ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka SSLC Exam 2023 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆ , ಮಾಹಿತಿ ಇಲ್ಲಿದೆ

|
Google Oneindia Kannada News

ಬೆಂಗಳೂರು, ಜನವರಿ, 19: 2022- 2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಏ.4ರಂದು ಮಹಾವೀರ ಜಯಂತಿಯಂದು ರಜೆ ಘೋಷಣೆಯಾಗಿರುವ ಹಿನ್ನೆಲೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.

ಈ ಹಿಂದೆ ಘೋಷಿಸಿದಂತೆ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಪರೀಕ್ಷೆ ನಡೆಯಲಿದ್ದು, ಏಪ್ರಿಲ್ 4 ರಂದು ನಡೆಯಬೇಕಿದ್ದ ಗಣಿತ ಮತ್ತು ಸಮಾಜಶಾಸ್ತ್ರ ಪರೀಕ್ಷೆಗಳು ಈಗ ಏಪ್ರಿಲ್ 3 ರಂದು ನಡೆಯಲಿದೆ.

Karnataka SSLC Exam 2023 Final Time Table Released

ಏಪ್ರಿಲ್ 4 ರಂದು ಸರ್ಕಾರಿ ರಜೆ ಇರುವ ಕಾರಣ ಈ ಹಿಂದೆ ಪ್ರಕಟಿಸಿದ್ದ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಿರ್ದೇಶಕ (ಪರೀಕ್ಷೆ) ಗೋಪಾಲಕೃಷ್ಣ ಎಚ್.ಎನ್ ಮಾಹಿತಿ ನೀಡಿದ್ದಾರೆ.

ಉಳಿದ ವೇಳಾಪಟ್ಟಿ ಒಂದೇ ಆಗಿರುತ್ತದೆ. ವೇಳಾಪಟ್ಟಿ ಪ್ರಕಾರ ಯಾವ ದಿನ ಯಾವ ಪರೀಕ್ಷೆ ನಡೆಯುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

Karnataka SSLC Exam 2023 Final Time Table Released

ಮಾರ್ಚ್ 31- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಪ್ರಥಮ ಭಾಷೆ)

ಏಪ್ರಿಲ್ 03- ಗಣಿತ , ಸಮಾಜ ವಿಜ್ಞಾನ

ಏಪ್ರಿಲ್ 06 ರಂದು - ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)

ಏಪ್ರಿಲ್ 08 ರಂದು - ಕೋರ್ ವಿಷಯ, ಅರ್ಥಶಾಸ್ತ್ರ

Karnataka SSLC Exam 2023 Final Time Table Released

ಏಪ್ರಿಲ್ 10 ರಂದು - ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ

ಏಪ್ರಿಲ್ 12 ರಂದು - ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು ಸಂಸ್ಕೃತ (ತೃತೀಯ ಭಾಷೆ)

English summary
Karnataka SSLC Exam 2023 Final Time Table Released. minor change to accommodate the holiday on Mahavir Jayanti. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X