ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

SSLC ಫಲಿತಾಂಶ: ಮಾಹಿತಿ ಕೊಟ್ಟ ಸಚಿವ ಸುರೇಶ್ ಕುಮಾರ್

|
Google Oneindia Kannada News

ಬೆಂಗಳೂರು, ಜುಲೈ 20: ಆಗಸ್ಟ್ ಮೊದಲ ವಾರದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಹೊರಬೀಳಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Recommended Video

ಅಜ್ಜಿಯ ಬಳಿ ದುಡ್ಡಿನ ರಾಶಿ ನೋಡಿ ಎಲ್ಲರೂ ಫುಲ್ ಶಾಕ್ | Oneindia Kannada

ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ. ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ ಎಂದರು.

ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ಪೂರಕ ಪರೀಕ್ಷೆ ರದ್ದು!ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ಪೂರಕ ಪರೀಕ್ಷೆ ರದ್ದು!

ಬೆಂಗಳೂರು ನಗರದ ವಿವಿಧೆಡೆಯ ಐದು ಎಸ್​ಎಸ್​ಎಲ್​​ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆಯನ್ನು ವೀಕ್ಷಿಸಿದರು.

Karnataka SSLC Exam Result To Be Announced In August First Week

ಇತ್ತೀಚೆಗಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿತ್ತು. ಮುಂದಿನ 10 ದಿನಗಳಲ್ಲಿ ರಾಜ್ಯದ ಎಲ್ಲ ಕೇಂದ್ರಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, 8.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವ ಆಲೋಚನೆ ಹೊಂದಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಬೆಂಗಳೂರು ಮಹಾನಗರದ 28 ಕೇಂದ್ರಗಳಲ್ಲಿ ಲಾಕ್​​ಡೌನ್ ಹಿನ್ನೆಲೆಯಲ್ಲಿ ಮೌಲ್ಯಮಾಪನಕ್ಕೆ ಶೇ. 45ರಷ್ಟು ಶಿಕ್ಷಕರು ಹಾಜರಾಗಿದ್ದು, ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಮೌಲ್ಯಮಾಪನ ನಡೆಯುತ್ತಿದೆ ಎಂದು ಹೇಳಿದರು.

ಬೆಂಗಳೂರಿನ ಮಲ್ಲೇಶ್ವರದ ಸ್ಟೆಲ್ಲಾ ಮೇರಿಸ್ ಪ್ರೌಢಶಾಲೆ, ಎಂಎಲ್ಎ ಪ್ರೌಢಶಾಲೆ, ನಿರ್ಮಲಾರಾಣಿ ಪ್ರೌಢಶಾಲೆ, ರಾಜಾಜಿನಗರದ ಎಸ್​ಜೆಆರ್​​ಸಿ ಕಾಲೇಜು, ಸೇಂಟ್ ಆನ್ಸ್ ಪ್ರೌಢಶಾಲೆಗಳ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದರು.

English summary
Education Minister Suresh Kumar says that SSLC result will be announced In August First week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X