಬ ಬಗ್ಗೆ ಶಿಕ್ಷಣ ತಜ್ಞರು, ಸಚಿವರು, ಹಿರಿಯ ಪತ್ರಕರ್ತರು, ಪೋಷಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ ಎಂದರು.

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ: ಸುರೇಶ್ ಕುಮಾರ್ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ: ಸುರೇಶ್ ಕುಮಾರ್

ರಾಜ್ಯದಲ್ಲಿ ಕೊವಿಡ್-19 ಸವಾಲಿನ ನಡುವೆ ಕಟ್ಟುನಿಟ್ಟಿನ ಕ್ರಮಗಳ ನಡುವೆ ಎರಡು ಪರೀಕ್ಷೆಗಳನ್ನು ನಡೆಸುವುದಕ್ಕೆ ನಿರ್ಧರಿಸಲಾಗಿದೆ. ಜುಲೈ ತಿಂಗಳ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ. ಈ ಬಾರಿ 8.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಎರಡು ಪರೀಕ್ಷೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಎರಡು ಪರೀಕ್ಷೆ

ಕರ್ನಾಟಕದಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಎರಡು ವಿಭಾಗಗಳಾಗಿ ಪರೀಕ್ಷೆ ನಡೆಸುವುದಕ್ಕೆ ಸರ್ಕಾರ ತೀರ್ಮಾನಿಸಿದೆ. ಒಂದನೇ ಭಾಗದಲ್ಲಿ ವಿಜ್ಞಾನ, ಗಣಿತ, ಮತ್ತು ಸಮಾಜ ವಿಜ್ಞಾನ ವಿಷಯದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪ್ರಶ್ನೆ ಪತ್ರಿಕೆಯಿಂದ ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿ ಯಾವ ವಿಷಯವನ್ನು ಆಯ್ಕೆ ಮಾಡಿಕೊಳ್ಳುವುದು ಸೂಕ್ತ ಎಂಬ ಬಗ್ಗೆ ನಿರ್ಧರಿಸುವುದಕ್ಕೆ ಸುಲಭವಾಗಿರುತ್ತದೆ. ಎರಡನೇ ವಿಭಾಗದಲ್ಲಿ ಐಚ್ಛಿಕ ವಿಷಯದ ಪ್ರಶ್ನೆ ಪತ್ರಿಕೆಯಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲ

ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದರ ಹಿಂದೆ ಯಾರನ್ನೂ ಉನುತ್ತೀರ್ಣಗೊಳಿಸುವ ಉದ್ದೇಶವಿಲ್ಲ. ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳನ್ನು ಕ್ರೂಢೀಕರಿಸಿದ ಸರಳ ಮತ್ತು ನೇರ ಪ್ರಶ್ನೆಗಳನ್ನು ಪ್ರಶ್ನೆ ಪತ್ರಿಕೆ ಒಳಗೊಂಡಿರುತ್ತದೆ. ಬಹು ಆಯ್ಕೆ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಲಾಗಿರುತ್ತದೆ. ಒಂದು ಪ್ರಶ್ನೆಗೆ ನಾಲ್ಕು ಉತ್ತರಗಳನ್ನು ಕೆಳಗೆ ನೀಡಲಾಗಿರುತ್ತದೆ. ಈ ಪೈಕಿ ಒಂದು ಉತ್ತರವನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಬಹುದಾಗಿದೆ.

ಪರೀಕ್ಷಾ ಕೊಠಡಿಯಲ್ಲಿ ಕೊವಿಡ್-19 ನಿಯಮ ಪಾಲನೆ

ಪರೀಕ್ಷಾ ಕೊಠಡಿಯಲ್ಲಿ ಕೊವಿಡ್-19 ನಿಯಮ ಪಾಲನೆ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಲ್ಲಿ ಮೇಲ್ವಿಚಾರಕರಾಗಿ ನೇಮಿಸುವ ಪ್ರತಿಯೊಬ್ಬ ಶಿಕ್ಷಕರು ಕೊರೊನಾವೈರಸ್ ಲಸಿಕೆಯನ್ನು ಪಡೆದುಕೊಂಡಿರಬೇಕು ಎಂಬ ನಿಯಮವನ್ನು ರೂಪಿಸಲಾಗಿದೆ. ಒಂದು ಪರೀಕ್ಷಾ ಕೊಠಡಿಯಲ್ಲಿ 10 ರಿಂದ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿರುತ್ತದೆ. 6 ಅಡಿ ಸಾಮಾಜಿಕ ಅಂತರವನ್ನು ಕಾಪಾಡುವ ಉದ್ದೇಶದಿಂದ ಒಂದು ಬೆಂಚಿಗೆ ಒಬ್ಬ ವಿದ್ಯಾರ್ಥಿಯನ್ನು ಮಾತ್ರ ಕೂರಿಸುವ ವ್ಯವಸ್ಥೆ ಮಾಡಲಾಗಿದೆ. ಇದರ ಹೊರತಾಗಿ ಸ್ಯಾನಿಟೈಸರ್ ಮತ್ತು ವಿದ್ಯಾರ್ಥಿ ಹಾಗೂ ಸಿಬ್ಬಂದಿಯು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

Recommended Video

Virat ಆಟ ನೋಡಿದ್ರೆ ನನಗೆ ಹೆಮ್ಮೆ ಅನಿಸುತ್ತೆ ಎಂದ ಪಾಕ್ ನಾಯಕ.. ಆದರೆ? | Oneindia Kannada
ತಮ್ಮೂರಿನ ಹತ್ತಿರದ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ತಮ್ಮೂರಿನ ಹತ್ತಿರದ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ವಿದ್ಯಾರ್ಥಿಗಳು ಕೂಡ ತಮ್ಮ ತಮ್ಮ ಊರಿಗೆ ವಾಪಸ್ ಹೋಗಿದ್ದಾರೆ. ದೂರದ ಊರಿನಲ್ಲಿ ಇರುವ ಶಾಲೆಗೆ ತೆರಳಿ ಪರೀಕ್ಷೆ ಬರೆಯುವುದಕ್ಕೆ ಸಾಧ್ಯವಾಗುವುದಿಲ್ಲ. ಇಂಥ ವಿದ್ಯಾರ್ಥಿಗಳನ್ನು ಗಮನದಲ್ಲಿ ಇಟ್ಟುಕೊಂಡು ವಿಶೇಷ ಕ್ರಮ ತೆಗೆದುಕೊಳ್ಳಲಾಗಿದೆ. ತಮ್ಮೂರಿಗೆ ಹತ್ತಿರದಲ್ಲಿ ಇರುವ ಪರೀಕ್ಷಾ ಕೇಂದ್ರದಲ್ಲೇ ಆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

English summary
Karnataka SSLC Exam 2021: examinations for 8.75 lakh students will be held in July third week said minister S Suresh Kumar. Two papers only -1 Core subjects (Science, Maths, Social Science) combined in MCQ pattern. 2. Languages.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X