ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

SSLC Exam 2021: ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ

|
Google Oneindia Kannada News

ಬೆಂಗಳೂರು, ಜುಲೈ 15: ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್‌ ಹೇಳಿದ್ದಾರೆ.

ಎಸ್ಎಸ್ಲ್‌ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಹಾಲ್‌ ಟಿಕೆಟ್‌ಸಿಗದೇ ಇದ್ದರೆ, ತಕ್ಷಣ ಹಾಲ್‌ ಟಿಕೆಟ್‌ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಎಲ್ಲ ಡಿಡಿಪಿಐ ಹಾಗೂ ಬಿಇಒಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧ್ಯಕ್ಷರೂ ಆಗಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಇಂದಿನಿಂದ ದ್ವಿತೀಯು ಪಿಯುಗೆ ಆನ್‌ಲೈನ್ ತರಗತಿ ಶುರುರಾಜ್ಯದಲ್ಲಿ ಇಂದಿನಿಂದ ದ್ವಿತೀಯು ಪಿಯುಗೆ ಆನ್‌ಲೈನ್ ತರಗತಿ ಶುರು

ಪೂರ್ಣ ಶುಲ್ಕ ಪಾವತಿಸದಿದ್ದರೆ ಹಾಲ್‌ ಟಿಕೆಟ್‌ ನೀಡಲಾಗುತ್ತಿಲ್ಲ ಎಂದು ಹೇಳಿ ಸಾಕಷ್ಟು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಚಿವ ಸುರೇಶ್ ಕುಮಾರ್ ಅವರು, ಯಾವುದೇ ಒಂದು ವಿದ್ಯಾರ್ಥಿಗೂ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ಸೂಚನೆ ನೀಡಿದ್ದರು.

ಕರ್ನಾಟಕ: ಪ್ರಾಧ್ಯಾಪಕರ ವರ್ಗ ಶುರು, ಜು.16ಕ್ಕೆ ತಾತ್ಕಾಲಿಕ ಪಟ್ಟಿ ಬಿಡುಗಡೆಕರ್ನಾಟಕ: ಪ್ರಾಧ್ಯಾಪಕರ ವರ್ಗ ಶುರು, ಜು.16ಕ್ಕೆ ತಾತ್ಕಾಲಿಕ ಪಟ್ಟಿ ಬಿಡುಗಡೆ

ಯಾವುದೇ ವಿದ್ಯಾರ್ಥಿ ವಾಹನ ಸೌಲಭ್ಯ ಇಲ್ಲದೆ ಪರೀಕ್ಷೆಗೆ ಗೈರು ಹಾಜರಾಗದಂತೆ ಗಮನಿಸಲು ಸೂಚಿಸಲಾಗಿದೆ. ಪ್ರವೇಶ ಪತ್ರ ತೋರಿಸಿ ಮಕ್ಕಳು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಿ ಸಾರಿಗೆ ಇಲಾಖೆ ಈಗಾಗಲೇ ಸುತ್ತೋಲೆ ಹೊರಡಿಸಿದೆ ಎಂದು ವಿವರಿಸಿದರು.

 ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ

ಜುಲೈ.19 ಮತ್ತು 22 ರಂದು ಎಸ್ಎಸ್ಎಲ್‌ಸಿ ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸಚಿವ ಸುರೇಶ್ ಕುಮಾರ್ ಅವರು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕರ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾರ್ಗದರ್ಶನ ನೀಡಿದರು.

 ಅಣಕು ಪರೀಕ್ಷೆ

ಅಣಕು ಪರೀಕ್ಷೆ

ಪರೀಕ್ಷೆಗೆ ಎರಡು ದಿನಗಳ ಮೊದಲು ಈ ಪ್ರಕ್ರಿಯೆಗೆ ನೇಮಕಗೊಂಡಿರುವ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಪರೀಕ್ಷಾ ಕೇಂದ್ರದಲ್ಲಿ ಅಣಕು ಪರೀಕ್ಷಾ ಪ್ರಕ್ರಿಯೆ ನಡೆಸಿದ್ದಾರೆ. ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕ್ಯಾನರ್ ಪೂರೈಕೆ ಸೇರಿದಂತೆ ಎಲ್ಲ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು, ಕೊಠಡಿ ಮೇಲ್ವಿಚಾರಕರು, ಪರೀಕ್ಷಾ ಕೇಂದ್ರದ ಅಧೀಕ್ಷಕರು ಸೇರಿದಂತೆ ಎಲ್ಲ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಲಾಗಿದೆ.

 ವಿದ್ಯಾರ್ಥಿಗಳಿಗೆ ಒಎಂಆರ್ ಶೀಟ್ ಕುರಿತು ಮಾಹಿತಿ ನೀಡಲಾಗಿದೆ

ವಿದ್ಯಾರ್ಥಿಗಳಿಗೆ ಒಎಂಆರ್ ಶೀಟ್ ಕುರಿತು ಮಾಹಿತಿ ನೀಡಲಾಗಿದೆ

ಮಕ್ಕಳಿಗೆ ಪರೀಕ್ಷಾಂಗಣ ಸುರಕ್ಷತೆ ಮತ್ತು ಆತ್ಮವಿಶ್ವಾಸ ಮೂಡಿಸಲು ಕ್ರಮ ವಹಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳಿಗೂ ಒಎಂಆರ್ ಶೀಟ್ ಕುರಿತು ತಿಳಿವಳಿಕೆ ಮೂಡಿಸಲಾಗಿದೆ. ಪರೀಕ್ಷಾ ಕೊಠಡಿಯಲ್ಲೂ ಮೇಲ್ವಿಚಾರಕರು ಮಾರ್ಗದರ್ಶನ ನೀಡಲಿದ್ದಾರೆ. ಪರೀಕ್ಷೆಗೆ ಮುನ್ನ ಮತ್ತು ನಂತರ ಪರೀಕ್ಷಾ ಕೇಂದ್ರದ ಆವರಣ ಮತ್ತು ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಶೇ 100ರಷ್ಟು ಪರೀಕ್ಷಾ ಸಿಬ್ಬಂದಿ ಲಸಿಕೆ ಪಡೆದಿದ್ದಾರೆ.

Recommended Video

ಇಂದ್ರಜಿತ್ ತುಂಬಾ ದೊಡ್ಡೋರು ಪ್ರೂವ್ ಮಾಡ್ಲಿ ನೋಡೋಣ | Darshan | Indrajit Lankesh | Oneindia Kannada
 ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವುದು ಬೇಡ

ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವುದು ಬೇಡ

ಸುತ್ತೋಲೆ ಹೊರಡಿಸಿರುವ ಆಗಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್‌ ಅವರು, ಯಾವುದೇ ವಿದ್ಯಾರ್ಥಿ ಹಾಲ್‌ ಟಿಕೆಟ್‌ ಸಿಗದೆ, ಮಾನಸಿಕ ತೊಂದರೆ ಮತ್ತು ಆತಂಕಕ್ಕೆ ಒಳಗಾಗದಂತೆ ಹಾಗೂ ಪರೀಕ್ಷೆಯಿಂದ ವಂಚಿತರಾಗದಂತೆ ಆದ್ಯತೆಯ ಮೇರೆಗೆ ಜಿಲ್ಲಾ ಉಪನಿರ್ದೇಶಕರು (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಶಾಲೆಗಳ ಮುಖ್ಯಸ್ಥರು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

English summary
Karnataka Primary and Secondary Education Minister S Suresh Kumar Wednesday said the department will ensure that no student would be denied hall ticket to attend the SSLC (Class 10) exams due to non-payment of fees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X