SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 20 ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ದ್ವಿತೀಯ ಪಿಯುಸಿ ಮುಖ್ಯಪರೀಕ್ಷೆ ನಡೆಯಲಿದ್ದು, ಅದಾದ ಬಳಿಕ ಎಸ್‌ಎಸ್‌ಎಲ್‌ಸಿ ಮುಖ್ಯಪರೀಕ್ಷೆ ಆರಂಭವಾಗಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಈಗ ಬಿಡುಗಡೆ ಮಾಡಿರುವ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೂಡ ಅವಕಾಶ ನೀಡಿದ್ದು, ಡಿಸೆಂಬರ್ 2 ರಿಂದ ಡಿಸೆಂಬರ್ 16 ರವರೆಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 20, 2025 ಗುರುವಾರ
- ವಿಷಯ: ಪ್ರಥಮಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ.
- ಸಮಯ: ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ಗಂಟೆಯವರೆಗೆ.
- ಗರಿಷ್ಠ ಅಂಕ ; 100
ಮಾರ್ಚ್ 22, 2025 ಶನಿವಾರ
- ವಿಷಯ; ಸಮಾಜ ವಿಜ್ಞಾನ
- ಸಮಯ: ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ಗಂಟೆಯವರೆಗೆ.
- ಗರಿಷ್ಠ ಅಂಕ: 80
ಮಾರ್ಚ್ 24, 2025 ಸೋಮವಾರ
- ವಿಷಯ; ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ
- ಸಮಯ: ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ.
- ಗರಿಷ್ಠ ಅಂಕ: 80
ಮಾರ್ಚ್ 27, 2025 ಗುರುವಾರ
- ವಿಷಯ; ಗಣಿತ, ಸಮಾಜಶಾಸ್ತ್ರ
- ಸಮಯ: ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ಗಂಟೆಯವರೆಗೆ.
- ಗರಿಷ್ಠ ಅಂಕ: 80
ಮಾರ್ಚ್ 29, 2025 ಶನಿವಾರ
- ವಿಷಯ; ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
- ಸಮಯ: ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ.
- ಗರಿಷ್ಠ ಅಂಕ: 80
ಏಪ್ರಿಲ್ 1, 2025 ಮಂಗಳವಾರ
- ವಿಷಯ; ಜಿಟಿಎಸ್ ವಿಷಯಗಳು- ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ -IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್ -IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ -IV
- ಸಮಯ: ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ಗಂಟೆಯವರೆಗೆ.
- ಗರಿಷ್ಠ ಅಂಕ: 80
ಏಪ್ರಿಲ್ 2, 2025 ಬುಧವಾರ
- ವಿಷಯ; ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
- ಸಮಯ: ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ಗಂಟೆಯವರೆಗೆ.
- ಗರಿಷ್ಠ ಅಂಕ: 80












Click it and Unblock the Notifications