ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

SSLC ಪರೀಕ್ಷೆ 2021: ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

|
Google Oneindia Kannada News

ಬೆಂಗಳೂರು, ಜೂನ್ 23: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಾರ್ಗಸೂಚಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಜುಲೈ ತಿಂಗಳಿನಲ್ಲಿ ನಡೆಯುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಪ್ರತಿಯೊಬ್ಬ ಶಿಕ್ಷಕರು ಇದರ ಪ್ರಕಾರ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

CBSE, ICSE: 12ನೇ ತರಗತಿ ಪರೀಕ್ಷೆ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾCBSE, ICSE: 12ನೇ ತರಗತಿ ಪರೀಕ್ಷೆ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಪರೀಕ್ಷೆಯನ್ನು ಉತ್ತಮವಾಗಿ ಹಾಗೂ ಆರೋಗ್ಯಕರ ವಾತಾವರಣದಲ್ಲಿ ನಡೆಸುವ ಸಲುವಾಗಿ ಜೂ.28 ರಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್‌ಪಿಗಳು, ಡಿಎಚ್‌ಒ, ಖಜಾನಾಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ.

Karnataka SSLC Exam 2021: Karnataka Government Released Guidelines

ಪರೀಕ್ಷೆಯ ಕೆಲಸಗಳಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಹಾಗೂ ಅಧಿಕಾರಿಗಳು ಜಿಲ್ಲಾಡಳಿತದ ಸಹಾಯದೊಂದಿಗೆ ಕೊರೊನಾ ಲಸಿಕೆ ಕಡ್ಡಾಯವಾಗಿ ಪಡೆಯಬೇಕು. ಪರೀಕ್ಷೆಯ ಸಂದರ್ಭದಲ್ಲಿ ಒಂದು ಡೋಸ್ ಲಸಿಕೆಯನ್ನಾದರೂ ಪಡೆದಿರಬೇಕು ಎಂದು ಸೂಚಿಸಲಾಗಿದೆ.

ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಒಪಿ ಅನುಷ್ಠಾನಗೊಳಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರೀಕ್ಷೆಯ ಮೊದಲು ಪರಿಶೀಲಿಸುವುದು ಮತ್ತು ಅನುಷ್ಠಾನವನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಬೇಕು.

ಒಂದೊಮ್ಮೆ ವಿದ್ಯಾರ್ಥಿಗಳು ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರೆ ಅಂಥವರಿಗೆ ವಿಶೇಷ ಕೊಠಡಿ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರದ ಪ್ರವೇಶವಾದೊಡನೆ ನೇರವಾಗಿ ಆರೋಗ್ಯ ತಪಾಸಣಾ ಕೌಂಟರ್ ಪ್ರವೇಶಿಸುವಂತೆ ನಿರ್ದೇಶಿಸುವುದು.

ಪ್ರತಿದಿನವೂ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ಪರೀಕ್ಷೆ ನಂತರ ಸೋಂಕು ನಿವಾರಕ ದ್ರಾವಣದಿಂದ ಸ್ಥಳೀಯಾಡಳಿತ ಸಂಸ್ಥೆಗಳ ನೆರವಿನಿಂದ ಪರೀಕ್ಷಾ ಕೇಂದ್ರ, ಪರೀಕ್ಷಾ ಕೊಠಡಿ, ಪೀಠೋಪಕರಣ ಮತ್ತು ಶೌಚಾಲಯಗಳನ್ನು ಸ್ಯಾನಿಟೈಜೇಷನ್ ಮಾಡುಬೇಕಿದೆ ಪರೀಕ್ಷಾ ಕೇಂದ್ರಕ್ಕೆ ಆಗಮನ ಮತ್ತು ನಿರ್ಗಮನ ಹಾಗೆಯೇ ಕೊಠಡಿ ಪ್ರವೇಶ ಸಮಯದಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳುವುದು.

Recommended Video

ತಿಹಾರ್ ಜೈಲಿನಲ್ಲಿ ಸಹಾಯ ಮಾಡಿದ ಕೈದಿಗಳಿಗೆ ಹೊಸ ಜೀವನ ಕಟ್ಟಿಕೊಟ್ಟ ಡಿಕೆ ಶಿವಕುಮಾರ್ | Oneindia Kannada

ಆರೋಗ್ಯ ಕೌಂಟರ್‌ಗಳು ಬೆಳಗ್ಗೆ 8.30ಕ್ಕೆ ಅರಂಭವಾಗಿ ಪರೀಕ್ಷಾ ಪ್ರಕ್ರಿಯೆ ಮುಗಿಯುವ ತನಕ ತೆರದಿರಲಿವೆ. ಪಲ್ಸ್ಆಕ್ಸಿಮೀಟರ್, ಥರ್ಮಲ್ ಸ್ಕ್ಯಾನಿಂಗ್, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳಿರುವುದನ್ನು ಖಾತರಿಪಡಿಸಬೇಕೆಂದು ಸೂಚಿಸಲಾಗಿದೆ. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್‌ನಲ್ಲೇ ಮಾಸ್ಕ್ ನೀಡಲಾಗುತ್ತದೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

English summary
Karnataka Education Minister S Suresh Kumar Released Guidelines For SSLC Exam 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X