ಗೊಂದಲ ಬೇಡ, ಎಸ್ಎಸ್ಎಲ್‌ಸಿ ಫಲಿತಾಂಶ ಏ. 30ಕ್ಕೆ ಪ್ರಕಟ

Recommended Video

      ಎಸ್‌ಎಸ್‌ಎಲ್‌ಸಿ ಫಲಿತಾಂಶ ನಾಳೆ ಏಪ್ರಿಲ್ 30ರಂದು ಪ್ರಕಟ

      ಬೆಂಗಳೂರು, ಏಪ್ರಿಲ್ 29: ಪ್ರಸಕ್ತ ಸಾಲಿನ್ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಮಂಗಳವಾರ (ಏಪ್ರಿಲ್ 30) ಪ್ರಕಟವಾಗಲಿದೆ.

      ಮಂಗಳವಾರ ಬೆಳಿಗ್ಗೆ 11.30ರ ವೇಳೆಗೆ ಪ್ರೌಢಶಿಕ್ಷಣ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ಈ ವೇಳೆ ಜಿಲ್ಲಾವಾರು ಫಲಿತಾಂಶ, ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಅತ್ಯಧಿಕ ಅಂಕ ಗಳಿಸಿದವರ ವಿವರ ಮುಂತಾದವುಗಳ ಮಾಹಿತಿ ನೀಡಲಾಗುವುದು.

      ಮಧ್ಯಾಹ್ನ 1 ಗಂಟೆಯ ಬಳಿಕ ಪ್ರೌಢಶಿಕ್ಷಣ ಮಂಡಳಿಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್. ಉಮಾಶಂಕರ್ ತಿಳಿಸಿದ್ದಾರೆ.

      Karnataka SSLC exam results will be declare on April 30 sslc board

      ಈ ಬಾರಿಯೂ ಹಿಂದಿನ ವರ್ಷದಂತೆಯೇ ಎಲ್ಲ ವಿದ್ಯಾರ್ಥಿಗಳಿಗೂ ಎಸ್‌ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಬುಧವಾರದಂದು ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.

      ಪರೀಕ್ಷೆಯು ಮಾರ್ಚ್ 22ರಿಂದ ಏಪ್ರಿಲ್ 4ರವರೆಗೆ ನಡೆದಿತ್ತು. 10ನೇ ತರಗತಿ ಪರೀಕ್ಷೆ ಫಲಿತಾಂಶವು ಪ್ರಕಟವಾದ ಬಳಿಕ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ karresults.nic.in, kaceb.kar.nic.in ನಲ್ಲಿ ಲಭ್ಯವಾಗಲಿದೆ. ಮೇ 3ರಂದು ಆಯಾ ಶಾಲೆಯಲ್ಲಿ ಫಲಿತಾಂಶ ಪ್ರಕಟವಾಗಲಿದೆ.

      ರಾಜ್ಯಾದ್ಯಂತ ಒಟ್ಟು 2,847 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ರಾಜ್ಯದ ಒಟ್ಟು 5, 202 ಸರ್ಕಾರಿ, 3,244 ಅನುದಾನಿತ ಹಾಗೂ 6,004 ಅನುದಾನರಹಿತ ಶಾಲೆಗಳು ಸೇರಿ 14,450 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

      ಇದಕ್ಕೂ ಮೊದಲು ಮೇ 2ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿತ್ತು. ಎಸ್‌ಎಸ್‌ಎಲ್‌ಸಿ ಮಂಡಳಿ ನಿರ್ದೇಶಕಿ ವಿ. ಸುಮಂಗಲಾ ಅವರು ಎರಡು ಮೂರು ದಿನಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದಿದ್ದರು. ಹೀಗಾಗಿ ಈ ಮೊದಲು ಫಲಿತಾಂಶದ ದಿನಾಂಕದ ಕುರಿತು ಗೊಂದಲ ಉಂಟಾಗಿತ್ತು. ಆದರೆ, ದಿಢೀರ್ ನಿರ್ಧಾರ ಬದಲಿಸಿದ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಂಗಳವಾರವೇ ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದೆ. ಶಾಲೆಗಳಲ್ಲಿ ಮೇ 2ರಂದು ಪ್ರಕಟವಾಗಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+