ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ

ಬೆಂಗಳೂರು, ಮೇ 19: ಕೊರೊನಾವೈರಸ್ ಲಾಕ್ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕವನ್ನು ಘೋಷಿಸಲಾಗಿದೆ. ಮಂಗಳವಾರದಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಪ್ರಸಕ್ತ ವರ್ಷ ಒಟ್ಟು 8,48,196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜೂನ್ 25 ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ.

Recommended Video

      ಎಸ್ಎಸ್ಎಲ್ಸಿ ಸಂಪೂರ್ಣ ಪರೀಕ್ಷಾ ವೇಳಾಪಟ್ಟಿ ವಿವರಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

      ಲಾಕ್‌ಡೌನ್‌ನಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂಗ್ಲಿಷ್, ಸಮಾಜ ವಿಜ್ಞಾನ, ಗಣಿತ, ವಿಜ್ಞಾನ, ಒಟ್ಟು ನಾಲ್ಕು ವಿಷಯಗಳಿಗೆ ಒಂದೊಂದು ದಿನದ ಅಂತರ ಮಾತ್ರ ಇರುತ್ತದೆ. ಒಟ್ಟು ಹತ್ತು ದಿನಗಳ ಪರೀಕ್ಷೆ ಇದಾಗಿರಲಿದೆ. ಒಂದು ತಿಂಗಳ ನಂತರ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಮೌಲ್ಯಮಾಪನಕ್ಕೆ ಒಂದು ತಿಂಗಳ ಕಾಲಾವಕಾಶ ಬೇಕಿದೆ. ಫಲಿತಾಂಶ ಬಳಿಕ ಸಪ್ಲಿಮೆಂಟರಿ ಪರೀಕ್ಷೆ ನಡೆಸಲಾಗುತ್ತದೆ ಎಂದರು.

      ಎಸ್ಎಸ್ಎಲ್‌ಸಿ ಪರೀಕ್ಷಾ ವೇಳಾಪಟ್ಟಿ:

      ಜೂನ್ 25ರಂದು ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ

      ಜೂನ್ 26ರಂದು ಅರ್ಥಶಾಸ್ತ್ರ

      ಜೂನ್ 27ರಂದು ಗಣಿತ ಮತ್ತು ಸಮಾಜಶಾಸ್ತ್ರ

      ಜೂ.29ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ- ಹಿಂದೂಸ್ತಾನಿ ಸಂಗೀತ

      ಜುಲೈ 1ರಂದು ಸಮಾಜ ವಿಜ್ಞಾನ

      ಜುಲೈ 2ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಮರಾಠಿ, ಹಿಂದಿ, ತಮಿಳು, ಉರ್ದು, ಸಂಸ್ಕೃತ, ಇಂಗ್ಲಿಷ್‌

      ಜುಲೈ 3ರಂದು ತೃತೀಯ ಭಾಷೆಗಳಿಗೆ ಪರೀಕ್ಷೆ

      ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಭಾಷೆಗಳ ಪರೀಕ್ಷೆ

      Karnataka SSLC Exam time table, dates announced

      ಜುಲೈ 3ರಂದು NSQF ಪರೀಕ್ಷೆಗಳು ನಡೆಯಲಿದೆ. ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್ ಪರೀಕ್ಷೆ ಕೆಲವು ತಜ್ಞರು ಪರೀಕ್ಷೆ ಬೇಡ ಎಂದು ಅಭಿಪ್ರಾಯಪಟ್ಟಿದ್ದರು.

      ಆದರೆ ಪರೀಕ್ಷೆ ನಡೆಸಬೇಕೆಂಬುದು ಸರ್ಕಾರದ ನಿಲುವು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು. ಎಲ್ಲೆಲ್ಲಿ ಪರೀಕ್ಷಾ ಕೇಂದ್ರಗಳು ಆರಂಭವಾಗಲಿವೆಯೋ ಅಂಥ ಕಡೆ ಈಗಾಗಲೇ ಪರೀಕ್ಷೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. 2879 ಕೇಂದ್ರಗಳಲ್ಲಿ 848196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

      ಪರೀಕ್ಷಾ ಸಮಯ: ಬೆಳಗ್ಗೆ 10.30 ರಿಂದ ಹಾಗೂ ಮಧ್ಯಾಹ್ನ 2 ಗಂಟೆಗೆ ಆರಂಭ, ಭಾನುವಾರ ಜೂನ್ 28 ಹಾಗೂ ಮಂಗಳವಾರ ಜೂನ್ 30ರಂದು ಪರೀಕ್ಷೆ ಇರುವುದಿಲ್ಲ. ಪ್ರತಿದಿನವು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಪರೀಕ್ಷೆ ಬರೆಯಲು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 43720 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

      ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣಾ ಸ್ಕ್ರೀನ್ ಜತೆಗೆ ಸ್ಯಾನಿಟೈಸರ್ ವ್ಯವಸ್ಥೆಯನ್ನು ಮಾಡಲಾಗುವುದು, ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಮೇಲ್ವಿಚಾರಕರು ಶಿಕ್ಷಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+