Breaking: SSLC ಪರೀಕ್ಷೆ-3 ಫಲಿತಾಂಶ ಪ್ರಕಟ, ಚೆಕ್‌ ಮಾಡುವುದು ಹೇಗೆ?

ಬೆಂಗಳೂರು, ಆಗಸ್ಟ್ 26: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶವನ್ನು ಘೋಷಣೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು. ರಾಜ್ಯಾದ್ಯಂತ ಆಗಸ್ಟ್ 2 ರಿಂದ ಆಗಸ್ಟ್ 9ರ ತನಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ನಡೆಸಲಾಗಿತ್ತು. ಸೋಮವಾರ ಫಲಿತಾಂಶ ಪ್ರಕಟಿಸಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪ್ರಕಟಣೆಯಲ್ಲಿ ಆಗಸ್ಟ್ 2024ರ ಮಾಹೆಯಲ್ಲಿ ನಡೆದ ಎಸ್ಎಸ್‌ಎಲ್‌ಸಿ ಪರೀಕ್ಷೆ-3 ಅನ್ನು ದಿನಾಂಕ 02.08.2024 ರಿಂದ 09.08.2024 ರವರೆಗೆ ನಡೆಸಲಾಯಿತು.

Karnataka SSLC Exam 3 Results Announced How To Check

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ ಎಂದು ಹೇಳಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ವೆಬ್‌ಸೈಟ್‌ ಮೂಲಕ ಫಲಿತಾಂಶ ನೋಡಬಹುದು.

ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ನೋಡಬಹುದು. ಪರೀಕ್ಷೆ-3ರ ಫಲಿತಾಂಶಕ್ಕೂ ಮುನ್ನ, ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ಮತ್ತು 1 ಫಲಿತಾಂಶಗಳನ್ನು ಜುಲೈ 10 ಮತ್ತು ಮೇ 9 ರಂದು ಘೋಷಣೆ ಮಾಡಲಾಗಿತ್ತು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ಮತ್ತು 1ರಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಮತ್ತು ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ-3 ನಡೆಸಲಾಗಿತ್ತು. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಸೋಮವಾರ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದು.

2021-2022ನೇ ಸಾಲಿನ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡ CCEPF, 2022-2023ನೇ ಸಾಲಿನ ಅನುತ್ತೀರ್ಣರಾದ CCEPR, CCERR ಹಾಗೂ 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮತ್ತು 2ಕ್ಕೆ ನೋಂದಾಯಿಸಿಕೊಂಡು ಪೂರ್ಣಗೊಳಿಸಲಾಗಿಲ್ಲದ, ಗೈರು ಹಾಜರಾಗಿರುವ, ಫಲಿತಾಂಶ ಉತ್ತಮ ಪಡಿಸಿಕೊಳ್ಳಬಯಸುವ ಅರ್ಹ ಅಭ್ಯರ್ಥಿಗಳು ಪರೀಕ್ಷೆ-3 ಬರೆಯಲು ಅವಕಾಶ ನೀಡಲಾಗಿತ್ತು.

2021-22ರ ಪೂರಕ ಪರೀಕ್ಷೆ ಮತ್ತು 2022-23ನೇ ಸಾಲಿನಲ್ಲಿ ಪರೀಕ್ಷೆ ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಹಾಗೂ ಮಾರ್ಚ್/ ಏಪ್ರಿಲ್ 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮತ್ತು 2ಕ್ಕೆ ನೋಂದಾಯಿಸಿಕೊಂಡು ಪೂರ್ಣಗೊಳಿಸಲಾಗಿಲ್ಲದ ವಿದ್ಯಾರ್ಥಿಗಳ ಭಾವಚಿತ್ರ ಮತ್ತು ಸಹಿಗಳು ಮಂಡಳಿಯಲ್ಲಿ ಲಭ್ಯವಿದ್ದ ಕಾರಣ ಸದರಿ ಅಭ್ಯರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಲ್ಲಿ ಪುನ: ಇವರುಗಳ ಭಾವಚಿತ್ರ ಮತ್ತು ಸಹಿಗಳನ್ನು ಅಪ್‌ಲೋಡ್ ಮಾಡುವ ಆವಶ್ಯಕತೆ ಇಲ್ಲ ಎಂದು ತಿಳಿಸಲಾಗಿತ್ತು.

ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಪತ್ರವನ್ನು ನೀಡಲಾಗಿತ್ತು. ದಿನಾಂಕ 23.07.2024ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಶಾಲಾ ಮುಖ್ಯೋಪಾಧ್ಯಾಯರು ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸಬೇಕು ಎಂದು ಸೂಚಿಸಲಾಗಿತ್ತು.

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ಕ್ಕೆ ಒಟ್ಟು 97,933 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ 459 ವಿದ್ಯಾರ್ಥಿಗಳು ಹಿಂದಿನ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿದ್ದರು. ಆದರೆ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಮತ್ತೆ ಪರೀಕ್ಷೆ ತೆಗೆದುಕೊಂಡಿದ್ದರು. ಒಟ್ಟು 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+